ETV Bharat / bharat

ಪುರಿ ಜಗನ್ನಾಥ ದೇವಸ್ಥಾನಕ್ಕೆ ಹರಿದು ಬಂದ ಜನಸಾಗರ: ಕಾಲ್ತುಳಿತ ಪರಿಸ್ಥಿತಿ, 20 ಭಕ್ತರಿಗೆ ಗಾಯ

Stampede Like Situation In Puri: ಒಡಿಶಾದ ಪ್ರಸಿದ್ಧ ಪುರಿ ಜಗನ್ನಾಥ ದೇವಸ್ಥಾನದಲ್ಲಿ ಇಂದು ಕಾಲ್ತುಳಿತದಂತಹ ಪರಿಸ್ಥಿತಿ ಉಂಟಾಗಿ 20 ಭಕ್ತರು ಗಾಯಗೊಂಡಿದ್ದಾರೆ.

author img

By ETV Bharat Karnataka Team

Published : Nov 10, 2023, 4:09 PM IST

ಪುರಿ ಜಗನ್ನಾಥ ದೇವಸ್ಥಾನಕ್ಕೆ ಹರಿದು ಬಂದ ಜನಸಾಗರ

ಪುರಿ (ಒಡಿಶಾ): ಒಡಿಶಾದ ಪ್ರಸಿದ್ಧ ಪುರಿ ಜಗನ್ನಾಥ ದೇವಸ್ಥಾನಕ್ಕೆ ಇಂದು ಜನಸಾಗರವೇ ಹರಿದು ಬಂದಿದೆ. ಇದರಿಂದ ದೇಗುಲದಲ್ಲಿ ಇಂದು ಬೆಳಗ್ಗೆ ನೂಕುನುಗ್ಗಲು ಹಾಗೂ ಕಾಲ್ತುಳಿತದಂತಹ ಪರಿಸ್ಥಿತಿ ಉಂಟಾಗಿದ್ದು, ಸುಮಾರು 20 ಭಕ್ತರು ಗಾಯಗೊಂಡಿದ್ದಾರೆ. ಎಲ್ಲ ಗಾಯಾಳುಗಳನ್ನು ಇಲ್ಲಿನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾರ್ತಿಕ ಮಾಸದ ಕಾರಣ ಪುರಿ ಜಗನ್ನಾಥ ದೇವಸ್ಥಾನಕ್ಕೆ ಹೆಚ್ಚಿನ ಸಂಖ್ಯೆಯ ಭಕ್ತರು ಆಗಮಿಸಿದ್ದಾರೆ. ಕಾರ್ತಿಕ ಮಾಸವು ಪುರಿ ಜಗನ್ನಾಥನ ದರ್ಶನಕ್ಕೆ ಪವಿತ್ರ ಎಂದು ಭಕ್ತರ ನಂಬಿಕೆಯಾಗಿದೆ. ಹೀಗಾಗಿ ದೇಗುಲದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಸೇರುತ್ತಾರೆ. ಇಂದು ಬೆಳಗ್ಗೆ ಸಂಭವಿಸಿದ ಘಟನೆಗೆ ಭಕ್ತರ ಭಾರಿ ನೂಕುನುಗ್ಗಲು ಕಾರಣ ಎಂದು ಶ್ರೀಜಗನ್ನಾಥ ದೇವಸ್ಥಾನದ ಆಡಳಿತದ (ಎಸ್‌ಜೆಟಿಎ) ಮುಖ್ಯ ಆಡಳಿತಾಧಿಕಾರಿ ರಂಜನ್​ ಕುಮಾರ್​ ದಾಸ್ ತಿಳಿಸಿದ್ದಾರೆ.

ನೂಕುನುಗ್ಗಲು ಪರಿಸ್ಥಿತಿಯಿಂದಾಗಿ ಕನಿಷ್ಠ 20 ಭಕ್ತರು ಗಾಯಗೊಂಡಿದ್ದಾರೆ. ಇವರಲ್ಲಿ 10 ಮಂದಿ ದೇವಸ್ಥಾನದಲ್ಲಿ ಮಂಗಳ ಆರತಿಯ ನಂತರ ಅಸ್ವಸ್ಥಗೊಂಡು ಬಿದ್ದಿದ್ದಾರೆ. ಅಸ್ವಸ್ಥಕ್ಕೆ ಒಳಗಾದವರು ಹೆಚ್ಚಾಗಿ ಹಿರಿಯ ವಯಸ್ಸಿನವರಾಗಿದ್ದಾರೆ. ಭಕ್ತರ ದಂಡು ಒಳಗೆ ನುಗ್ಗಿದ್ದರಿಂದ ಪ್ರಜ್ಞೆ ತಪ್ಪಿ ಕೆಳಗೆ ಬಿದ್ದಿದ್ದಾರೆ. ಅವರಿಗೆ ದೇವಸ್ಥಾನದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ನಂತರ ಪುರಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಮುಖ್ಯ ಆಡಳಿತಾಧಿಕಾರಿ ಮಾಹಿತಿ ನೀಡಿದ್ದಾರೆ.

ಭಕ್ತರ ದಂಡಿನಲ್ಲಿ ಪ್ರಜ್ಞೆ ತಪ್ಪಿ ಕೆಳಗೆ ಬಿದ್ದ ಜನರ ನೆರವಿಗೆ ಜಗನ್ನಾಥ ದೇವಸ್ಥಾನದ ಪೊಲೀಸರು (ಜೆಟಿಪಿ) ತಕ್ಷಣವೇ ಧಾವಿಸಿದ್ದಾರೆ. ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆ ನೀಡಿದ ಬಳಿಕ ಹಲವರನ್ನು ಬಿಡುಗಡೆ ಮಾಡಲಾಗಿದೆ. ದೇವಾಲಯದ ಒಳಗೆ ಭಕ್ತರ ಸುಗಮ ದರ್ಶನವನ್ನು ಖಚಿತಪಡಿಸಿಕೊಳ್ಳಲು ನಾವು ವ್ಯವಸ್ಥೆಯನ್ನು ಹೆಚ್ಚಿಸುತ್ತಿದ್ದೇವೆ ಎಂದು ಅವರು ವಿವರಿಸಿದ್ದಾರೆ.

ಈ ಘಟನೆ ಬಗ್ಗೆ ಪುರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಸಿಂಗ್ ಕೂಡ ಪ್ರತಿಕ್ರಿಯಿಸಿದ್ದಾರೆ. ಜಗನ್ನಾಥ ದೇವಸ್ಥಾನದಲ್ಲಿ ಇಂದು ಹೆಚ್ಚಿನ ಜನಜಂಗುಳಿ ಇತ್ತು. ಆದರೆ, ಯಾವುದೇ ಕಾಲ್ತುಳಿತ ಸಂಭವಿಸಿಲ್ಲ. ಭಕ್ತರನ್ನು ನಿಯಂತ್ರಿಸಲು ಒಟ್ಟು ಪೊಲೀಸರ 15 ತುಕಡಿಗಳನ್ನು ನಿಯೋಜಿಸಲಾಗಿದೆ. ಭಕ್ತರ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು ಪೊಲೀಸರ ಸಂಖ್ಯೆ ಹೆಚ್ಚಿಸಲಾಗುವುದು ಎಂದು ಎಸ್​ಪಿ ಹೇಳಿದ್ದಾರೆ.

ಇದೇ ಜೂನ್​ ತಿಂಗಳಲ್ಲಿ ವಿಶ್ವವಿಖ್ಯಾತ ಜಗನ್ನಾಥ ರಥಯಾತ್ರೆ ವೇಳೆ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿತ್ತು. ಇದರಿಂದ 14 ಜನರು ಗಾಯಗೊಂಡು, ಸುಮಾರು 82 ಭಕ್ತರು ಪ್ರಜ್ಞೆ ತಪ್ಪಿ ಬಿದ್ದಿದ್ದರು. ರಥ ಎಳೆಯುವ ಸಂದರ್ಭದಲ್ಲಿ ಈ ಘಟನೆ ವರದಿಯಾಗಿತ್ತು.

ಇದನ್ನೂ ಓದಿ: ಹಾಸನಾಂಬ ದೇವಾಲಯದ ಆವರಣದಲ್ಲಿ ವಿದ್ಯುತ್ ಶಾಕ್, ನೂಕುನುಗ್ಗಲು.. ಸ್ಥಳಕ್ಕೆ ಎಸ್​​​ಪಿ ಭೇಟಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.