ETV Bharat / bharat

Sanatana Dharma: 'ಸನಾತನ ಧರ್ಮ' ಹೇಳಿಕೆಗೆ ನಾನು ಬದ್ಧ, ಯಾವುದೇ ಸವಾಲು ಎದುರಿಸುವೆ: ಉದಯನಿಧಿ ಸ್ಟಾಲಿನ್​

ಸನಾತನ ಧರ್ಮ ಬಗ್ಗೆ ನಾನಾಡಿದ ಮಾತಿಗೆ ಬದ್ಧವಾಗಿದ್ದು, ಕೋರ್ಟ್​ ಅಥವಾ ಜನತಾ ಕೋರ್ಟ್​ನಲ್ಲಿ ಇದನ್ನು ಎದುರಿಸಲು ಸಿದ್ಧನಿದ್ದೇನೆ ಎಂದು ಹೇಳುವ ಮೂಲಕ ಉದಯನಿಧಿ ಸ್ಟಾಲಿನ್​ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಉದಯನಿಧಿ ಸ್ಟಾಲಿನ್​
ಉದಯನಿಧಿ ಸ್ಟಾಲಿನ್​
author img

By ETV Bharat Karnataka Team

Published : Sep 3, 2023, 11:02 PM IST

ಚೆನ್ನೈ: ತಮಿಳುನಾಡು ಸಿಎಂ ಸ್ಟಾಲಿನ್​ ಪುತ್ರ, ಸಚಿವ ಉದಯನಿಧಿ ಸ್ಟಾಲಿನ್ ಸನಾತನ ಧರ್ಮವನ್ನು ರೋಗಗಳಿಗೆ ಹೋಲಿಸಿ ಹೇಳಿಕೆ ನೀಡಿದ್ದು, ವಿವಾದಕ್ಕೆ ಕಾರಣವಾಗಿದೆ. 'ತಾನು ನೀಡಿದ ಹೇಳಿಕೆಗೆ ಬದ್ಧವಾಗಿದ್ದು, ಯಾವುದೇ ರೀತಿಯ ಸವಾಲಿಗೆ ಸಿದ್ಧ' ಎಂದು ಉದಯನಿಧಿ ಹೇಳಿದ್ದಾರೆ.

ಈ ಬಗ್ಗೆ ಎಕ್ಸ್​ನಲ್ಲಿ ಬರೆದುಕೊಂಡಿರುವ ಯುವ ಸಚಿವ, ಸನಾತನ ಧರ್ಮ ಕೊರೊನಾವೈರಸ್, ಮಲೇರಿಯಾ ಮತ್ತು ಡೆಂಗ್ಯೂ ವೈರಸ್ ಮತ್ತು ಸೊಳ್ಳೆಗಳಿಂದ ಉಂಟಾಗುವ ಜ್ವರವಿದ್ದಂತೆ. ಇಂಥದ್ದನ್ನು ಬೇರು ಸಮೇತ ಕಿತ್ತು ಹಾಕಬೇಕು. ಸನಾತನ ಜಾತಿ ಮತ್ತು ಧರ್ಮದ ಹೆಸರಿನಲ್ಲಿ ಜನರನ್ನು ವಿಭಜಿಸುತ್ತದೆ. ಇದರ ನಿರ್ಮೂಲನೆ ಮಾಡುವುದರ ಮೂಲಕ ಮಾನವೀಯತೆ ಮತ್ತು ಮಾನವ ಸಮಾನತೆಯನ್ನು ಎತ್ತಿಹಿಡಿಯಬೇಕು ಎಂದು ಹೇಳಿಕೆ ನೀಡಿದ್ದೆ. ಸನಾತನಿ ಜನರ ಮಾರಣಹೋಮಕ್ಕೆ ಕರೆ ನೀಡಿಲ್ಲ. ಈ ಬಗ್ಗೆ ಸುಳ್ಳು ಸುದ್ದಿ ಹರಡಲಾಗುತ್ತಿದೆ ಎಂದು ಉದಯ್​ನಿಧಿ ಸ್ಟಾಲಿನ್​ ಸ್ಪಷ್ಟಪಡಿಸಿದ್ದಾರೆ.

  • I never called for the genocide of people who are following Sanatan Dharma. Sanatan Dharma is a principle that divides people in the name of caste and religion. Uprooting Sanatan Dharma is upholding humanity and human equality.

    I stand firmly by every word I have spoken. I spoke… https://t.co/Q31uVNdZVb

    — Udhay (@Udhaystalin) September 2, 2023 " class="align-text-top noRightClick twitterSection" data=" ">

ಸನಾತನ ಧರ್ಮದ ಬಗ್ಗೆ ನಾನು ಹೇಳಿದ ಪ್ರತಿಯೊಂದು ಮಾತಿಗೂ ಬದ್ಧವಾಗಿದ್ದೇನೆ. ಆ ಧರ್ಮದಿಂದ ತುಳಿತಕ್ಕೊಳಗಾದವರ ಪರವಾಗಿ ಮಾತನಾಡಿದ್ದೇನೆ. ಅದರಿಂದ ಸಮಾಜದ ಮೇಲಾದ ದುಷ್ಪರಿಣಾಮಗಳ ಬಗ್ಗೆ ಹೋರಾಟ ನಡೆಸಿದ ಪೆರಿಯಾರ್ ಮತ್ತು ಅಂಬೇಡ್ಕರ್ ಅವರ ಬರಹಗಳನ್ನು ಯಾವುದೇ ವೇದಿಕೆಯಲ್ಲಿ ಪ್ರಸ್ತುತಪಡಿಸಲು ನಾನು ಸಿದ್ಧನಿದ್ದೇನೆ. ಸನಾತನ ಧರ್ಮವು ಅನೇಕ ಸಾಮಾಜಿಕ ಅನಿಷ್ಟಗಳಿಗೆ ಕಾರಣವಾಗಿದೆ ಎಂಬುದು ನನ್ನ ಅಭಿಮತ. ಹೇಳಿಕೆಗೆ ಬದ್ಧವಾಗಿದ್ದು, ಯಾವುದೇ ಸವಾಲುಗಳಿಗೂ ನಾನು ಸಿದ್ಧನಿದ್ದೇನೆ ಎಂದಿದ್ದಾರೆ.

ಸನಾತನ ಧರ್ಮವನ್ನು ಅನುಸರಿಸುತ್ತಿರುವ ಜನರ ನರಮೇಧಕ್ಕೆ ನಾನು ಎಂದಿಗೂ ಕರೆ ನೀಡಿಲ್ಲ. ಸನಾತನ ಧರ್ಮವು ಜಾತಿ ಮತ್ತು ಧರ್ಮದ ಹೆಸರಿನಲ್ಲಿ ಜನರನ್ನು ವಿಭಜಿಸುತ್ತದೆ. ಸನಾತನ ಧರ್ಮವನ್ನು ನಿರ್ಮೂಲನೆ ಮಾಡಲು ಹೇಳಿದ್ದೆ. ಇದರ ವಿರುದ್ಧ ವ್ಯಾಪಕ ಟೀಕೆ ಮಾಡಲಾಗುತ್ತಿದೆ. ಇದನ್ನು ನಾನು ನ್ಯಾಯಾಲಯ, ಜನತಾ ನ್ಯಾಯಾಲಯದಲ್ಲಿ ಎದುರಿಸಲು ಸಿದ್ಧ. ಮೊದಲು ಸುಳ್ಳು ಸುದ್ದಿಗಳನ್ನು ಹರಡುವುದನ್ನು ನಿಲ್ಲಿಸಿ ಎಂದು ಉದಯನಿಧಿ ಎಕ್ಸ್‌ನಲ್ಲಿ ಸುದೀರ್ಘ ಪೋಸ್ಟ್‌ ಮಾಡಿದ್ದಾರೆ.

ಉದಯನಿಧಿ ಹೇಳಿಕೆಗೆ ಬಿಜೆಪಿ ಖಂಡನೆ: ಉದಯನಿಧಿ ಸ್ಟಾಲಿನ್ ಹೇಳಿಕೆಯನ್ನು ಬಿಜೆಪಿ ಖಂಡಿಸಿದ್ದು, ರಾಹುಲ್ ಗಾಂಧಿ ಮೊಹಬ್ಬತ್ ಕಿ ದುಕಾನ್ ಬಗ್ಗೆ ಮಾತನಾಡುತ್ತಾರೆ. ಆದರೆ, ಅದರ ಮಿತ್ರ ಪಕ್ಷವಾದ ಡಿಎಂಕೆ ನಾಯಕ ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಕರೆ ನೀಡಿದ್ದಾರೆ. ಕಾಂಗ್ರೆಸ್‌ ಈ ಬಗ್ಗೆ ಮೌನ ವಹಿಸಿದ್ದು, ನರಮೇಧದ ಕರೆಗೆ ಬೆಂಬಲ ನೀಡಿದಂತಿದೆ ಎಂದು ಟೀಕಿಸಿದೆ.

ಇದನ್ನೂ ಓದಿ: Sanatana Dharma : ಇಂಡಿಯಾ ಮೈತ್ರಿಕೂಟದಿಂದ ಸನಾತನ ಧರ್ಮಕ್ಕೆ ಅವಮಾನ; ಗೃಹ ಸಚಿವ ಅಮಿತ್​ ಶಾ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.