ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಯಾಸ್ ಚಂಡಮಾರುತದ ಆರ್ಭಟ ಹೆಚ್ಚಾಗಿದ್ದು, ಈ ಸಮಯದಲ್ಲಿ ರಾಜ್ಯ ಸರ್ಕಾರ ಮತ್ತು ಕೇಂದ್ರ ಪಡೆ ಒಟ್ಟಾಗಿ ಕೆಲಸ ಮಾಡುತ್ತಿವೆ ಎಂದು ಪ.ಬ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿಳಿಸಿದರು.
ಗಂಟೆಗೆ 155 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಕರಾವಳಿ ತೀರದ ಯಾರೊಬ್ಬರು ಕೂಡ ಮನೆಯಿಂದ ಹೊರಗೆ ಬಾರದಂತೆ ಎಚ್ಚರಿಕೆ ನೀಡಲಾಗಿದೆ.
ಈ ಕುರಿತು ಮಾತನಾಡಿದ ಸಿಎಂ ಮಮತಾ ಬ್ಯಾನರ್ಜಿ, ದಕ್ಷಿಣ ಬಂಗಾಳದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆ ಪ್ರಾರಂಭವಾಗಿದ್ದು, ಮುಂದಾಗುವ ಸಂಭವನೀಯ ಸಮಸ್ಯೆಗಳನ್ನು ಎದುರಿಸಲು ರಾಜ್ಯ ಪೊಲೀಸರು, ಕೇಂದ್ರ ಪಡೆ ಜವಾನರು, ಎನ್‌ಡಿಆರ್‌ಎಫ್, ಪ್ರತಿ ತಂಡವು ಜಾಗರೂಕರಾಗಿದ್ದು, ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು.
ಓದಿ.. ಯಾಸ್ ಚಂಡಮಾರುತ ಎಫೆಕ್ಟ್ : ಬಂಗಾಳದಲ್ಲಿ ಭಾರೀ ಮಳೆ ; ಎನ್‌ಡಿಆರ್‌ಎಫ್ ಸಿಬ್ಬಂದಿ ನಿಯೋಜನೆ!