ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ನಗರದಲ್ಲಿನ ಎಲ್ಲಾ ಸರ್ಕಾರಿ ಕ್ರೀಡಾ ಸೌಲಭ್ಯಗಳನ್ನು ಕ್ರೀಡಾಪಟುಗಳಿಗೆ ರಾತ್ರಿ 10 ರವರೆಗೆ ತೆರೆದಿರಬೇಕು ಎಂದು ಆದೇಶ ಹೊರಡಿಸಿದ್ದಾರೆ.
ಐಎಎಸ್ ಅಧಿಕಾರಿಯೊಬ್ಬರು ತ್ಯಾಗರಾಜ್ ಕ್ರೀಡಾಂಗಣಕ್ಕೆ ತಮ್ಮ ನಾಯಿಯನ್ನು ವಾಕಿಂಗ್ಗೆ ಕರೆದೊಯ್ದ ಸಂದರ್ಭದಲ್ಲಿ ನಿಗದಿತ ಅವಧಿಗಿಂತ ಮುಂಚಿತವಾಗಿ ಕ್ರೀಡಾಂಗಣವನ್ನು ಮುಚ್ಚಲಾಗಿತ್ತು ಎಂಬುದು ಮಾಧ್ಯಮದಲ್ಲಿ ವರದಿಯಾದ ನಂತರ ಈ ನಿರ್ದೇಶನ ಬಂದಿದೆ ಎಂದು ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ತಿಳಿಸಿದ್ದಾರೆ.
-
News reports have brought to our notice that certain sports facilities are being closed early causing inconvenience to sportsmen who wish to play till late nite. CM @ArvindKejriwal has directed that all Delhi Govt sports facilities to stay open for sportsmen till 10pm pic.twitter.com/LG7ucovFbZ
— Manish Sisodia (@msisodia) May 26, 2022 " class="align-text-top noRightClick twitterSection" data="
">News reports have brought to our notice that certain sports facilities are being closed early causing inconvenience to sportsmen who wish to play till late nite. CM @ArvindKejriwal has directed that all Delhi Govt sports facilities to stay open for sportsmen till 10pm pic.twitter.com/LG7ucovFbZ
— Manish Sisodia (@msisodia) May 26, 2022News reports have brought to our notice that certain sports facilities are being closed early causing inconvenience to sportsmen who wish to play till late nite. CM @ArvindKejriwal has directed that all Delhi Govt sports facilities to stay open for sportsmen till 10pm pic.twitter.com/LG7ucovFbZ
— Manish Sisodia (@msisodia) May 26, 2022
ಈ ವರದಿಯನ್ನು ಟ್ಯಾಗ್ ಮಾಡಿರುವ ಸಿಸೋಡಿಯಾ ಅವರು, "ಕೆಲವು ಕ್ರೀಡಾ ಸೌಲಭ್ಯಗಳನ್ನು ಮುಂಚಿತವಾಗಿ ಮುಚ್ಚಲಾಗುತ್ತಿದೆ ಎಂಬ ಸುದ್ದಿ ವರದಿಗಳು ನಮ್ಮ ಗಮನಕ್ಕೆ ತಂದಿವೆ. ಇದು ತಡರಾತ್ರಿಯವರೆಗೆ ಆಡಲು ಬಯಸುವ ಕ್ರೀಡಾಪಟುಗಳಿಗೆ ತೊಂದರೆ ಆಗುತ್ತದೆ. ದೆಹಲಿ ಸರ್ಕಾರದ ಎಲ್ಲಾ ಕ್ರೀಡಾ ಸೌಲಭ್ಯಗಳು ರಾತ್ರಿ 10 ಗಂಟೆವರೆಗೆ ತೆರೆದಿರಬೇಕು ಎಂದು ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಸೂಚಿಸಿದ್ದಾರೆ" ಎಂದಿದ್ದಾರೆ.
ಓದಿ: 'ಯುಪಿ ಆರ್ಥಿಕತೆಯನ್ನು ಒಂದು ಶತಕೋಟಿ ಡಾಲರ್‌ಗೆ ಕೊಂಡೊಯ್ಯುವ ಗುರಿ'