ನವದೆಹಲಿ : ಕೊರೊನಾ ವೈರಸ್ನಿಂದ ದೇಶದಲ್ಲಿ ಸಾವನ್ನಪ್ಪಿರುವ ಪ್ರತಿಯೊಬ್ಬರ ಕುಟುಂಬಕ್ಕೆ 50 ಸಾವಿರ ರೂ. ಪರಿಹಾರವನ್ನ ರಾಜ್ಯ ಸರ್ಕಾರಗಳು ನೀಡಲಿವೆ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ಗೆ ಮಾಹಿತಿ ನೀಡಿದೆ.
ಈಗಾಗಲೇ ಸಂಭವಿಸಿರುವ ಸಾವುಗಳಿಗೆ ಮಾತ್ರವಲ್ಲದೇ ಭವಿಷ್ಯದಲ್ಲಿ ಸಂಭವಿಸುವ ಸಾವುಗಳಿಗೂ ಪರಿಹಾರ ನೀಡಲಾಗುವುದು ಎಂದು ಸರ್ವೋನ್ನತ ನ್ಯಾಯಾಲಯಕ್ಕೆ ಕೇಂದ್ರ ಸರ್ಕಾರ ತಿಳಿಸಿದೆ.
ಈ ಹಣ ರಾಜ್ಯ ಸರ್ಕಾರದಿಂದಲೇ ಪಾವತಿಯಾಗಲಿದೆ. ಆಯಾ ರಾಜ್ಯಗಳ ವಿಪತ್ತು ನಿರ್ವಹಣಾ ನಿಧಿಯಿಂದ ಬಳಕೆ ಮಾಡಿಕೊಳ್ಳಬೇಕು ಎಂದು ಹೇಳಿದೆ. ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಅಥವಾ ಜಿಲ್ಲಾಡಳಿತಗಳ ಮೂಲಕ ಪರಿಹಾರ ನೀಡಲಾಗುವುದು ಎಂದು ಕೇಂದ್ರ ಸರ್ಕಾರ ಹೇಳಿದೆ.
ಕೋವಿಡ್ನಿಂದ ಸಾವನ್ನಪ್ಪಿರುವ ಬಿಪಿಎಲ್ ಕಾರ್ಡ್ದಾರರಿಗೆ ರಾಜ್ಯದಲ್ಲಿ ಈಗಾಗಲೇ 1 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ. ಭಾರತದಲ್ಲಿ ಕೊರೊನಾ ವೈರಸ್ನಿಂದಾಗಿ ಈವರೆಗೆ 4.46 ಲಕ್ಷ ಜನರು ಸಾವನ್ನಪ್ಪಿದ್ದಾರೆ.
ಇದನ್ನೂ ಓದಿರಿ: ಪಾಕ್ ಸರಣಿ ರದ್ದು ಮಾಡಿಕೊಂಡ ನ್ಯೂಜಿಲ್ಯಾಂಡ್: ಭಾರತದ ಮೇಲೆ ಗೂಬೆ ಕೂರಿಸಿದ ಪಾಕಿಸ್ತಾನ