ETV Bharat / bharat

ಬಿಜೆಪಿ ಶೋಭಾಯಾತ್ರೆ ವೇಳೆ ಕಲ್ಲು ತೂರಾಟ - ಹೌರಾದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿತ್ತು

ಪಶ್ಚಿಮ ಬಂಗಾಳದ ಹೂಗ್ಲಿಯಲ್ಲಿ ಭಾನುವಾರ ನಡೆದ ಭಾರತೀಯ ಜನತಾ ಪಕ್ಷದ ಶೋಭಾ ಯಾತ್ರೆಯ ವೇಳೆ ಕಲ್ಲು ತೂರಾಟ ನಡೆದಿದೆ.

ಬಿಜೆಪಿ ಶೋಭಾ ಯಾತ್ರೆ ವೇಳೆ ಕಲ್ಲು ತೂರಾಟ
ಬಿಜೆಪಿ ಶೋಭಾ ಯಾತ್ರೆ ವೇಳೆ ಕಲ್ಲು ತೂರಾಟ
author img

By

Published : Apr 2, 2023, 10:41 PM IST

ಕೋಲ್ಕತ್ತಾ (ಪಶ್ಚಿಮ ಬಂಗಾಳ): ಹೂಗ್ಲಿಯಲ್ಲಿ ಭಾನುವಾರ ನಡೆದ ಭಾರತೀಯ ಜನತಾ ಪಕ್ಷ (ಬಿಜೆಪಿ)ದ ಶೋಭಾ ಯಾತ್ರೆಯ ವೇಳೆ ಕಲ್ಲು ತೂರಾಟ ನಡೆದಿದೆ.

ಗುರುವಾರ ರಾಮನವಮಿ ಆಚರಣೆ ವೇಳೆ ಹೌರಾದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿತ್ತು. ಈ ವೇಳೆ ಗಲಭೆಕೋರರು ಸಾರ್ವಜನಿಕ ಮತ್ತು ಖಾಸಗಿ ಆಸ್ತಿಗಳನ್ನು ಧ್ವಂಸಗೊಳಿಸಿ, ವಾಹನಗಳಿಗೆ ಬೆಂಕಿ ಹಚ್ಚಿದರು.

ಕಲ್ಲು ತೂರಾಟ ಮಾಡಿದವರಿಗೆ ಕ್ಲೀನ್ ಚಿಟ್ ನೀಡಿದ್ದಾರೆ - ಇರಾನಿ: ಈ ಬಗ್ಗೆ ಶುಕ್ರವಾರ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅವರು ಹೌರಾದಲ್ಲಿ ರಾಮನವಮಿ ಮೆರವಣಿಗೆಯಲ್ಲಿ ನಡೆದ ಹಿಂಸಾಚಾರದ ಬಗ್ಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ವಾಗ್ದಾಳಿ ನಡೆಸಿ, ಮೆರವಣಿಗೆಯ ಸಮಯದಲ್ಲಿ ಕಲ್ಲು ತೂರಾಟ ಮಾಡಿದವರಿಗೆ ಕ್ಲೀನ್ ಚಿಟ್ ನೀಡಿದ್ದಾರೆ ಎಂದು ಆರೋಪಿಸಿದ್ದರು.

ಹೌರಾದಲ್ಲಿ ರಾಮನವಮಿಯ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದೆ. ನ್ಯಾಯ ನೀಡುವ ಬದಲು ಮಮತಾ ಬಂಡೋಪಾಧ್ಯಾಯ (ಬ್ಯಾನರ್ಜಿ) ಅವರು ಕಾನೂನನ್ನು ಕೈಗೆತ್ತಿಕೊಂಡು ರಾಮನವಮಿ ಶೋಭಾ ಯಾತ್ರೆ ವೇಳೆ ದಾಳಿ ನಡೆಸಿದ ಕಲ್ಲು ತೂರಾಟಗಾರರಿಗೆ ಕ್ಲೀನ್ ಚಿಟ್ ನೀಡಿದ್ದಾರೆ ಎಂದು ಇರಾನಿ ಕಿಡಿಕಾರಿದ್ದರು.

"ಮಮತಾ ಹಿಂದೂ ಸಮುದಾಯದ ಮೇಲೆ ಎಷ್ಟು ದಿನ ದಾಳಿ ನಡೆಸುತ್ತಾರೆ ಎಂಬುದು ಪ್ರಶ್ನೆ. ಇದು ಮಮತಾ ಅವಧಿಯಲ್ಲಿ ಸಂಭವಿಸಿದ ಮೊದಲ ಘಟನೆಯಲ್ಲ. ಈ ಹಿಂದೆ 2022 ರಲ್ಲಿ ಲಕ್ಷ್ಮಿ ಪೂಜೆಯಂದು ದಲಿತರು ಪೂಜೆ ಮಾಡುವಾಗ ಅವರ ಮೇಲೆ ಹಲ್ಲೆ ನಡೆಸಲಾಯಿತು. ಆ ಸಮಯದಲ್ಲಿ ಅವರು ಮೌನವಾಗಿದ್ದರು." ಎಂದು ಆರೋಪಿಸಿದ್ದರು.

ತನಿಖೆಗೆ ಆದೇಶಿದ್ದ ಪಶ್ಚಿಮ ಬಂಗಾಳ ಸರ್ಕಾರ: ರಾಮನವಮಿ ಆಚರಣೆಯ ಸಂದರ್ಭದಲ್ಲಿ ಹೌರಾದಲ್ಲಿ ನಡೆದ ಹಿಂಸಾಚಾರದ ನಂತರ, ಪಶ್ಚಿಮ ಬಂಗಾಳ ಸರ್ಕಾರ ಶುಕ್ರವಾರ ಈ ಬಗ್ಗೆ ತನಿಖೆ ನಡೆಸುವಂತೆ ಅಪರಾಧ ತನಿಖಾ ಇಲಾಖೆಗೆ (ಸಿಐಡಿ) ಆದೇಶಿಸಿತ್ತು. ಇನ್ಸ್ ಪೆಕ್ಟರ್ ಜನರಲ್ ಆಫ್ ಪೊಲೀಸ್, ಸಿಐಡಿ ಸುನಿಲ್ ಚೌಧರಿ ನೇತೃತ್ವದ ವಿಶೇಷ ತಂಡ ತನಿಖೆ ಆರಂಭಿಸಿತ್ತು.

ರಾಮನವಮಿ ಆಚರಣೆ ವೇಳೆ ಹೌರಾದಲ್ಲಿ ನಡೆದ ಹಿಂಸಾಚಾರದ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ತನಿಖೆ ನಡೆಸುವಂತೆ ಕೋರಿ ಪಶ್ಚಿಮ ಬಂಗಾಳದ ಬಿಜೆಪಿ ಮುಖ್ಯಸ್ಥರು ಶುಕ್ರವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದರು.

ಇದೇ ವಿಷಯವಾಗಿ ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಬಿಜೆಪಿ ಮುಖಂಡ ಸುವೇಂದು ಅಧಿಕಾರಿ ಶುಕ್ರವಾರ ಕಲ್ಕತ್ತಾ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿ ಈ ವಿಷಯದ ಬಗ್ಗೆ ಎನ್‌ಐಎ ತನಿಖೆ ನಡೆಸಬೇಕು ಮತ್ತು ಇಲ್ಲಿಗೆ ಕೇಂದ್ರ ಪಡೆಗಳನ್ನು ತಕ್ಷಣವೇ ನಿಯೋಜಿಸಬೇಕೆಂದು ಕೋರಿದ್ದರು.

ಟಿ ರಾಜಾ ಸಿಂಗ್ ವಿರುದ್ಧ ಪ್ರಕರಣ ದಾಖಲು: ಇನ್ನು ಹೈದರಾಬಾದ್​ ನಗರದಲ್ಲಿ ಗುರುವಾರ ನಡೆದ ಶ್ರೀರಾಮ ನವಮಿ ಶೋಭಾ ಯಾತ್ರೆ ವೇಳೆ ಶಾಂತಿಯುತ ವಾತಾವರಣಕ್ಕೆ ಭಂಗ ತರುವಂತೆ ಸಾರ್ವಜನಿಕರಿಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಗೋಶಾಮಹಲ್ ಶಾಸಕ ಟಿ ರಾಜಾ ಸಿಂಗ್ ವಿರುದ್ಧ ಶಾಹಿನ್ಯಾತ್‌ಗುಂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ:ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುಖಂಡನ ಗುಂಡಿಕ್ಕಿ ಹತ್ಯೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.