ನವದೆಹಲಿ : ದೇಶಾದ್ಯಂತ ಹನುಮ ಜಯಂತಿ ಆಚರಣೆ ಮಾಡಲಾಗ್ತಿದೆ. ಈ ವೇಳೆ ರಾಷ್ಟ್ರ ರಾಜಧಾನಿ ದೆಹಲಿಯ ಜಹಾಂಗೀರ್ಪುರಿ ಪ್ರದೇಶದಲ್ಲಿ ಹನುಮ ಜಯಂತಿ ಮೆರವಣಿಗೆ ವೇಳೆ ಹಿಂಸಾಚಾರ ಸಂಭವಿಸಿದೆ. ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆಸಲಾಗಿದ್ದು, ಸಾರ್ವಜನಿಕರು ಸೇರಿದಂತೆ ಕೆಲ ಪೊಲೀಸರಿಗೆ ಗಾಯಗಳಾಗಿವೆ.
ಮೆರವಣಿಗೆ ವೇಳೆ ಎರಡು ಸಮುದಾಯಗಳ ಮಧ್ಯೆ ಗಲಾಟೆ ನಡೆದಿದ್ದು, ಈ ವೇಳೆ ಕಲ್ಲು ತೂರಾಟ ಮಾಡಲಾಗಿದೆ. ಮಧ್ಯಪ್ರವೇಶಿಸಿ ಪರಿಸ್ಥಿತಿ ತಿಳಿ ಮಾಡಲು ಮುಂದಾದ ಪೊಲೀಸರ ಮೇಲೂ ಹಲ್ಲೆ ನಡೆಸಲಾಗಿದ್ದು, ಘಟನೆಯಲ್ಲಿ ಗಾಯಗೊಂಡಿದ್ದಾರೆ. ಘಟನೆಗೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಖಂಡಿಸಿದ್ದು, ಸಂಬಂಧಪಟ್ಟವರ ವಿರುದ್ಧ ಸೂಕ್ತ ಕ್ರಮಕ್ಕೆ ಆದೇಶ ನೀಡಿದ್ದಾರೆ. ಇದೇ ವೇಳೆ ಪರಸ್ಪರ ಶಾಂತಿ ಕಾಪಾಡಿಕೊಳ್ಳುವಂತೆ ಅವರು ಮನವಿ ಮಾಡಿದ್ದಾರೆ.
ಇದನ್ನೂ ಓದಿ: ಮದುವೆಗೆ ಕೆಲ ಗಂಟೆ ಮಾತ್ರ ಬಾಕಿ.. ರೇಪ್ ಕೇಸ್ನಲ್ಲಿ ವರನನ್ನೇ ಎತ್ತಾಕ್ಕೊಂಡು ಹೋದ ಪೊಲೀಸರು!
-
दिल्ली के जहांगीर पुरी में शोभायात्रा में पथराव की घटना बेहद निंदनीय है। जो भी दोषी हों उन पर सख़्त कार्रवाई होनी चाहिए। सभी लोगों से अपील- एक दूसरे का हाथ पकड़कर शांति बनाए रखें।
— Arvind Kejriwal (@ArvindKejriwal) April 16, 2022 " class="align-text-top noRightClick twitterSection" data="
">दिल्ली के जहांगीर पुरी में शोभायात्रा में पथराव की घटना बेहद निंदनीय है। जो भी दोषी हों उन पर सख़्त कार्रवाई होनी चाहिए। सभी लोगों से अपील- एक दूसरे का हाथ पकड़कर शांति बनाए रखें।
— Arvind Kejriwal (@ArvindKejriwal) April 16, 2022दिल्ली के जहांगीर पुरी में शोभायात्रा में पथराव की घटना बेहद निंदनीय है। जो भी दोषी हों उन पर सख़्त कार्रवाई होनी चाहिए। सभी लोगों से अपील- एक दूसरे का हाथ पकड़कर शांति बनाए रखें।
— Arvind Kejriwal (@ArvindKejriwal) April 16, 2022
ಘಟನೆಯಲ್ಲಿ ಗಾಯಗೊಂಡಿರುವ ಕೆಲವರು ಜಹಾಂಗೀರಪುರಿಯ ಬಾಬು ಜಗಜೀವನ್ ರಾವ್ ಸ್ಮಾರಕ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಘಟನಾ ಸ್ಥಳದಲ್ಲಿ ಹೆಚ್ಚಿನ ಪೊಲೀಸ್ ಪಡೆ ನಿಯೋಜನೆ ಮಾಡಲಾಗಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ. ಘಟನೆ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ, ಹಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಳ್ಳಲು ಮುಂದಾಗಿದ್ದಾರೆಂದು ತಿಳಿದು ಬಂದಿದೆ.