ETV Bharat / bharat

ಆಧುನಿಕ ವೈದ್ಯಕೀಯ ವ್ಯವಸ್ಥೆ ವಿರುದ್ಧ ತಪ್ಪು ದಾರಿಗೆಳೆಯುವ ಜಾಹೀರಾತು ನಿಲ್ಲಿಸಿ: ಪತಂಜಲಿಗೆ ಸುಪ್ರೀಂ ಚಾಟಿ

author img

By ETV Bharat Karnataka Team

Published : Nov 21, 2023, 9:37 PM IST

SC to Patanjali Ayurved: ಅಲೋಪತಿಯಂತಹ ಆಧುನಿಕ ಚಿಕಿತ್ಸಾ ಪದ್ಧತಿಗಳ ವಿರುದ್ಧ ತಪ್ಪುದಾರಿಗೆಳೆಯುವ ಹೇಳಿಕೆಗಳು ಮತ್ತು ಜಾಹೀರಾತುಗಳನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಪತಂಜಲಿ ಆಯುರ್ವೇದ ಸಂಸ್ಥೆಗೆ ಸುಪ್ರೀಂ ಕೋರ್ಟ್ ತಾಕೀತು ಮಾಡಿದೆ.

Stop misleading advertisements against modern medicine systems, SC to Patanjali Ayurved
ಆಧುನಿಕ ವೈದ್ಯಕೀಯ ವ್ಯವಸ್ಥೆ ವಿರುದ್ಧ ತಪ್ಪು ದಾರಿಗೆಳೆಯುವ ಜಾಹೀರಾತು ನಿಲ್ಲಿಸಿ: ಪತಂಜಲಿಗೆ ಸುಪ್ರೀಂ ಚಾಟಿ

ನವದೆಹಲಿ: ಯೋಗಗುರು ಬಾಬಾ ರಾಮ್​ದೇವ್ ನೇತೃತ್ವದ ಪತಂಜಲಿ ಆಯುರ್ವೇದ ಸಂಸ್ಥೆಗೆ ಸುಪ್ರೀಂ ಕೋರ್ಟ್​ ಮಂಗಳವಾರ ಚಾಟಿ ಬೀಸಿದೆ. ಅಲೋಪತಿಯಂತಹ ಆಧುನಿಕ ಚಿಕಿತ್ಸಾ ಪದ್ಧತಿಗಳ ವಿರುದ್ಧ ತಪ್ಪುದಾರಿಗೆಳೆಯುವ ಹೇಳಿಕೆಗಳು ಮತ್ತು ಜಾಹೀರಾತುಗಳಿಗೆ ಸಂಬಂಧಿಸಿದಂತೆ ಸರ್ವೋಚ್ಛ ನ್ಯಾಯಾಲಯವು ತರಾಟೆಗೆ ತೆಗೆದುಕೊಂಡಿದ್ದು, ಇನ್ನುಂದೆ ಇಂತಹ ತಪ್ಪು ಹೇಳಿಕೆಗಳಿಗೆ ಪ್ರತಿ ಉತ್ಪನ್ನದ ಮೇಲೆ 1 ಕೋಟಿ ರೂ.ಗಳ ದಂಡ ವಿಧಿಸಬೇಕಾಗುತ್ತದೆ ಎಂದು ಖಡಕ್​ ಎಚ್ಚರಿಕೆ ನೀಡಿದೆ.

ಸುಪ್ರೀಂ ಕೋರ್ಟ್​ನ ನ್ಯಾಯಮೂರ್ತಿಗಳಾದ ಅಹ್ಸಾನುದ್ದೀನ್ ಅಮಾನುಲ್ಲಾ ಮತ್ತು ಪ್ರಶಾಂತ್ ಕುಮಾರ್ ಮಿಶ್ರಾ ಅವರನ್ನೊಳಗೊಂಡ ಪೀಠವು ಕಳೆದ ವರ್ಷ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸುತ್ತಿದೆ. ಈ ವಿಚಾರಣೆಯ ಸಂದರ್ಭದಲ್ಲಿ ಬಾಬಾ ರಾಮ್​ದೇವ್ ಸಹಸ್ಥಾಪಿತ ಕಂಪನಿಗೆ ಕಠಿಣ ಎಚ್ಚರಿಕೆ ನೀಡಿ, ಪತಂಜಲಿ ಆಯುರ್ವೇದದ ಎಲ್ಲ ತಪ್ಪುದಾರಿಗೆಳೆಯುವ ಜಾಹೀರಾತುಗಳನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಸೂಚಿಸಿದೆ.

ಇದೇ ವೇಳೆ, ಈ ವಿಷಯವನ್ನು ''ಅಲೋಪತಿ ವರ್ಸಸ್ ಆಯುರ್ವೇದ'' ಚರ್ಚೆಯನ್ನಾಗಿ ಮಾಡುವ ಬದಲಿಗೆ ತಪ್ಪು ದಾರಿಗೆಳೆಯುವ ವೈದ್ಯಕೀಯ ಜಾಹೀರಾತುಗಳ ಸಮಸ್ಯೆಗೆ ನಿಜವಾದ ಪರಿಹಾರ ಕಂಡುಕೊಳ್ಳುವುದನ್ನು ನ್ಯಾಯ ಪೀಠ ಗಮನಿಸಿದೆ. ಇದನ್ನು ಬಹಳ ಗಂಭೀರವಾಗಿ ಪರಿಗಣಿಸುತ್ತಿದ್ದು, ತಪ್ಪು ಹೇಳಿಕೆ ನೀಡಿದರೆ ಪ್ರತಿ ಉತ್ಪನ್ನದ ಮೇಲೆ 1 ಕೋಟಿ ರೂ. ದಂಡ ಹಾಕಬೇಕಾಗುತ್ತದೆ. ಪತಂಜಲಿ ಆಯುರ್ವೇದವು ಭವಿಷ್ಯದಲ್ಲಿ ಅಂತಹ ಯಾವುದೇ ಜಾಹೀರಾತುಗಳನ್ನು ಪ್ರಕಟಿಸುವುದು ಮತ್ತು ಮಾಧ್ಯಮಗಳಲ್ಲಿ ಅದು ಸಾಂದರ್ಭಿಕ ಹೇಳಿಕೆಗಳನ್ನು ನೀಡದಂತೆ ನೋಡಿಕೊಳ್ಳಬೇಕೆಂದು ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.

ಇದಲ್ಲದೇ, ಈ ಸಮಸ್ಯೆಯನ್ನು ನಿಭಾಯಿಸಲು ಸರ್ಕಾರವು ಕಾರ್ಯಸಾಧ್ಯವಾದ ಪರಿಹಾರವನ್ನು ಕಂಡುಹಿಡಿಯಬೇಕು ಎಂದೂ ನ್ಯಾಯಪೀಠವು ಕೇಂದ್ರದ ವಕೀಲರಿಗೆ ಸೂಚಿಸಿದೆ. ಮುಂದಿನ ವಿಚಾರಣೆಯನ್ನು 2024ರ ಫೆಬ್ರವರಿ 5ಕ್ಕೆ ನಿಗದಿ ಪಡಿಸಿದೆ. ಈ ಹಿಂದೆ 2022ರ ಆಗಸ್ಟ್​ನಲ್ಲಿ ಅಲೋಪತಿಯಂತಹ ಆಧುನಿಕ ವೈದ್ಯಕೀಯ ವ್ಯವಸ್ಥೆಗಳ ಕುರಿತು ಬಾಬಾ ರಾಮ್​ದೇವ್ ಅವರ ಅವಹೇಳನಕಾರಿ ಹೇಳಿಕೆಗಳ ಬಗ್ಗೆ ಸುಪ್ರೀಂ ಕೋರ್ಟ್ ಟೀಕಿಸಿತ್ತು.

ಆಗಿನ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ಪೀಠವು ಆಯುರ್ವೇದವನ್ನು ಜನಪ್ರಿಯಗೊಳಿಸಲು ಅಭಿಯಾನಗಳನ್ನು ನಡೆಸಬಹುದು. ಆದರೆ, ಇತರ ಔಷಧ ಪದ್ಧತಿಗಳನ್ನು ಟೀಕಿಸಬಾರದು. ಬಾಬಾ ರಾಮದೇವ್ ಅಲೋಪತಿ ವೈದ್ಯರ ಮೇಲೆ ಏಕೆ ಆರೋಪ ಮಾಡುತ್ತಿದ್ದಾರೆ?, ಅವರು ಯೋಗವನ್ನು ಜನಪ್ರಿಯಗೊಳಿಸಿದರು. ಒಳ್ಳೆಯದು. ಆದರೆ, ಅವರು ಇತರ ವ್ಯವಸ್ಥೆಗಳನ್ನು ಟೀಕಿಸಬಾರದು. ಅವರು ಅನುಸರಿಸುವುದೇ ಎಲ್ಲವನ್ನೂ ಗುಣಪಡಿಸುತ್ತದೆ ಎಂಬುದಕ್ಕೆ ಏನು ಗ್ಯಾರಂಟಿ ಎಂದು ಈ ಹಿಂದೆ ನ್ಯಾಯ ಪೀಠ ಪ್ರಶ್ನಿಸಿತ್ತು. ಅಲೋಪತಿ ಔಷಧಗಳು, ವೈದ್ಯರು ಮತ್ತು ಕೋವಿಡ್-19 ಲಸಿಕೆ ಬಗ್ಗೆ ಕಳಂಕ ತರುವ ಅಭಿಯಾನವನ್ನು ಐಎಂಎ ತನ್ನ ಅರ್ಜಿಯಲ್ಲಿ ಉಲ್ಲೇಖಿಸಿದೆ.

ಇದನ್ನೂ ಓದಿ: ಚಳಿಗಾಲದಲ್ಲಿ ಈ ಸಿಹಿತಿನಿಸುಗಳ ಸೇವನೆ ಉತ್ತಮ: ದೇಹದ ಶಕ್ತಿಯ ಜೊತೆಗೆ ಉಷ್ಣತೆಯೂ ಹೆಚ್ಚಳ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.