ರೂರ್ಕಿ (ಉತ್ತರಾಖಂಡ್): ಐಐಟಿ ರೂರ್ಕಿಯಲ್ಲಿ ಸ್ಥಾಪಿಸಲಾಗಿರುವ ಕ್ವಾರಂಟೈನ್ ಕೇಂದ್ರದಲ್ಲಿ ವಿದ್ಯಾರ್ಥಿಯೊಬ್ಬ ಬುಧವಾರ ಮೃತಪಟ್ಟಿದ್ದಾನೆ. ಕೋವಿಡ್ ರೋಗಿಯೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದ ಕಾರಣ ಆತನನ್ನು ಕ್ವಾರಂಟೈನ್ಗೆ ಒಳಪಡಿಸಲಾಗಿತ್ತು. ಆದರೆ, ಆತನ ಆರ್‌ಟಿಪಿಸಿಆರ್ ವರದಿಯು ಕೊರೊನಾ ನೆಗೆಟಿವ್ ಎಂದು ತೋರಿಸುತ್ತಿದೆ.
ಐಐಟಿ ರುರ್ಕಿಯ ಕ್ವಾರಂಟೈನ್ ಕೇಂದ್ರದಲ್ಲಿದ್ದ ಅರ್ತ್ಕ್ವೇಕ್ ಎಂಜಿನಿಯರಿಂಗ್ ವಿಭಾಗದ ಎಂ.ಟೆಕ್ ದ್ವಿತೀಯ ವರ್ಷದ ವಿದ್ಯಾರ್ಥಿ ಪ್ರೇಮ್ ಸಿಂಗ್ ತನ್ನ ರೂಂನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ನಂತರ ಆತನನ್ನು ರೂರ್ಕಿ ಸಿವಿಲ್ ಆಸ್ಪತ್ರೆಗೆ ಸಾಗಿಸಲಾಗಿದ್ದು, ಅಲ್ಲಿ ಆತ ಮೃತಪಟ್ಟಿದ್ದಾನೆ ಎಂದು ಘೋಷಿಸಲಾಯಿತು. ಇಂದು ಶವ ಪರೀಕ್ಷೆಯ ನಂತರವೇ ಸಾವಿಗೆ ಕಾರಣ ತಿಳಿಯಲಿದೆ.
ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ರೂರ್ಕಿಯಲ್ಲಿ 120 ವಿದ್ಯಾರ್ಥಿಗಳಲ್ಲಿ ಕೊರೊನಾ ದೃಢಪಟ್ಟಿದೆ. ಕೆಲವು ಬೋಧಕ ವರ್ಗದ ಜೊತೆಗೆ, ಸಿಬ್ಬಂದಿ ಮತ್ತು ಅವರ ಸಂಬಂಧಿಕರಲ್ಲಿಯೂ ಕೊರೊನಾ ವೈರಸ್ ಪತ್ತೆಯಾಗಿದೆ.