ETV Bharat / bharat

ಏಕಕಾಲದಲ್ಲಿ ಎರಡು ಪದವಿ ಕೋರ್ಸ್​ ಕಲಿಕೆಗೆ ಯುಜಿಸಿ ಅವಕಾಶ - ಎರಡು ಪದವಿ ಕೋರ್ಸ್​ ಕಲಿಕೆಗೆ ಯುಜಿಸಿ ಅವಕಾಶ

ಒಂದೇ ಅವಧಿಯಲ್ಲಿ ಎರಡು ಪದವಿ ಕೋರ್ಸ್ ಪಡೆದುಕೊಳ್ಳುವ ವಿದ್ಯಾರ್ಥಿಗಳಿಗೆ ಇದೀಗ ಯುಜಿಸಿ ಅವಕಾಶ ನೀಡಿದ್ದು, ಮುಂದಿನ ಕೆಲ ದಿನಗಳಲ್ಲಿ ಇದಕ್ಕೆ ಸಂಬಂಧಿಸಿದಂತೆ ಮಹತ್ವದ ಮಾರ್ಗಸೂಚಿ ಹೊರಬೀಳಲಿದೆ.

UGC to allow students to pursue two degree

author img

By

Published : Apr 12, 2022, 7:46 PM IST

ನವದೆಹಲಿ: ಏಕಕಾಲದಲ್ಲಿ ಒಂದೇ ವಿಶ್ವವಿದ್ಯಾಲಯ ಅಥವಾ ಬೇರೆ ಬೇರೆ ವಿಶ್ವವಿದ್ಯಾಲಯಗಳಿಂದ ಎರಡು ವಿಭಿನ್ನ ಪದವಿ ಕೋರ್ಸ್​ ಕಲಿಯಲು ವಿಶ್ವವಿದ್ಯಾಲಯಗಳ ಧನಸಹಾಯ ಆಯೋಗ ಅವಕಾಶ ನೀಡಲಿದೆ. ಇದಕ್ಕೆ ಸಂಬಂಧಿಸಿದಂತೆ ಮುಂದಿನ ಕೆಲ ದಿನಗಳಲ್ಲಿ ಮಹತ್ವದ ಮಾರ್ಗಸೂಚಿ ಪ್ರಕಟಗೊಳ್ಳಲಿದೆ ಎಂದು ಯುಜಿಸಿ ಅಧ್ಯಕ್ಷ ಜಗದೀಶ್ ಕುಮಾರ್​ ಮಾಹಿತಿ ನೀಡಿದ್ದಾರೆ.

ಇದಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿ ಮಾತನಾಡಿರುವ ಅವರು, ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಅಂಗವಾಗಿ ವಿದ್ಯಾರ್ಥಿಗಳು ಇನ್ಮುಂದೆ ಒಂದೇ ಬಾರಿ ಎರಡು ಪೂರ್ಣಾವಧಿಯ ಪದವಿ ಕೋರ್ಸ್ ಕಲಿಯಬಹುದಾಗಿದೆ ಎಂದಿದ್ದಾರೆ. ವಿದ್ಯಾರ್ಥಿಗಳು ಬಹುಮುಖ ಪ್ರತಿಭೆ ವೃದ್ಧಿ ಮಾಡಿಕೊಳ್ಳುವ ಉದ್ದೇಶದಿಂದ ಈ ಅವಕಾಶ ನೀಡಲಾಗುತ್ತಿದೆ ಎಂದು ತಿಳಿಸಿದ್ದು, ಭೌತಿಕ ಅಥವಾ ಆನ್​ಲೈನ್ ಮೂಲಕ ಸಹ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.

ಇದನ್ನೂ ಓದಿ: ನಡುರಸ್ತೆಯಲ್ಲಿ ಸಿನಿಮೀಯ ಸ್ಟೈಲ್​​ನಲ್ಲಿ ಕಾಲೇಜ್​ ವಿದ್ಯಾರ್ಥಿನಿಯರ ಫೈಟ್​​.. ವಿಡಿಯೋ

ಭಾರತದಲ್ಲಿ ಓರ್ವ ವಿದ್ಯಾರ್ಥಿ ಏಕಕಾಲದಲ್ಲಿ ಎರಡು ವಿಭಿನ್ನ ಕೋರ್ಸ್​​​ ಓದಲು ಅವಕಾಶವಿಲ್ಲ. ಆದರೆ, ರಾಷ್ಟ್ರೀಯ ಶಿಕ್ಷಣ ನೀತಿ 2020 ಅಡಿಯಲ್ಲಿ ಕೇಂದ್ರ ಸರ್ಕಾರ 2040ರ ವೇಳಗೆ ಶಿಕ್ಷಣ ವ್ಯವಸ್ಥೆಯಲ್ಲಿ ಗಣನೀಯವಾದ ಪರಿವರ್ತನೆ ತರಲು ಮುಂದಾಗಿದೆ. ಹೀಗಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ನರೇಂದ್ರ ಮೋದಿಯವರ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಭಾರತವನ್ನು ಆತ್ಮನಿರ್ಭರ್​​ ಮಾಡಲು ಮತ್ತಷ್ಟು ಸಹಾಯ ಮಾಡಲಿದ್ದು, ವಿದ್ಯಾರ್ಥಿಗಳು ಹೆಚ್ಚಿನ ವಿಷಯ ತಿಳಿದುಕೊಳ್ಳಲು ಅನುವು ಮಾಡಿಕೊಡಲಿದೆ ಎಂದಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.