ಅರ್ರಾ (ಬಿಹಾರ) : ರೈಲ್ವೆ ನೇಮಕಾತಿ ಮಂಡಳಿಯ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಬಿಹಾರದಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆ ವೇಳೆ ಅರ್ರಾದಲ್ಲಿ ಪ್ರಯಾಣಿಕರ ರೈಲಿಗೆ ಬೆಂಕಿ ಹಚ್ಚಿದಲ್ಲದೆ, ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದೆ.
ಘಟನೆಗೆ ಸಂಬಂಧಿಸಿದಂತೆ ವಿಡಿಯೋಗಳನ್ನು ಚಿತ್ರೀಕರಿಸಲಾಗಿದ್ದು, ತನಿಖೆಯ ಬಳಿಕ ಆರೋಪಿಗಳನ್ನು ಬಂಧನಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ರೈಲ್ವೆ ನೇಮಕಾತಿ ಮಂಡಳಿಯ ತಾಂತ್ರಿಕೇತರ ಪರೀಕ್ಷೆ 2021ಕ್ಕೆ ಹಾಜರಾಗಿದ್ದ ವಿದ್ಯಾರ್ಥಿಗಳು ಫಲಿತಾಂಶದಲ್ಲಿ ವ್ಯತ್ಯಾಸವಾಗಿದೆ ಎಂದು ಆರೋಪಿಸಿ ಬಿಹಾರ ಷರೀಫ್ ರೈಲು ನಿಲ್ದಾಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು. ಅಲ್ಲದೆ, ಪಾಟ್ನಾದ ರಾಜೇಂದ್ರ ನಗರ ಟರ್ಮಿನಲ್‌ನಲ್ಲಿ ನೂರಾರು ವಿದ್ಯಾರ್ಥಿಗಳು ಕೋಲ್ಕತ್ತಾ-ನವದೆಹಲಿ ಮುಖ್ಯ ರೈಲು ಮಾರ್ಗವನ್ನು ತಡೆದು ಆಕ್ರೋಶ ಹೊರಹಾಕಿದ್ದಾರೆ.
ಜಾಹೀರಾತು : ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ
CBT-1 ಪರೀಕ್ಷೆಗಾಗಿ ರೈಲ್ವೆ ನೇಮಕಾತಿ ಮಂಡಳಿಯ ಎನ್ಟಿಪಿಸಿ (NTPC) ಫಲಿತಾಂಶವನ್ನು CBT-2 ಗೆ ಅಭ್ಯರ್ಥಿಗಳನ್ನು ಶಾರ್ಟ್‌ಲಿಸ್ಟ್ ಮಾಡಲು ಜನವರಿ 15ರಂದು ಪ್ರಕಟಿಸಲಾಗಿತ್ತು.
ಪ್ರತಿಭಟನಾಕಾರರು ಸುಮಾರು ಐದು ಗಂಟೆಗಳ ಕಾಲ ರೈಲು ಸಂಚಾರಕ್ಕೆ ಅಡ್ಡಿಪಡಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪಾಟ್ನಾ ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ) ಡಾ ಚಂದ್ರಶೇಖರ್ ಸಿಂಗ್ ತಿಳಿಸಿದ್ದಾರೆ. ಪೊಲೀಸರು ಪ್ರತಿಭಟನಾಕಾರರನ್ನು ರೈಲು ನಿಲ್ದಾಣದಿಂದ ಹೊರಗೆ ಕಳುಹಿಸಿದ್ದಾರೆ.
ಇದನ್ನೂ ಓದಿ: 73ನೇ ಗಣತಂತ್ರ ದಿನದ ಸಂಭ್ರಮ... ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಗಿ ಭದ್ರತೆ