ETV Bharat / bharat

ಟೀಂ ಇಂಡಿಯಾ ಸೋಲು ಸಂಭ್ರಮಿಸಿದ ಕಾಶ್ಮೀರ ವಿದ್ಯಾರ್ಥಿಗಳ ಮೇಲೆ FIR​

author img

By

Published : Oct 26, 2021, 2:57 PM IST

ಟಿ-20 ವಿಶ್ವಕಪ್ ಕ್ರಿಕೆಟ್​ನಲ್ಲಿ ಭಾರತದ ಸೋಲು ಸಂಭ್ರಮಿಸಿದ್ದ ಜಮ್ಮು ಕಾಶ್ಮೀರದ ಕೆಲವು ವಿದ್ಯಾರ್ಥಿಗಳ ಮೇಲೆ ಎಫ್​ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Students of Kashmir varsities booked for celebrating Pak's victory against India in T20 WC
ಟೀಂ ಇಂಡಿಯಾ ಸೋಲನ್ನು ಸಂಭ್ರಮಿಸಿದ ಕಾಶ್ಮೀರ ವಿದ್ಯಾರ್ಥಿಗಳ ಮೇಲೆ ಎಫ್​ಐಆರ್​

ಶ್ರೀನಗರ( ಜಮ್ಮು ಕಾಶ್ಮೀರ): ಟಿ-20 ವಿಶ್ವಕಪ್​ನಲ್ಲಿ ಟೀಂ ಇಂಡಿಯಾ ಸೋತ ನಂತರ ಸಂಭ್ರಮಾಚರಣೆ ಮಾಡಿದ ಜಮ್ಮು ಕಾಶ್ಮೀರದ ಕೆಲವು ಕಾಲೇಜುಗಳ ವಿದ್ಯಾರ್ಥಿಗಳ ವಿರುದ್ಧ ಎಫ್​ಐಆರ್ ದಾಖಲಿಸಲಾಗಿದೆ ಎಂದು ಕಾಶ್ಮೀರ ಐಜಿಪಿ ವಿಜಯ್​ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಶೇರ್​-ಐ ಕಾಶ್ಮೀರ್ ಇನ್ಸ್​ಟಿಟ್ಯೂಟ್ ಆಫ್ ಮೆಡಿಕಲ್ ಕಾಲೇಜು (SKIMS) ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ವಿಡಿಯೋಗೆ ಸಂಬಂಧಿಸಿದಂತೆ ಈ ದೂರನ್ನು ದಾಖಲಿಸಿಕೊಳ್ಳಲಾಗಿದೆ ಎಂದು ವಿಜಯ್​ಕುಮಾರ್ ಮಾಹಿತಿ ನೀಡಿದ್ದಾರೆ.

ಪಾಕಿಸ್ತಾನ ತಂಡ ಕ್ರಿಕೆಟ್​ನಲ್ಲಿ ಗೆದ್ದ ನಂತರ ಈ ಕಾಲೇಜಿನ ವಿದ್ಯಾರ್ಥಿಗಳು ದೇಶ ವಿರೋಧಿ ಘೋಷಣೆಗಳನ್ನು ಕೂಗಿದ್ದಾರೆ. ಇದಕ್ಕೂ ಮೊದಲು ಶಿವಸೇನಾ ನಾಯಕ ಸಂಜಯ್ ರಾವತ್​ ಈ ವಿಡಿಯೋ ಟ್ವಿಟರ್​ನಲ್ಲಿ ಹಂಚಿಕೊಂಡು ಆಕ್ರೋಶ ವ್ಯಕ್ತಪಡಿಸಿದ್ದರು.

ಟಿ-20 ಕ್ರಿಕೆಟ್​​ನಲ್ಲಿ ಪಾಕಿಸ್ತಾನದ ಗೆಲುವನ್ನು ಸಂಭ್ರಮಿಸಲಾಗಿದೆ. ಜೊತೆಗ ಭಾರತ ವಿರೋಧಿ ಘೋಷಣೆಗಳನ್ನು ಕೂಗಲಾಗಿದೆ. ಇದು ನಿಜಕ್ಕೂ ಕಳವಳಕಾರಿ ಸಂಗತಿಯಾಗಿದೆ. ಕೇಂದ್ರ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಸಂಜಯ್ ರಾವತ್ ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: ಜಮ್ಮುಕಾಶ್ಮೀರದ ಸಂಬಾಲ್​ನಲ್ಲಿ ಭದ್ರತಾ ಪಡೆ ಗುರಿಯಾಗಿಸಿ ಗ್ರೆನೇಡ್​ ದಾಳಿ, ಹಲವರಿಗೆ ಗಾಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.