ETV Bharat / bharat

ಪ್ರಧಾನಿ ಮೋದಿ ಭೇಟಿ ವೇಳೆ ಆತ್ಮಹತ್ಯಾ ದಾಳಿ ಬೆದರಿಕೆ: ಪೊಲೀಸರ ಭದ್ರತಾ ವಿವರವೂ ಸೋರಿಕೆ

ಪ್ರಧಾನಿ ನರೇಂದ್ರ ಮೋದಿ ಕೇರಳಕ್ಕೆ ಭೇಟಿ ನೀಡುವ ಮೊದಲೇ ಭದ್ರತಾ ಅಧಿಕಾರಿಗಳ ಮಾಹಿತಿ ಸೋರಿಕೆಯಾಗಿದೆ. ಇದೇ ವೇಳೆ ಆತ್ಮಹತ್ಯಾ ದಾಳಿ ನಡೆಸುವುದಾಗಿ ಬೆದರಿಕೆ ಪತ್ರವೂ ರವಾನಿಸಲಾಗಿದೆ.

ಪ್ರಧಾನಿ ಮೋದಿಗೆ ಆತ್ಮಹತ್ಯಾ ದಾಳಿ ಬೆದರಿಕೆ
ಪ್ರಧಾನಿ ಮೋದಿಗೆ ಆತ್ಮಹತ್ಯಾ ದಾಳಿ ಬೆದರಿಕೆ
author img

By

Published : Apr 22, 2023, 10:50 AM IST

ತಿರುವನಂತಪುರ: ಪ್ರಧಾನಿ ನರೇಂದ್ರ ಮೋದಿಯವರ ಕೇರಳ ಪ್ರವಾಸದ ವೇಳೆ ಆತ್ಮಹತ್ಯಾ ದಾಳಿ ನಡೆಸುವುದಾಗಿ ಅನಾಮಿಕ ವ್ಯಕ್ತಿಯ ಹೆಸರಿನಲ್ಲಿ ಬಿಜೆಪಿ ಕಚೇರಿಗೆ ಬೆದರಿಕೆ ಪತ್ರ ರವಾನಿಸಲಾಗಿದೆ. ಇದೇ ವೇಳೆ ಪ್ರಧಾನಿ ಭದ್ರತೆಗೆ ನಿಯೋಜಿಸಲಾಗಿದ್ದ ವಿವಿಐಪಿ ಭದ್ರತಾ ಯೋಜನೆ ಮತ್ತು ಸಿಬ್ಬಂದಿಯ ವಿವರವೂ ಸೋರಿಕೆಯಾಗಿದೆ. ರಾಜ್ಯ ಪೊಲೀಸರಿಂದ ಗಂಭೀರ ಭದ್ರತಾ ಲೋಪವಾಗಿರುವುದು ಬೆಳಕಿಗೆ ಬಂದಿದೆ.

ಕೇರಳ ಬಿಜೆಪಿ ಕಚೇರಿಗೆ ಬಂದಿರುವ ಬೆದರಿಕೆ ಪತ್ರ ಸಂಚಲನ ಮೂಡಿಸಿದೆ. ಬೆದರಿಕೆ ಪತ್ರದ ಕುರಿತು ಪೊಲೀಸರು ಮತ್ತು ಗುಪ್ತಚರ ಸಂಸ್ಥೆಗಳು ತನಿಖೆಯನ್ನು ತೀವ್ರಗೊಳಿಸಿವೆ. ಎರ್ನಾಕುಲಂ ಮೂಲದ ಜೋಸೆಫ್ ಜಾನ್ ನಾಡುಮುತಮಿಲ್ ಎಂಬ ವ್ಯಕ್ತಿಯ ಹೆಸರಿನಲ್ಲಿ ಈ ಪತ್ರ ಬಂದಿದೆ.

ಒಂದು ವಾರದ ಹಿಂದೆಯೇ ಬಿಜೆಪಿ ಕಚೇರಿಗೆ ಈ ಪತ್ರ ರವಾನೆಯಾಗಿದೆ. ಪೊಲೀಸ್ ಮುಖ್ಯಸ್ಥರಿಗೆ ಇದನ್ನು ಹಸ್ತಾಂತರಿಸಲಾಗಿತ್ತಾದರೂ, ಘಟನೆ ಶನಿವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಪ್ರಧಾನಿ ಮೋದಿ ಅವರು ಸೋಮವಾರ ಸಂಜೆ 5 ಗಂಟೆಗೆ ಕೇರಳಕ್ಕೆ ಭೇಟಿ ನೀಡಲಿದ್ದಾರೆ. ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಚಾಲನೆ ನೀಡುವುದು ಸೇರಿದಂತೆ 2 ದಿನಗಳ ಭೇಟಿಯಲ್ಲಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಪ್ರಧಾನಿ ಮೋದಿ ಅವರು ಮಧ್ಯಪ್ರದೇಶದಿಂದ ವಿಶೇಷ ವಾಯುಪಡೆಯ ವಿಮಾನದಲ್ಲಿ ಕೇರಳಕ್ಕೆ ಆಗಮಿಸಿ, ಬಿಜೆಪಿ ರೋಡ್‌ಶೋನಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ತೇವರ ಸೇಕ್ರೆಡ್ ಹಾರ್ಟ್ ಕಾಲೇಜು ಮೈದಾನದಲ್ಲಿ ಬಿಜೆಪಿ ನೇತೃತ್ವದ ಯುವ ಸಂಘಟನೆಗಳು ಆಯೋಜಿಸಿರುವ 'ಯುವಂ' ಸಮಾವೇಶವನ್ನು ಉದ್ಘಾಟಿಸಲಿದ್ದಾರೆ.

ತಾಜ್ ಮಲಬಾರ್ ಹೋಟೆಲ್​ನಲ್ಲಿ ಪ್ರಧಾನಿ ರಾತ್ರಿ ವಿಶ್ರಾಂತಿ ಪಡೆಯಲಿದ್ದಾರೆ. ಮಂಗಳವಾರ ಬೆಳಗ್ಗೆ ಸೆಂಟ್ರಲ್ ರೈಲು ನಿಲ್ದಾಣದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಚಾಲನೆ ನೀಡಲಿದ್ದಾರೆ. ಬಳಿಕ ಸೆಂಟ್ರಲ್ ಸ್ಟೇಡಿಯಂನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡುವ ನಿರೀಕ್ಷೆಯಿದೆ. ಇದೇ ವೇಳೆ 4 ರೈಲ್ವೆ ಯೋಜನೆಗಳನ್ನು ಉದ್ಘಾಟಿಸಲಿರುವ ಮೋದಿ, ಟೆಕ್ನೋ ಸಿಟಿಗೆ ಶಂಕುಸ್ಥಾಪನೆ ಮತ್ತು ಕೊಚ್ಚಿ ವಾಟರ್ ಮೆಟ್ರೋವನ್ನು ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 12.40ಕ್ಕೆ ಸೂರತ್‌ಗೆ ಪ್ರಧಾನಿ ಮರಳಲಿದ್ದಾರೆ.

ಕೇರಳ ಪೊಲೀಸರಿಂದ ಭದ್ರತಾ ಲೋಪ: ಪ್ರಧಾನಿ ಮೋದಿ ಅವರ ಭೇಟಿಗೆ ಸಂಬಂಧಿಸಿದಂತೆ ರಾಜ್ಯ ಪೊಲೀಸರಿಂದ ಗಂಭೀರ ಭದ್ರತಾ ಲೋಪವಾಗಿದೆ. ಎಡಿಜಿಪಿ ಇಂಟೆಲಿಜೆನ್ಸ್ ಸಿದ್ಧಪಡಿಸಿದ್ದ ಭದ್ರತಾ ಯೋಜನೆ ಸೋರಿಕೆಯಾಗಿದೆ. ಭದ್ರತೆಯ ಹೊಣೆ ಹೊತ್ತಿರುವ ಅಧಿಕಾರಿಗಳ ವಿವರವೂ ಬಹಿರಂಗವಾಗಿದೆ.

49 ಪುಟಗಳ ವರದಿಯಲ್ಲಿ ವಿವಿಐಪಿ ಭದ್ರತೆಯ ಸಮಗ್ರ ಮಾಹಿತಿ ಇದೆ. ಪ್ರಧಾನಿ ಭೇಟಿ ನೀಡುವ ಜಿಲ್ಲೆಗಳ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಮಾತ್ರ ಹಸ್ತಾಂತರಿಸಲಾಗಿದೆ. ಈ ಕುರಿತು ಗುಪ್ತಚರ ವಿಭಾಗದ ಎಡಿಜಿಪಿ ಟಿಕೆ ವಿನೋದ್‌ ಕುಮಾರ್‌ ತನಿಖೆ ಆರಂಭಿಸಿದ್ದಾರೆ. ಭದ್ರತಾ ಯೋಜನೆಯ ಬಗ್ಗೆ ಹೊಸ ಪ್ಲಾನ್​ ರೆಡಿ ಮಾಡಿ, ಅಧಿಕಾರಿಗಳನ್ನು ನಿಯೋಜಿಸಲಾಗುವುದು ಎಂದು ಪೊಲೀಸ್​ ಇಲಾಖೆ ಮಾಹಿತಿ ನೀಡಿದೆ.

ಏತನ್ಮಧ್ಯೆ, ಕೇರಳ ಪೊಲೀಸರು ಮತ್ತು ಗುಪ್ತಚರ ಸಂಸ್ಥೆಗಳು ಪ್ರಧಾನಿ ನರೇಂದ್ರ ಮೋದಿಗೆ ಕೊಲೆ ಬೆದರಿಕೆ ಪತ್ರದ ಬಗ್ಗೆ ತಮ್ಮ ತನಿಖೆಯನ್ನು ತೀವ್ರಗೊಳಿಸಿವೆ.

ಓದಿ: ಭಾರತೀಯ ಯುವ ಜನರ ಮಾನಸಿಕ ಅರೋಗ್ಯದ ಮೇಲೆ ಕೋವಿಡ್​ ಮತ್ತು ಹವಮಾನ ಬದಲಾವಣೆಯಿಂದ ನಕಾರಾತ್ಮಕ ಪರಿಣಾಮ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.