ETV Bharat / bharat

ವಂಚಕ ಸುಕೇಶ್ ಪ್ರಕರಣ: ಇಡಿ ಮುಂದೆ ಹಾಜರಾದ ನಟಿ ನೋರಾ ಫತೇಹಿ - 200 ಕೋಟಿ ರೂಪಾಯಿ ಮನಿ ಲಾಂಡರಿಂಗ್ ಪ್ರಕರಣ

30 ವರ್ಷದ ನಟಿ ನೋರಾ ಫತೇಹಿ ಅವರನ್ನು ಈ ಹಿಂದೆಯೂ ತನಿಖಾ ಸಂಸ್ಥೆಗಳು ವಿಚಾರಣೆ ನಡೆಸಿದ್ದವು. ಈ ಬಾರಿ ಸುಕೇಶ್ ಚಂದ್ರಶೇಖರ್ ಕುರಿತು ವಿಚಾರಣೆ ನಡೆಸಲಾಗುವುದು ಮತ್ತು ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ)ಯ ಸೆಕ್ಷನ್‌ಗಳ ಅಡಿಯಲ್ಲಿ ಆಕೆಯ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗುವುದು ಎಂದು ಮೂಲಗಳು ತಿಳಿಸಿವೆ.

ವಂಚನೆಯ ಪ್ರಕರಣದ ಆರೋಪಿ ಸುಕೇಶ್ ಚಂದ್ರಶೇಖರ್
Sukesh Chandrasekhar case: Actress Nora Fatehi appears before ED
author img

By

Published : Dec 2, 2022, 4:32 PM IST

ನವದೆಹಲಿ: ವಂಚನೆಯ ಪ್ರಕರಣದ ಆರೋಪಿ ಸುಕೇಶ್ ಚಂದ್ರಶೇಖರ್ ಮತ್ತು ಸಹಚರರ ವಿರುದ್ಧ ನಡೆಯುತ್ತಿರುವ 200 ಕೋಟಿ ರೂಪಾಯಿ ಮನಿ ಲಾಂಡರಿಂಗ್ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ತನ್ನ ಹೇಳಿಕೆಯನ್ನು ದಾಖಲಿಸಲು ಬಾಲಿವುಡ್ ನಟಿ ನೋರಾ ಫತೇಹಿ ಶುಕ್ರವಾರ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

  • #WATCH | Nora Fatehi arrives at the Enforcement Directorate office in Delhi for questioning in Rs 200-crore money laundering case linked to conman Sukesh Chandrasekhar. pic.twitter.com/LwEOogQDTJ

    — ANI (@ANI) December 2, 2022 " class="align-text-top noRightClick twitterSection" data=" ">

30 ವರ್ಷದ ನಟಿ ನೋರಾ ಫತೇಹಿ ಅವರನ್ನು ಈ ಹಿಂದೆಯೂ ತನಿಖಾ ಸಂಸ್ಥೆಗಳು ವಿಚಾರಣೆ ನಡೆಸಿದ್ದವು. ಈ ಬಾರಿ ಸುಕೇಶ್ ಚಂದ್ರಶೇಖರ್ ಕುರಿತು ವಿಚಾರಣೆ ನಡೆಸಲಾಗುವುದು ಮತ್ತು ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ)ಯ ಸೆಕ್ಷನ್‌ಗಳ ಅಡಿ ನಟಿಯ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗುವುದು ಎಂದು ಮೂಲಗಳು ತಿಳಿಸಿವೆ. ಸೆಪ್ಟೆಂಬರ್‌ನಲ್ಲಿ ಆರ್ಥಿಕ ಅಪರಾಧಗಳ ವಿಭಾಗದ ಮುಂದೆ ಹಾಜರಾಗಿದ್ದ ನೋರಾ ಫತೇಹಿ, ತಾನು ಈ ಪಿತೂರಿಯ ಬಲಿಪಶುವಾಗಿದ್ದು, ಪಿತೂರಿಯಲ್ಲಿ ತಾವು ಭಾಗಿಯಾಗಿಲ್ಲ ಎಂದು ಹೇಳಿಕೊಂಡಿದ್ದರು. ಸುಕೇಶ್ ಜೊತೆಗಿನ ಚಾಟ್‌ನ ಸ್ಕ್ರೀನ್‌ಶಾಟ್‌ಗಳನ್ನು ಆವರು ಪೊಲೀಸರಿಗೆ ತೋರಿಸಿದ್ದರು.

ಸುಕೇಶ್ ಚಂದ್ರಶೇಖರ್ ರೋಹಿಣಿ ಜೈಲಿನಲ್ಲಿದ್ದಾಗ 200 ಕೋಟಿ ರೂಪಾಯಿ ಮೌಲ್ಯದ ಸುಲಿಗೆ ದಂಧೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಜೈಲಿನಲ್ಲಿರುವ ಮಾಜಿ ರಾನ್‌ಬಾಕ್ಸಿ ಮಾಲೀಕ ಶಿವಿಂದರ್ ಸಿಂಗ್ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಿಸುವುದಾಗಿ ಹೇಳಿ ಅವರ ಪತ್ನಿ ಅದಿತಿ ಸಿಂಗ್ ಗೆ ಈ ವಂಚನೆ ಎಸಗಲಾಗಿದೆ ಎಂದು ಆರೋಪಿಸಲಾಗಿದೆ.

ಇಡಿ ಈ ಹಿಂದೆ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರನ್ನು ಪ್ರಕರಣದಲ್ಲಿ ಆರೋಪಿ ಎಂದು ಹೆಸರಿಸಿತ್ತು. ಆದರೆ ಫತೇಹಿ ಅವರ ಹೇಳಿಕೆಯನ್ನು ಈಗ ಅದೇ ಪ್ರಾಸಿಕ್ಯೂಷನ್ ದೂರಿನಲ್ಲಿ ಸೇರಿಸಲಾಗಿದೆ.

ಅದಿತಿ ಸಿಂಗ್ ಮತ್ತು ಇತರರಿಗೆ ವಂಚಿಸಿ ಗಳಿಸಲಾದ 200 ಕೋಟಿ ರೂಪಾಯಿ ಹಣವನ್ನು ಆರೋಪಿ ಸುಕೇಶ್ ಚಂದ್ರಶೇಖರ್ ಈತ ಜಾಕ್ವೆಲಿನ್ ಫರ್ನಾಂಡಿಸ್ ಅವರಿಗೆ ಉಡುಗೊರೆಗಳನ್ನು ಖರೀದಿಸಲು ಬಳಸಿದ್ದಾನೆ ಎಂದು ಸಂಸ್ಥೆ ಆರೋಪಿಸಿದೆ. ಕರ್ನಾಟಕದ ಬೆಂಗಳೂರು ಮೂಲದ ಸುಕೇಶ್ ಚಂದ್ರಶೇಖರ್ ಪ್ರಸ್ತುತ ದೆಹಲಿ ಜೈಲಿನಲ್ಲಿದ್ದಾನೆ ಮತ್ತು ಆತನ ವಿರುದ್ಧ 10 ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ.

ಇದನ್ನೂ ಓದಿ: ಟ್ಯಾಬ್ಲೆಟ್‌ ಪೂರೈಕೆ ಒಪ್ಪಂದ ಸಂದರ್ಭ ಲಂಚಕ್ಕೆ ಬೇಡಿಕೆ: ಕೇಜ್ರಿವಾಲ್, ಸಿಸೋಡಿಯಾ ಮೇಲೆ ಸುಕೇಶ್​ ಆರೋಪ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.