ನವದೆಹಲಿ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಅಭಿವೃದ್ಧಿಪಡಿಸಿದ ಸೂಪರ್‌ಸಾನಿಕ್ ಕ್ಷಿಪಣಿ ನೆರವಿನ ಟಾರ್ಪಿಡೊ ಸಿಸ್ಟಂ ಅನ್ನು ಇಂದು ಒಡಿಶಾದ ವೀಲರ್ ದ್ವೀಪದಿಂದ ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು.
ಈ ಮಾದರಿಯು ಮುಂದಿನ ಪೀಳಿಗೆಯ ಕ್ಷಿಪಣಿ ಆಧಾರಿತ ಸ್ಟ್ಯಾಂಡ್ ಆಫ್ ಟಾರ್ಪಿಡೊ ಸುಧಾರಿತ ವ್ಯವಸ್ಥೆಯಾಗಿರಲಿದೆ. ಉಡಾವಣೆ ವೇಳೆ ಕ್ಷಿಪಣಿಯು ಪೂರ್ಣ ಪ್ರಮಾಣದ ಸಾಮರ್ಥ್ಯದ ಪ್ರಾತ್ಯಕ್ಷಿಕೆ ನೀಡಿದೆ. ಜಲಾಂತರ್ಗಾಮಿ ಯುದ್ಧ ನೌಕೆಯ ಸಾಮರ್ಥ್ಯವನ್ನು ಹೆಚ್ಚಿಸಲು ಈ ವ್ಯವಸ್ಥೆಯನ್ನು ರೂಪಿಸಲಾಗಿದೆ ಎಂದು ಡಿಆರ್‌ಡಿಒ ತಿಳಿಸಿದೆ.
ಎಲೆಕ್ಟ್ರೋ ಆಪ್ಟಿಕ್ ಟೆಲಿಮೆಟ್ರಿ ಸಿಸ್ಟಮ್, ರಾಡಾರ್‌ಗಳು, ಡೌನ್ ರೇಂಜ್ ಇನ್‌ಸ್ಟ್ರುಮೆಂಟೇಶನ್ ಮತ್ತು ಡೌನ್ ರೇಂಜ್ ಹಡಗುಗಳ ಮೇಲ್ವಿಚಾರಣೆಯಲ್ಲಿ ಉಡಾವಣೆ ಮಾಡಲಾಯಿತು. ಈ ಕ್ಷಿಪಣಿ ವ್ಯವಸ್ಥೆಯು ಸುಧಾರಿತ ತಂತ್ರಜ್ಞಾನಗಳನ್ನು ಒಳಗೊಂಡಿದೆ.
ಇದನ್ನೂ ಓದಿ: ಜಮ್ಮು- ಕಾಶ್ಮೀರದ ಝೀವಾನ್ನಲ್ಲಿ ಉಗ್ರರ ದಾಳಿ.. 8 ಯೋಧರಿಗೆ ಗಾಯ.. ನಾಲ್ವರ ಸ್ಥಿತಿ ಗಂಭೀರ
ಕ್ಷಿಪಣಿಯನ್ನು ನೆಲದ ಮೇಲಿಂದ ಮೊಬೈಲ್ ಲಾಂಚರ್ ಮೂಲಕ ಉಡಾವಣೆ ಮಾಡಬಹುದಾಗಿದೆ. ಕ್ಷಿಪಣಿಯು ನೌಕಾಸ್ಫೋಟಕ ಹೊಂದಿದ್ದು, ಪ್ಯಾರಾಚೂಟ್ ಮತ್ತು ಸ್ಫೋಟಕ ಬಿಡುಗಡೆ ಮಾಡುವ ವ್ಯವಸ್ಥೆಯನ್ನು ಒಳಗೊಂಡಿದೆ.
ಸೂಪರ್ಸಾನಿಕ್ ಕ್ಷಿಪಣಿ ನೆರವಿನ ಟಾರ್ಪಿಡೊ ವ್ಯವಸ್ಥೆಯ ಯಶಸ್ವಿ ಪರೀಕ್ಷೆಯ ಬಳಿಕ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಇದರ ಸಿದ್ಧತೆಯಲ್ಲಿ ತೊಡಗಿದ್ದ ತಂಡಗಳನ್ನು ಅಭಿನಂದಿಸಿದ್ದಾರೆ. ಈ ವ್ಯವಸ್ಥೆಯ ಅಭಿವೃದ್ಧಿಯು ಭವಿಷ್ಯದ ರಕ್ಷಣಾ ವ್ಯವಸ್ಥೆಗಳನ್ನು ಸುಧಾರಿಸುವ ಅತ್ಯುತ್ತಮ ವ್ಯವಸ್ಥೆಯಾಗಿದೆ ಎಂದು ಶ್ಲಾಘಿಸಿದರು.