ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಕಾರ್ಯದರ್ಶಿ ನೀಡಿದ್ದ ಹಕ್ಕು ಚ್ಯುತಿ ಉಲ್ಲಂಘನೆ ನೋಟಿಸ್ ವಿರುದ್ಧವಾಗಿ ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಬ್ ಗೋಸ್ವಾಮಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಎರಡು ವಾರಗಳ ಕಾಲ ಮುಂದೂಡಲಾಗಿದೆ.
ಮಹಾರಾಷ್ಟ್ರ ಸಿಎಂ ವಿರುದ್ಧ ಹೇಳಿಕೆಗಳನ್ನು ನೀಡಿದ ಕಾರಣದಿಂದ ಅರ್ನಬ್ ಗೋಸ್ವಾಮಿಗೆ ಮಹಾರಾಷ್ಟ್ರದ ವಿಧಾನಸಭಾ ಕಾರ್ಯದರ್ಶಿ ಹಕ್ಕು ಚ್ಯುತಿ ಉಲ್ಲಂಘನೆಯ ನೋಟಿಸ್ ಜಾರಿ ಮಾಡಿದ್ದರು. ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದ ಅನರ್ಬ್ ಗೋಸ್ವಾಮಿ ಹಕ್ಕು ಚ್ಯುತಿ ನೋಟಿಸ್ ವಿರುದ್ಧ ಸುಪ್ರೀಂ ಕೋರ್ಟ್ಗೆ ಮೊರೆಹೋಗಿದ್ದರು.
ಮಹಿಳಾ ಪೊಲೀಸ್ ಅಧಿಕಾರಿ ಮೇಲೆ ಹಲ್ಲೆ ಪ್ರಕರಣ: ಅರ್ನಬ್ ದಂಪತಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಮುಂದೂಡಿಕೆ
ಸುಪ್ರೀಂಕೋರ್ಟ್ನ ಮುಖ್ಯನ್ಯಾಯಮೂರ್ತಿ ಎಸ್.ಎ.ಬೊಬ್ಡೆ ಹಾಗೂ ನ್ಯಾಯಮೂರ್ತಿ ಎ.ಎಸ್.ಬೋಪಣ್ಣ, ವಿ.ರಾಮಸುಬ್ರಮಣಿಯನ್ ಅವರಿದ್ದ ಪೀಠ ಅರ್ಜಿಯ ವಿಚಾರಣೆ ನಡೆಸಿದ್ದು, ವಿಚಾರಣೆಯನ್ನು ಎರಡು ವಾರಗಳ ಕಾಲ ಮುಂದೂಡಿದೆ.