ನವದೆಹಲಿ: ಭಾರತದ 50 ನೇ ಮುಖ್ಯ ನ್ಯಾಯಮೂರ್ತಿಯಾಗಿ ಡಿವೈ ಚಂದ್ರಚೂಡ್ ಅವರು ನವೆಂಬರ್ 9 ರಂದು ಅಧಿಕಾರ ವಹಿಸಿಕೊಂಡ ನಂತರ ಸುಪ್ರೀಂ ಕೋರ್ಟ್ 6,844 ಪ್ರಕರಣಗಳನ್ನು ವಿಲೇವಾರಿ ಮಾಡಿದೆ. ನವೆಂಬರ್ 9 ರಿಂದ ಡಿಸೆಂಬರ್ 16 ರ ಅವಧಿಯಲ್ಲಿ 5,898 ಹೊಸ ಪ್ರಕರಣಗಳು ದಾಖಲಾಗಿದ್ದು, ಇದೇ ಅವಧಿಯಲ್ಲಿ ಸುಪ್ರೀಂ ಕೋರ್ಟ್ ಒಟ್ಟು 6,844 ಪ್ರಕರಣಗಳನ್ನು ವಿಲೇವಾರಿ ಮಾಡಿದೆ.
ಸುಪ್ರೀಂ ಕೋರ್ಟ್ ಆಡಳಿತವು ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ ನವೆಂಬರ್ 9 ರಿಂದ ಡಿಸೆಂಬರ್ 16 ರವರೆಗೆ 5,898 ಪ್ರಕರಣಗಳನ್ನು ದಾಖಲಿಸಲಾಗಿದೆ. ಒಟ್ಟು 2,511 ವರ್ಗಾವಣೆ ಮತ್ತು ಜಾಮೀನು ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ.
ಸಿಜೆಐ ಚಂದ್ರಚೂಡ್ ಅವರು ನವೆಂಬರ್‌ನಲ್ಲಿ ಜಾಮೀನು ಮತ್ತು ವರ್ಗಾವಣೆ ಅರ್ಜಿಗಳ ತ್ವರಿತ ವಿಲೇವಾರಿಗೆ ಒತ್ತು ನೀಡಿದ್ದರು ಮತ್ತು ವೈಯಕ್ತಿಕ ಸ್ವಾತಂತ್ರ್ಯವನ್ನು ಒಳಗೊಂಡಿರುವ ಪ್ರಕರಣಗಳಿಗೆ ಆದ್ಯತೆ ನೀಡಲಾಗುವುದು ಎಂದು ಘೋಷಿಸಿದ್ದರು. ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಪಟ್ಟಂತೆ ಜಾಮೀನು ವಿಷಯಗಳಿಗೆ ಪ್ರಾಮುಖ್ಯತೆ ನೀಡಬೇಕಾಗಿದೆ ಎಂದು ಅವರು ಹೇಳಿದ್ದರು.
ಸುಪ್ರೀಂ ಕೋರ್ಟ್‌ನ ಪ್ರತಿ ಪೀಠವು ವಾರದ ಪ್ರತಿ ದಿನ 10 ಜಾಮೀನು ವಿಷಯಗಳು ಮತ್ತು 10 ವರ್ಗಾವಣೆ ಅರ್ಜಿಗಳ ವಿಚಾರಣೆ ನಡೆಸಲಿದೆ ಎಂದು ಅವರು ಹೇಳಿದ್ದರು.