ನವದೆಹಲಿ: ದೇಶದಲ್ಲಿ ಸಾಕಷ್ಟು ಸಂಚಲನ ಸೃಷ್ಟಿಸಿದ್ದ ಇಸ್ರೇಲ್ ಮೂಲದ ಪೆಗಾಸಸ್ ಆ್ಯಪ್ ಮೇಲೆ ಗೂಢಚಾರಿಕೆ ಆರೋಪ ಪ್ರಕರಣ ಕುರಿತ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಮುಂದಾಗಿದ್ದು, ತಜ್ಞರ ಸಮಿತಿ ರಚಿಸಿ, ತನಿಖೆಗೆ ಆದೇಶ ನೀಡಿದೆ.
ಮೂವರು ತಜ್ಞರ ಸಮಿತಿಯನ್ನು ಸುಪ್ರೀಂಕೋರ್ಟ್ ರಚಿಸಿದ್ದು, ಈ ಸಮಿತಿಗೆ ಸುಪ್ರೀಂಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಆರ್.ವಿ.ರವೀಂದ್ರನ್ ಮುಖ್ಯಸ್ಥರಾಗಿರಲಿದ್ದಾರೆ. ಅಲೋಕ್ ಜೋಷಿ ಮತ್ತು ಸಂದೀಪ್ ಒಬೇರಾಯ್ ಈ ಸಮಿತಿಯ ಸದಸ್ಯರಾಗಿರಲಿದ್ದಾರೆ.
ಆರೋಪಗಳನ್ನು ಕೂಲಂಕಷವಾಗಿ ತನಿಖೆ ನಡೆಸಿ, 8 ವಾರಗಳ ನಂತರ ನ್ಯಾಯಾಲಯದ ಮುಂದೆ ವರದಿ ಸಲ್ಲಿಸಬೇಕೆಂದು ತನಿಖಾ ಸಮಿತಿಗೆ ಸೂಚನೆ ನೀಡಲಾಗಿದೆ.
ಕೋರ್ಟ್ನಿಂದ ನಿಗಾವಹಿಸುವ ಸ್ವತಂತ್ರ ತನಿಖಾ ಸಂಸ್ಥೆಯನ್ನು ರಚಿಸಿ, ಪೆಗಾಸಸ್ ಪ್ರಕರಣವನ್ನು ನಡೆಸಬೇಕೆಂದು ಕೋರಿದ್ದ ಅರ್ಜಿಗಳನ್ನು ವಿಚಾರಣೆ ನಡೆಸುವ ವೇಳೆ ಸುಪ್ರೀಂಕೋರ್ಟ್ ಈ ಆದೇಶ ನೀಡಿದೆ.
ಇದನ್ನೂ ಓದಿ: ಟೀಂ ಇಂಡಿಯಾ ಪರಾಭವಗೊಂಡ ಬಳಿಕ ಸಂಭ್ರಮಾಚರಣೆ: ಸ್ಕಾಲರ್ಶಿಪ್ ಪಡೆಯುತ್ತಿದ್ದ ಮೂವರು ವಿದ್ಯಾರ್ಥಿಗಳ ಅಮಾನತು