ETV Bharat / bharat

'ಪರಿಸರಕ್ಕೆ ಹಾನಿಯಾಗಲ್ಲ' - ಸೆಂಟ್ರಲ್ ವಿಸ್ಟಾ ಯೋಜನೆಯಡಿ ಸಂಸತ್​ ಭವನ ನಿರ್ಮಾಣಕ್ಕೆ ಸುಪ್ರೀಂ ಅಸ್ತು - Central Vista project

Supreme Court gives a go-ahead to the redevelopment
ಸೆಂಟ್ರಲ್ ವಿಸ್ಟಾ ಯೋಜನೆ ನವೀಕರಣಕ್ಕೆ ಸುಪ್ರೀಂ ಅಸ್ತು
author img

By

Published : Jan 5, 2021, 10:48 AM IST

Updated : Jan 5, 2021, 11:34 AM IST

10:43 January 05

ಸೆಂಟ್ರಲ್ ವಿಸ್ಟಾ ಯೋಜನೆಯಡಿ ನೂತನ ಸಂಸತ್​ ಭವನ ನಿರ್ಮಾಣಕ್ಕಿದ್ದ ಅಡೆತಡೆಗಳು ಇಂದು ಸುಪ್ರೀಂಕೋರ್ಟ್ ತೀರ್ಪಿನ ಮೂಲಕ ದೂರವಾಗಿವೆ.

ನವದೆಹಲಿ: ಕೇಂದ್ರ ಸರ್ಕಾರದ ಸೆಂಟ್ರಲ್ ವಿಸ್ಟಾ ಯೋಜನೆ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಗಳ ಬಗ್ಗೆ ಇಂದು ಸುಪ್ರೀಂಕೋರ್ಟ್ ತೀರ್ಪು ಪ್ರಕಟಿಸಿದ್ದು, ಯೋಜನೆಗೆ ಪರಿಸರ ಇಲಾಖೆ ನೀಡಿರುವ ಅನುಮತಿ ಎತ್ತಿಹಿಡಿದಿದೆ.  

2019ರಲ್ಲಿ ಘೋಷಣೆಯಾದ ಸೆಂಟ್ರಲ್ ವಿಸ್ಟಾ ಯೋಜನೆಯಡಿ ನೂತನ ಸಂಸತ್​ ಭವನ ನಿರ್ಮಾಣ ಕಾಮಗಾರಿಯೂ ಸೇರಿದೆ. ಆದರೆ, ಯೋಜನೆಯಿಂದ ಪರಿಸರಕ್ಕೆ ಹಾನಿಯಾಗಲಿದೆ, ಪರಿಸರ ನಿಯಮ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಹಾಗೂ ಯೋಜನೆಯ ನವೀಕರಣಕ್ಕೆ ಪರಿಸರ ಇಲಾಖೆ ನೀಡಿದ್ದ ಅನುಮತಿ ಪ್ರಶ್ನಿಸಿ ನ್ಯಾಯಾಲಯಕ್ಕೆ ಅರ್ಜಿಗಳು ಸಲ್ಲಿಕೆಯಾಗಿದ್ದವು.  

ಡಿಸೆಂಬರ್​ 7 ರಂದು ಕೂಡ ಅರ್ಜಿಗಳ ವಿಚಾರಣೆಯನ್ನು ನಡೆಸಿದ್ದ ಸುಪ್ರೀಂ, ಬಾಕಿಯಿರುವ ಅರ್ಜಿಗಳು ಇತ್ಯರ್ಥವಾಗುವವರೆಗೂ ಸೆಂಟ್ರಲ್​ ವಿಸ್ಟಾ ಯೋಜನೆಯಡಿ ಸಂಸತ್​ ಭವನ ನಿರ್ಮಾಣವಾಗುವ ಜಾಗದಲ್ಲಿ ಯಾವುದೇ ಮರಗಳನ್ನು ಕಡಿಯುವಂತಿಲ್ಲ. ಆ ಸ್ಥಳದಲ್ಲಿ ಯಾವುದೇ ಕಟ್ಟಡಗಳನ್ನು ತೆರವುಗೊಳಿಸುವಂತಿಲ್ಲ ಎಂದು ಸೂಚನೇ ನೀಡಿತ್ತು.  

ಇದನ್ನೂ ಓದಿ: ಇಂದು ಶ್ರೀಲಂಕಾಕ್ಕೆ ತೆರಳಲಿರುವ ವಿದೇಶಾಂಗ ಸಚಿವ ಡಾ.ಎಸ್.ಜೈಶಂಕರ್

ಇಂದು ಉಳಿದ ಅರ್ಜಿಗಳ ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ಎ.ಎಂ.ಖಾನ್ವಿಲ್ಕರ್ ನೇತೃತ್ವದ ನ್ಯಾಯಪೀಠ, ಯೋಜನೆಯಿಂದ ಪರಿಸರಕ್ಕೆ ಯಾವುದೇ ಸಮಸ್ಯೆ ಅಥವಾ ಹಾನಿ ಉಂಟಾಗುವುದಿಲ್ಲ ಎಂದು ಸ್ಪಷ್ಟನೆ ನೀಡಿ, ಸೆಂಟ್ರಲ್ ವಿಸ್ಟಾ ಯೋಜನೆಯ ನವೀಕರಣಕ್ಕೆ ಗ್ರೀನ್​ ಸಿಗ್ನಲ್​ ನೀಡಿದೆ.  

ಹಾಗೆಯೇ ನಿರ್ಮಾಣ ಕಾರ್ಯ ಪ್ರಾರಂಭಿಸಲು ಪಾರಂಪರಿಕಾ ಸಂರಕ್ಷಣಾ ಸಮಿತಿಯಿಂದ ಅನುಮೋದನೆ ಪಡೆಯುವುದು ಅಗತ್ಯ ಎಂದು ಕೋರ್ಟ್ ಹೇಳಿದೆ.

ಸಂಸತ್ತಿನ ನೂತನ ಕಟ್ಟಡವನ್ನು ಹೊಸದಾಗಿ ಈಗಿರುವ ಸಂಸತ್ ಭವನದ 118ನೇ ಫ್ಲಾಟ್​ನಲ್ಲಿ ಸೆಂಟ್ರಲ್​ ವಿಸ್ಟಾ ಯೋಜನೆಯಡಿ ನಿರ್ಮಿಸಲು ಕೇಂದ್ರ ಸರ್ಕಾರ ನಿರ್ಧರಿಸಿತ್ತು. 971 ಕೋಟಿ ರೂ. ವೆಚ್ಚದಲ್ಲಿ 64,500 ಚದರ ಮೀಟರ್ ಪ್ರದೇಶದಲ್ಲಿ ಕಟ್ಟಡ ನಿರ್ಮಾಣವಾಗಲಿದ್ದು, 2022ರ ವೇಳೆಗೆ ಕಾಮಗಾರಿ ಪೂರ್ಣಗೊಳ್ಳುವ ನಿರೀಕ್ಷೆಯನ್ನು ಭಾರತ ಸರ್ಕಾರ ಇಟ್ಟುಕೊಂಡಿದೆ. ಕಳೆದ ಡಿಸೆಂಬರ್ 10ರಂದು ಕಟ್ಟಡ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ ನೆರವೇರಿಸಿದ್ದರು.

Last Updated : Jan 5, 2021, 11:34 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.