ETV Bharat / bharat

ಮರಾಠ ಮೀಸಲಾತಿ : ಕೇಂದ್ರ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್‌!

ಕೇಂದ್ರ ಸರ್ಕಾರವು ಈಗ ಮಧ್ಯಪ್ರವೇಶಿಸಿ ಮರಾಠಾ ಸಮುದಾಯಕ್ಕೆ ನ್ಯಾಯ ಒದಗಿಸಬೇಕು ಎಂದು ಮರಾಠಾ ಮೀಸಲಾತಿ ಅರ್ಜಿದಾರ ವಿನೋದ್ ಪಾಟೀಲ್ ಎಂಬುವರು ಒತ್ತಾಯಿಸಿದ್ದಾರೆ. ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಆದರೆ, ಈಗ ಅಧಿಕಾರವು ಕೇಂದ್ರ ಸರ್ಕಾರದ ಕೈಯಲ್ಲಿದೆ ಎಂದು ಒತ್ತಾಯಿಸಿದ್ದಾರೆ..

ಸುಪ್ರೀಂ
ಸುಪ್ರೀಂ
author img

By

Published : Jul 2, 2021, 6:32 AM IST

ನವದೆಹಲಿ : ಮರಾಠ ಮೀಸಲಾತಿಯನ್ನು ಮರು ಪರಿಶೀಲಿಸುವಂತೆ ಕೋರಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ. ಮೇ 5ರಂದು ಸುಪ್ರೀಂಕೋರ್ಟ್ ಮರಾಠ ಮೀಸಲಾತಿಯನ್ನು ರದ್ದುಗೊಳಿಸಿದ ಹಿನ್ನೆಲೆ, ಮೇ 13ರಂದು ಕೇಂದ್ರ ಸರ್ಕಾರ ಮರು ಪರಿಶೀಲನಾ ಅರ್ಜಿ ಸಲ್ಲಿಸಿತ್ತು. ಅಲ್ಲದೆ ನ್ಯಾಯಾಲಯದ ಐವರು ಸದಸ್ಯರ ಪೀಠವು ತೀರ್ಪನ್ನು ಮರುಪರಿಶೀಲಿಸಬೇಕೆಂದು ಕೇಂದ್ರ ಸರ್ಕಾರ ಮನವಿ ಮಾಡಿತ್ತು.

ಮರಾಠಾ ಮೀಸಲಾತಿಯನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದಾಗ ಕೆಲ ಅಂಶಗಳನ್ನು ದಾಖಲಿಸಲಾಗಿದೆ. ಮೀಸಲಾತಿ ಮಿತಿಯನ್ನು ಶೇ.50ಕ್ಕಿಂತ ಹೆಚ್ಚಿಸಲು ಸಾಧ್ಯವಿಲ್ಲ. ತುರ್ತು ಪರಿಸ್ಥಿತಿ ಘೋಷಿಸುವ ಮೂಲಕ ಮೀಸಲಾತಿ ಮಿತಿಯನ್ನು ಹೆಚ್ಚಿಸಲಾಗಿದ್ದು, ನಿಯಮಗಳ ಉಲ್ಲಂಘನೆಯಾಗಿದೆ ಎಂದು ನ್ಯಾಯಪೀಠ ಹೇಳಿದೆ.

ಕೇಂದ್ರ ಸರ್ಕಾರವು ಈಗ ಮಧ್ಯಪ್ರವೇಶಿಸಿ ಮರಾಠಾ ಸಮುದಾಯಕ್ಕೆ ನ್ಯಾಯ ಒದಗಿಸಬೇಕು ಎಂದು ಮರಾಠಾ ಮೀಸಲಾತಿ ಅರ್ಜಿದಾರ ವಿನೋದ್ ಪಾಟೀಲ್ ಎಂಬುವರು ಒತ್ತಾಯಿಸಿದ್ದಾರೆ. ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಆದರೆ, ಈಗ ಅಧಿಕಾರವು ಕೇಂದ್ರ ಸರ್ಕಾರದ ಕೈಯಲ್ಲಿದೆ ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ:ಶಬ್ದ ಮಾಲಿನ್ಯ: ರಾಜ್ಯ ಪೊಲೀಸ್ ಮಹಾನಿರ್ದೇಶಕರ ಹೇಳಿಕೆಗೆ ಹೈಕೋರ್ಟ್ ಆಕ್ಷೇಪ

ಈ ಬಗ್ಗೆ ರಾಜ್ಯ ಸರ್ಕಾರ ನಿರ್ಧಾರ ತೆಗೆದುಕೊಂಡು ಕೇಂದ್ರಕ್ಕೆ ಕಳಿಸಬೇಕೆಂದು ವಿನೋದ್ ಪಾಟೀಲ್ ಒತ್ತಾಯಿಸಿದ್ದಾರೆ. ತಮ್ಮ ಪಕ್ಷ ಅಧಿಕಾರದಲ್ಲಿರುವುದರಿಂದ ಕೇಂದ್ರ ಸರ್ಕಾರವನ್ನು ಅನುಸರಿಸಲು ಮತ್ತು ಮರಾಠಾ ಮೀಸಲಾತಿ ಸಮಸ್ಯೆಯನ್ನು ಬಗೆಹರಿಸಲು ನಾನು ಪ್ರತಿಪಕ್ಷಗಳಿಗೆ ವಿನಂತಿಸುತ್ತೇನೆ ಎಂದು ಪಾಟೀಲ್ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.