ETV Bharat / bharat

ವಡಾ ಪಾವ್ ಆಸೆ ತೋರಿಸಿ ಅಪ್ರಾಪ್ತೆ ಮೇಲೆ ಅತ್ಯಾಚಾರ, ಕೊಲೆ : ಆರೋಪಿಗೆ ಮರಣದಂಡನೆ ಶಿಕ್ಷೆ - 10 ವರ್ಷದ ಬಾಲಕಿ ಮೇಲೆ ಅತ್ಯಾಚಾರ

ಸೂರತ್‌ನಗರ ಪೊಲೀಸರು ಪ್ರಕರಣ ಕುರಿತು 13 ದಿನಗಳಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ನ್ಯಾಯಾಲಯವು ನಿನ್ನೆ ಅಪರಾಧಿಗೆ ಮರಣದಂಡನೆ ಶಿಕ್ಷೆ ವಿಧಿಸಿ, ಸಂತ್ರಸ್ತೆಯ ಕುಟುಂಬಕ್ಕೆ 15 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಆದೇಶಿಸಿದೆ..

rape
rape
author img

By

Published : Dec 17, 2021, 10:45 AM IST

ಗಾಂಧಿನಗರ : ಗುಜರಾತ್​ನ ಪಾಂಡೆಸರಾ ಪ್ರದೇಶದಲ್ಲಿ 10 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ ಆರೋಪಿಗೆ ಸೂರತ್‌ನ ವಿಶೇಷ ನ್ಯಾಯಾಲಯವು ಗುರುವಾರ ಮರಣದಂಡನೆ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.

ದಿನೇಶ್ ದಶರತ್ ಬಸಾನೆ (24) ಶಿಕ್ಷೆಗೆ ಒಳಗಾದ ಅಪರಾಧಿ. ಈತ 2020ರ ಡಿಸೆಂಬರ್ 7ರಂದು ತನ್ನ ಮನೆ ಬಳಿ ಆಟವಾಡುತ್ತಿದ್ದ ಅಪ್ರಾಪ್ತ ಬಾಲಕಿಗೆ ವಡಾ ಪಾವ್ ಆಸೆ ತೋರಿಸಿ, ನಿರ್ಜನ ಸ್ಥಳಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದ. ಅಷ್ಟೇ ಅಲ್ಲ, ಬಾಲಕಿಗೆ ಇಟ್ಟಿಗೆಯಿಂದ ಹೊಡೆದು ಕೊಂದು, ಸ್ಥಳದಿಂದ ಪರಾರಿಯಾಗಿದ್ದ.

ಮರಣೋತ್ತರ ಪರೀಕ್ಷೆ ವರದಿಯಲ್ಲಿ ಬಾಲಕಿಯ ದೇಹದ ಮೇಲೆ ಸುಮಾರು 47 ಗಾಯದ ಗುರುತುಗಳು ಕಂಡು ಬಂದಿತ್ತು. ಈ ಕುರಿತು ಪೋಸ್ಕೋ ಕಾಯ್ದೆ ಅಡಿ ಪ್ರಕರಣ ದಾಖಲಾಗಿತ್ತು.

ಸೂರತ್‌ನಗರ ಪೊಲೀಸರು ಪ್ರಕರಣ ಕುರಿತು 13 ದಿನಗಳಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ನ್ಯಾಯಾಲಯವು ನಿನ್ನೆ ಅಪರಾಧಿಗೆ ಮರಣದಂಡನೆ ಶಿಕ್ಷೆ ವಿಧಿಸಿ, ಸಂತ್ರಸ್ತೆಯ ಕುಟುಂಬಕ್ಕೆ 15 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಆದೇಶಿಸಿದೆ.

ಕಳೆದ 10 ದಿನಗಳಲ್ಲಿ ಪೋಸ್ಕೋ ಕಾಯ್ದೆಯಡಿ ಸೂರತ್ ನ್ಯಾಯಾಲಯ ನೀಡಿದ 2ನೇ ಮರಣದಂಡನೆ ಶಿಕ್ಷೆ ಇದಾಗಿದೆ. ಡಿಸೆಂಬರ್ 7ರಂದು 2 ವರ್ಷದ ಬಾಲಕಿ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆಗೆ ಸಂಬಂಧಿಸಿದಂತೆ 35 ವರ್ಷದ ವ್ಯಕ್ತಿಗೆ ಮರಣದಂಡನೆ ಶಿಕ್ಷೆ ವಿಧಿಸಿತ್ತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.