ನವದೆಹಲಿ: ಕೋವಿಡ್‌ನಿಂದಾಗಿ ಅಂತಾರಾಷ್ಟ್ರೀಯ ಪ್ರಯಾಣಿಕ ವಿಮಾನ ಸೇವೆಗಳ ಮೇಲಿನ ನಿಷೇಧವನ್ನು ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಆಗಸ್ಟ್ 31 ರವರೆಗೆ ವಿಸ್ತರಿಸಿದೆ. ಆದರೆ ಆಯ್ದ ಮಾರ್ಗಗಳಲ್ಲಿ ಅಧಿಕಾರಿಗಳ ಅನುಮತಿಯೊಂದಿಗೆ ಅಂತಾರಾಷ್ಟ್ರೀಯ ಪ್ರಯಾಣವನ್ನು ಅನುಮತಿಸಲಾಗುವುದು ಎಂದು ಡಿಜಿಸಿಎ ಸ್ಪಷ್ಟಪಡಿಸಿದೆ.
ಕೊರೊನಾ ವೈರಸ್ ಹರಡುತ್ತಿರುವ ಕಾರಣ ಕಳೆದ ವರ್ಷ ಮಾರ್ಚ್ 23 ರಿಂದ ಡಿಜಿಸಿಎ ಅಂತಾರಾಷ್ಟ್ರೀಯ ವಿಮಾನಯಾನಗಳನ್ನು ಸ್ಥಗಿತಗೊಳಿಸಿತ್ತು. ವಂದೇ ಭಾರತ್ ಮಿಷನ್ ಅಡಿ ಆಯ್ದ ದೇಶಗಳಿಗೆ ಮಾತ್ರ ವಿಮಾನ ಸೇವೆ ನೀಡಲಾಗುತ್ತಿದೆ.