ETV Bharat / bharat

ಸ್ವಚ್ಛ ಸರ್ವೇಕ್ಷಣ ಪ್ರಶಸ್ತಿ ಪ್ರಕಟ: ಸತತ ಏಳನೇ ಬಾರಿಗೆ ಇಂದೋರ್ 'ದೇಶದ ಸ್ವಚ್ಛ ನಗರಿ' - ಇಂದೋರ್ ಸ್ವಚ್ಛ ನಗರಿ

ಮಧ್ಯಪ್ರದೇಶದ ಇಂದೋರ್ ಸತತ ಏಳನೇ ಬಾರಿಗೆ ದೇಶದ ಸ್ವಚ್ಛನಗರಿ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಸ್ವಚ್ಛ ಸರ್ವೇಕ್ಷಣ ಪ್ರಶಸ್ತಿ ಇಂದು ಪ್ರಕಟವಾಗಿವೆ.

ದೇಶದ ಸ್ವಚ್ಛ ನಗರಿ
ದೇಶದ ಸ್ವಚ್ಛ ನಗರಿ
author img

By PTI

Published : Jan 11, 2024, 1:34 PM IST

ನವದೆಹಲಿ: ಕೇಂದ್ರ ಸರ್ಕಾರವು ವಾರ್ಷಿವಾಗಿ ನಡೆಸುವ ಸ್ವಚ್ಛತಾ ಸಮೀಕ್ಷೆಯಲ್ಲಿ ಮಧ್ಯಪ್ರದೇಶದ ಇಂದೋರ್ ಸತತ ಏಳನೇ ಬಾರಿಗೆ ದೇಶದ ಸ್ವಚ್ಛನಗರಿ ಪ್ರಶಸ್ತಿಯನ್ನು ಬಾಚಿಕೊಂಡಿದೆ. ಗುಜರಾತ್​ನ ಸೂರತ್ ಎರಡನೇ ಸ್ಥಾನ, ನವಿ ಮುಂಬೈ ಮೂರನೇ ಸ್ಥಾನವನ್ನು ಉಳಿಸಿಕೊಂಡಿದೆ.

2023 ನೇ ಸಾಲಿನ ಸ್ವಚ್ಛ ನಗರಗಳ ಫಲಿತಾಂಶ ಪ್ರಕಟವಾಗಿದ್ದು, ಅತ್ಯುತ್ತಮ ರಾಜ್ಯಗಳ ಪೈಕಿ ಮಹಾರಾಷ್ಟ್ರವು ಅಗ್ರಸ್ಥಾನ ಪಡೆದುಕೊಂಡಿದೆ. ಮಧ್ಯಪ್ರದೇಶ ಮತ್ತು ಛತ್ತೀಸ್​ಗಢ ನಂತರದ ಸ್ಥಾನದಲ್ಲಿದೆ. ಗಂಗಾ ನದಿ ಪಾತ್ರದ ನಗರಗಳ ಪೈಕಿ ವಾರಣಾಸಿ ಮತ್ತು ಪ್ರಯಾಗ್​ರಾಜ್​ ಮೊದಲೆರಡು ಸ್ಥಾನ ಪಡೆದುಕೊಂಡಿವೆ.

ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ಪ್ರದಾನ ಮಾಡಿದರು. ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಹರ್​ದೀಪ್​ ಸಿಂಗ್ ಪುರಿ ಮತ್ತು ಇತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ: ಇಂದೋರ್​​ಗೆ​ ಸತತ ಆರನೇ ಬಾರಿಗೆ ದೇಶದ ಸ್ವಚ್ಛ ನಗರಿ ಪಟ್ಟ: ಕರ್ನಾಟಕದ ಯಾವುದಾದರೂ ನಗರ ಇದೆಯಾ?

ETV Bharat Logo

Copyright © 2025 Ushodaya Enterprises Pvt. Ltd., All Rights Reserved.