ETV Bharat / bharat

ವಿವೇಕಾನಂದರ ಚಿಕಾಗೋ ಭಾಷಣ ನಮ್ಮ ಸಂಸ್ಕೃತಿಯನ್ನು ಸುಂದರವಾಗಿ ಪ್ರದರ್ಶಿಸಿದೆ: ಮೋದಿ - ಪ್ರಧಾನಿ ಮೋದಿ ಟ್ವೀಟ್

ಸ್ವಾಮಿ ವಿವೇಕಾನಂದರ ಚಿಕಾಗೋ ಭಾಷಣ ಭಾರತೀಯ ಸಂಸ್ಕೃತಿಯನ್ನು ಪ್ರದರ್ಶಿಸುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ
author img

By

Published : Sep 11, 2021, 11:28 AM IST

ನವದೆಹಲಿ: 1893, ಸೆಪ್ಟೆಂಬರ್ 11 ರಂದು ಚಿಕಾಗೋದಲ್ಲಿ ಸ್ವಾಮಿ ವಿವೇಕಾನಂದರು ಮಾಡಿದ್ದ ಭಾಷಣವನ್ನು ಪ್ರಧಾನಿ ನರೇಂದ್ರ ಮೋದಿ ನೆನಪಿಸಿಕೊಂಡಿದ್ದಾರೆ. ವಿವೇಕಾನಂದರ ಅಂದಿನ ಭಾಷಣವು ಭಾರತೀಯ ಸಂಸ್ಕೃತಿಯ ಮಹತ್ವ ಪ್ರದರ್ಶಿಸಿದೆ ಎಂದಿದ್ದಾರೆ.

  • Recalling Swami Vivekananda’s iconic 1893 speech at Chicago, which beautifully demonstrated the salience of Indian culture. The spirit of his speech has the potential to create a more just, prosperous and inclusive planet. https://t.co/1iz7OgAWm3

    — Narendra Modi (@narendramodi) September 11, 2021 " class="align-text-top noRightClick twitterSection" data=" ">

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, 1893ರ ಇದೇ ದಿನ ಸ್ವಾಮಿ ವಿವೇಕಾನಂದರು ಚಿಕಾಗೋದಲ್ಲಿ ಮಾಡಿದ ಭಾಷಣವು ಭಾರತೀಯ ಸಂಸ್ಕೃತಿಯ ಮಹತ್ವವನ್ನು ಪ್ರದರ್ಶಿಸಿತು. ಅವರ ಮಾತು ನ್ಯಾಯಯುತ, ಸಮೃದ್ಧ ಮತ್ತು ಜಗತ್ತನ್ನು ಒಗ್ಗೂಡಿಸುವ ಸಾಮರ್ಥ್ಯ ಹೊಂದಿತ್ತು ಎಂದು ಉಲ್ಲೇಖಿಸಿದ್ದಾರೆ.

1893ರ ಈ ದಿನ ಸ್ವಾಮಿ ವಿವೇಕಾನಂದರು, ಚಿಕಾಗೋದಲ್ಲಿ ನಡೆದ ವಿಶ್ವಧರ್ಮ ಸಮ್ಮೇಳನದಲ್ಲಿ ಭಾಷಣ ಮಾಡಿದರು. ವೇದಾಂತದ ಪರಿಕಲ್ಪನೆಗಳು ಮತ್ತು ಆದರ್ಶಗಳು ಪಾಶ್ಚಿಮಾತ್ಯ ಜಗತ್ತಿಗೆ ಪರಿಚಯಿಸಿದರು. 19 ನೇ ಶತಮಾನದ ಭಾರತೀಯ ಅತೀಂದ್ರಿಯ ರಾಮಕೃಷ್ಣ ಪರಮಹಂಸರ ಶಿಷ್ಯರಲ್ಲಿ ಸ್ವಾಮಿ ವಿವೇಕಾನಂದರು ಪ್ರಮುಖರಾಗಿದ್ದರು.

ಭಾರತದಲ್ಲಿ ಹಿಂದೂ ಧರ್ಮದ ಪುನರುಜ್ಜೀವನ ಮತ್ತು 19 ನೇ ಶತಮಾನದ ಉತ್ತರಾರ್ಧದಲ್ಲಿ ಹಿಂದೂ ಧರ್ಮವನ್ನು ವಿಶ್ವಧರ್ಮ ಸ್ಥಾನಮಾನಕ್ಕೆ ತರುವಲ್ಲಿ ವಿವೇಕಾನಂದರು ಪ್ರಮುಖ ಶಕ್ತಿಯೆಂದು ಪರಿಗಣಿಸಲಾಗಿದೆ.

ಇದನ್ನೂ ಓದಿ: ದೇಶದಲ್ಲಿ ಹೊಸದಾಗಿ 33,376 COVID ಪ್ರಕರಣಗಳು ಪತ್ತೆ.. 308 ಸಾವು

ಜನವರಿ 12 ರಂದು ಸ್ವಾಮಿ ವಿವೇಕಾನಂದರ ಜನ್ಮದಿನವನ್ನು ರಾಷ್ಟ್ರೀಯ ಯುವ ದಿನವನ್ನಾಗಿ ಆಚರಿಸಲಾಗುತ್ತದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.