ನವದೆಹಲಿ: ಪಶ್ಚಿಮ ಬಂಗಾಳದ ಮಾಜಿ ರಾಜ್ಯಪಾಲ ಜಗದೀಪ್ ಧಂಖರ್ ಅವರು ಭಾರತದ 14 ನೇ ಉಪ ರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಧಂಖರ್ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಗೌಪ್ಯತೆ ಬೋಧಿಸಿದರು.
ಕಾರ್ಯಕ್ರಮದಲ್ಲಿ ಮಾಜಿ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಸ್ಪೀಕರ್ ಓಂ ಬಿರ್ಲಾ ಅವರು ಭಾಗವಹಿಸಿದ್ದರು.
ಧಂಖರ್ ಅವರು ಭಾರತದ 14 ನೇ ಉಪ ರಾಷ್ಟ್ರಪತಿಯಾಗಿದ್ದಾರೆ. ಚುನಾವಣೆಯಲ್ಲಿ ಅವರು ವಿರೋಧ ಪಕ್ಷದ ಅಭ್ಯರ್ಥಿ ಮಾರ್ಗರೆಟ್ ಆಳ್ವ ಅವರನ್ನು ಸೋಲಿಸಿ ವಿಕ್ರಮ ಸಾಧಿಸಿದ್ದರು.
ಓದಿ: ಪಾಕ್ ಉಗ್ರರಿಗೆ ಚೀನಾ ಬೆಂಬಲ: ವಿಶ್ವಸಂಸ್ಥೆ ಭಯೋತ್ಪಾದಕರ ಪಟ್ಟಿಗೆ ತಡೆ