ETV Bharat / bharat

ಕೃಷಿ ಕಾಯ್ದೆ ಹಿಂದಕ್ಕೆ ಪಡೆದು ರೈತರಿಗೆ ಹೊಸ ವರ್ಷದ ಉಡುಗೊರೆ ನೀಡಿ; ಕಾಂಗ್ರೆಸ್‌ ಒತ್ತಾಯ - ನೂತನ ಕೃಷಿ ಕಾಯ್ದೆಗಳು

ಹೊಸದಾಗಿ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳನ್ನು ರದ್ದು ಮಾಡಿ ಹೊಸ ವರ್ಷಕ್ಕೆ ರೈತರಿಗೆ ಉಡುಗೊರೆ ನೀಡಬೇಕು ಎಂದು ಕೇಂದ್ರ ಸರ್ಕಾರವನ್ನು ಕಾಂಗ್ರೆಸ್‌ ಒತ್ತಾಯಿಸಿದೆ.

take-back-farm-laws-give-new-year-present-to-farmers-congress
ಕೃಷಿ ಕಾಯ್ದೆ ಹಿಂದಕ್ಕೆ ಪಡೆದು ರೈತರಿಗೆ ಹೊಸ ವರ್ಷದ ಉಡುಗೊರೆ ನೀಡಿ; ಕಾಂಗ್ರೆಸ್‌ ಒತ್ತಾಯ
author img

By

Published : Dec 30, 2020, 7:17 PM IST

ನವದಹೆಲಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ವಾಗ್ದಾಳಿ ಮುಂದುವರಿಸಿದೆ. ಕೇವಲ ಉದ್ಯಮಿಗಳ ಪರವಾಗಿ ಕೆಲಸ ಮಾಡುತ್ತಿದೆ. ಹೊಸದಾಗಿ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳನ್ನು ರದ್ದು ಮಾಡಿ ಹೊಸ ವರ್ಷಕ್ಕೆ ರೈತರಿಗೆ ಉಡುಗೊರೆ ನೀಡಬೇಕು ಎಂದು ಕಾಂಗ್ರೆಸ್‌ ಒತ್ತಾಯಿಸಿದೆ.

ದೆಹಲಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹರಿಯಾಣ ಕಾಂಗ್ರೆಸ್‌ ನಾಯಕಿ ಕುಮಾರಿ ಶೈಲಜಾ, ಕೇಂದ್ರ ಸರ್ಕಾರ ಇಂದು ರೈತರೊಂದಿಗೆ ಸಭೆ ನಡೆಸುತ್ತಿದೆ. ಆದರೆ, ಈವರೆಗೆ ರಾಜಿಯಾಗಿಲ್ಲ. ಸರ್ಕಾರ ರೈತರ ಬೇಡಿಕೆಗಳನ್ನು ಸ್ವೀಕರಿಸಬೇಕು. ಕೃಷಿ ಸಂಬಂಧಿತ ಈ ಕಾಯ್ದೆಗಳನ್ನು ವಾಪಸ್‌ ಪಡೆಯಬೇಕು. ಹೊಸ ವರ್ಷದಲ್ಲಿ ಈ ಕಾಯ್ದೆಗಳನ್ನು ವಾಪಸ್‌ ಪಡೆದು 2021ರ ನೂತನ ಸಂವತ್ಸರವನ್ನು ಆರಂಭಿಸಬೇಕು ಎಂದು ಹೇಳಿದ್ದಾರೆ.

ಬಿಜೆಪಿ ವಿರುದ್ಧ ವಾಗ್ದಾಳಿ ಮುಂದುವರಿಸಿದ ಶೈಲಜಾ, ಜನರು ಬಿಜೆಪಿಯ ಮೇಲೆ ನಂಬಿಕೆ ಕಳೆದುಕೊಳ್ಳುತ್ತಿದ್ದಾರೆ. 10 ಮಂದಿ ರೈತರು ಪ್ರಾಣವನ್ನು ಕಳೆದುಕೊಂಡಿದ್ದಾರೆ. ಮೃತರ ಕುಟುಂಬಗಳಿಗೆ ಹರಿಯಾಣ ಸರ್ಕಾರ ಪರಿಹಾರ ನೀಡಬೇಕು. ಮುಖ್ಯಮಂತ್ರಿಗಳು ನಿಯೋಗವೊಂದನ್ನು ಪ್ರಧಾನಿ ಬಳಿಗೆ ಕರೆದೊಯ್ದು ವಾಸ್ತವವನ್ನು ಅರ್ಥ ಮಾಡಿಸಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ: ಎಸ್ಟೋನಿಯಾ, ಪರಾಗ್ವೆಯಲ್ಲಿ ಇಂಡಿಯನ್‌ ಮಿಷನ್‌ಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ

ಉತ್ತರಾಖಂಡ್‌ನ ಕಾಂಗ್ರೆಸ್‌ ಮುಖ್ಯಸ್ಥ ಪ್ರೀತಮ್‌ ಸಿಂಗ್‌, ಒಂದು ಕಡೆ ಸರ್ಕಾರ ರೈತರನ್ನು ಮಾತುಕತೆಗೆ ಆಹ್ವಾನಿಸುತ್ತದೆ. ಮತ್ತೊಂದೆಡೆ ಕೃಷಿ ಕಾಯ್ದೆಗಳನ್ನು ವಾಪಸ್‌ ಪಡೆಯಲು ನಿರಾಕರಿಸುತ್ತದೆ. ಈ ಹೊಸ ಕಾಯ್ದೆಗಳ ಮೂಲಕ ಸರ್ಕಾರ, ಕಾರ್ಪೋರೇಟ್‌ ವಲಯಕ್ಕೆ ಲಾಭ ಮಾಡಿಕೊಡಲು ಪ್ರಯತ್ನಿಸುತ್ತಿದೆ. ಕಾಯ್ದೆಯನ್ನು ಜಾರಿಗೆ ತರುವುದಕ್ಕೂ ಮುನ್ನ ಕಾರ್ಪೋರೇಟ್ಸ್‌ ಜೊತೆ ಒಪ್ಪಂದ ಮಾಡಿಕೊಂಡಿದೆ. ಈ ಕಾರಣಕ್ಕಾಗಿಯೇ ಇವರು ಪಂಜಾಬ್‌ ಹಾಗೂ ಹರಿಯಾಣದ ಗಡಿಗಳಲ್ಲಿ ಗೌಡೋನ್‌ಗಳನ್ನು ನಿರ್ಮಿಸಿಕೊಂಡಿದ್ದಾರೆ ಎಂದು ಆರೋಪಿಸಿದರು.

ಸಂದರ್ಶನವೊಂದರಲ್ಲಿ ಮಾತನಾಡಿದ್ದ ಕೇಂದ್ರ ಸಚಿವ ರಾಜನಾಥ್‌ ಸಿಂಗ್‌, ದೆಹಲಿಯ ಗಡಿಯಲ್ಲಿ ರೈತರ ಪ್ರತಿಭಟನೆ ಮಾಡುತ್ತಿರುವುದಕ್ಕೆ ಪ್ರಧಾನಿ ಮೋದಿ ನೊಂದಿದ್ದಾರೆ. ಈ ಕಾಯ್ದೆಗಳಿಗೆ ಕೇವಲ 2 ವರ್ಷ ಮಾತ್ರ ಅವಕಾಶ ನೀಡಿ ಎಂದು ರೈತರನ್ನು ಕೋರಿರುವುದಾಗಿ ಸಿಂಗ್‌ ಹೇಳಿದ್ದಾರೆ.

ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಶೈಲಜಾ, ಇದು ಪ್ರಧಾನಿ ಮೋದಿ ಅವರ ಮೊಂಡುತನ ಎಂಬುದು ಎಲ್ಲರಿಗೂ ಗೊತ್ತು. ಇದನ್ನು ದೇಶ ಸ್ವೀಕರಿಸುವುದಿಲ್ಲ. ಎಲ್ಲಾ ಸಚಿವರು ಅಥವಾ ನಾಯಕರು ವಾಸ್ತವದ ಸ್ಥಿತಿಯನ್ನು ವಿರೋಧಿಸುತ್ತಿದ್ದಾರೆ ಎಂದು ದೂರಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.