ಚೆನ್ನೈ: ತಮಿಳುನಾಡಿನ 16ನೇ ವಿಧಾನ ಸಭೆಯ ಪ್ರಥಮ ಅಧಿವೇಶನವು ಮೇ 11 ರಂದು ಇಲ್ಲಿನ ಓಮಂದುರಾರ್ ಸರ್ಕಾರಿ ಎಸ್ಟೇಟ್ನಲ್ಲಿ ನಡೆಯಲಿದೆ. ನೂತನವಾಗಿ ಆಯ್ಕೆಯಾದ ಸದಸ್ಯರು ಈ ದಿನ ವಿಧಾನಸಭಾ ಸದಸ್ಯತ್ವದ ಗೌಪ್ಯತಾ ಪ್ರತಿಜ್ಞಾ ವಿಧಿ ಸ್ವೀಕರಿಸಲಿದ್ದಾರೆ.
ನೂತನವಾಗಿ ಆಯ್ಕೆಯಾದ ತಮಿಳುನಾಡು ವಿಧಾನಸಭೆಯ ಸ್ಪೀಕರ್ ಹಾಗೂ ಡೆಪ್ಯೂಟಿ ಸ್ಪೀಕರುಗಳ ಆಯ್ಕೆಗಾಗಿ ಚುನಾವಣಾ ಪ್ರಕ್ರಿಯೆಯು ಮೇ 12 ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದೆ.
ಕಳೆದ ಏಪ್ರಿಲ್ನಲ್ಲಿ ತಮಿಳುನಾಡು ವಿಧಾನಸಭೆಗೆ ಮತದಾನ ನಡೆದಿದ್ದು, ಮೇ 2 ರಂದು ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಿತ್ತು. ಚುನಾವಣೆಯಲ್ಲಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಪಕ್ಷವು ಬಹುಮತ ಗಳಿಸಿ ಅಧಿಕಾರಕ್ಕೆ ಬಂದಿದ್ದು ನೂತನ ಸರ್ಕಾರದ ಮುಖ್ಯಮಂತ್ರಿಯಾಗಿ ಎಂ.ಕೆ. ಸ್ಟಾಲಿನ್ ಶುಕ್ರವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ.