ಚೆನ್ನೈ: ತಮಿಳುನಾಡಿನಲ್ಲಿ ಏಪ್ರಿಲ್-ಮೇ ತಿಂಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಅದಕ್ಕಾಗಿ ಆಡಳಿತ ಪಕ್ಷ ಎಐಎಡಿಎಂಕೆ ಭರ್ಜರಿಯಾಗಿ ತಯಾರಾಗುತ್ತಿದೆ. ಇದರ ಬೆನ್ನಲ್ಲೇ ಮಹತ್ವದ ಘೋಷಣೆ ಮಾಡಿದೆ.
ಮತ್ತೊಂದು ಅವಧಿ ಮೇಲೆ ಕಣ್ಣಿಟ್ಟಿರುವ ಮುಖ್ಯಮಂತ್ರಿ ಪಳನಿಸ್ವಾಮಿ ರೈತರಿಗೆ ಭರ್ಜರಿ ಗಿಫ್ಟ್ ನೀಡಿದ್ದು, ಒಟ್ಟು 12,110 ಕೋಟಿ ರೂ. ಕೃಷಿ ಸಾಲ ಮನ್ನಾ ಮಾಡಿ ಘೋಷಣೆ ಮಾಡಿದ್ದಾರೆ. ಸಹಕಾರಿ ಬ್ಯಾಂಕ್ಗಳಲ್ಲಿ ರೈತರು ಮಾಡಿರುವ ಕೃಷಿ ಸಾಲ ಮನ್ನಾ ಆಗಲಿದ್ದು, ಇದರಿಂದ 16 ಲಕ್ಷ ರೈತರಿಗೆ ಸಹಾಯವಾಗಲಿದೆ.
ಓದಿ: ತಮಿಳುನಾಡು ವಿಧಾನಸಭೆ ಫೈಟ್: ಎಐಎಡಿಎಂಕೆ ಜತೆ ಬಿಜೆಪಿ ಮೈತ್ರಿ ಘೋಷಣೆ!
ಸೈಕ್ಲೋನ್ ಹಾಗೂ ಕೊರೊನಾ ವೈರಸ್ನಿಂದಾಗಿ ರೈತರು ಅಪಾರ ಪ್ರಮಾಣದಲ್ಲಿ ತೊಂದರೆ ಅನುಭವಿಸಿದ್ದು, ಹೀಗಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದಿದ್ದಾರೆ. ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಜೊತೆ ಹೊಂದಾಣಿಕೆ ಮಾಡಿಕೊಳ್ಳುವುದಾಗಿ ಆಡಳಿತಾರೂಢ ಎಐಎಡಿಎಂಕೆ ಈಗಾಗಲೇ ಘೋಷಣೆ ಮಾಡಿದೆ.
ತಮಿಳುನಾಡಿನಲ್ಲಿ ಸದ್ಯ ಎಐಎಡಿಕೆ ಪಕ್ಷ ಆಡಳಿತ ನಡೆಸುತ್ತಿದ್ದು, ಪಳನಿಸ್ವಾಮಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. 234 ಸ್ಥಾನ ಹೊಂದಿರುವ ತಮಿಳುನಾಡಿನಲ್ಲಿ ಏಪ್ರಿಲ್- ಮೇ ತಿಂಗಳಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ.