ETV Bharat / bharat

ತಮಿಳುನಾಡಿನಲ್ಲಿ ಮಳೆಯಾರ್ಭಟ: ರಾಜ್ಯಪಾಲರನ್ನು ಭೇಟಿಯಾಗಲಿರುವ ಸಿಎಂ ಸ್ಟಾಲಿನ್

author img

By

Published : Nov 27, 2021, 12:53 PM IST

ಧಾರಾಕಾರ ಮಳೆಯಿಂದಾಗಿ ತಮಿಳುನಾಡು ತತ್ತರಿಸಿದೆ. ಸಿಎಂ ಎಂ.ಕೆ. ಸ್ಟಾಲಿನ್ ಇಂದು ರಾಜ್ಯಪಾಲ ಆರ್.ಎನ್. ರವಿ ಅವರನ್ನು ಭೇಟಿಯಾಗಲಿದ್ದು, ಮಳೆಯಿಂದಾಗಿ ರಾಜ್ಯದಲ್ಲಿ ಉಂಟಾಗಿರುವ ಪರಿಸ್ಥಿತಿ ಕುರಿತು ಚರ್ಚಿಸಲಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ.

Tamil Nadu rains
ತಮಿಳುನಾಡಿನಲ್ಲಿ ಮಳೆಯಾರ್ಭಟ

ಚೆನ್ನೈ: ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ತಮಿಳುನಾಡು ನಲುಗಿದೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಮತ್ತೆ ಚೆನ್ನೈ ಸೇರಿದಂತೆ ಕರಾವಳಿ ಭಾಗದಲ್ಲಿ ಹವಾಮಾನ ಇಲಾಖೆ ರೆಡ್​​​ ಅಲರ್ಟ್​ ಘೋಷಿಸಿದ್ದು, ಪ್ರಜೆಗಳಿಗೆ ಎಚ್ಚರಿಕೆಯಿಂದ ಇರುವಂತೆ ಸೂಚಿಸಿದೆ.

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಇಂದು ರಾಜ್ಯಪಾಲ ಆರ್.ಎನ್. ರವಿ ಅವರನ್ನು ಭೇಟಿಯಾಗಲಿದ್ದು, ಮಳೆಯಿಂದಾಗಿ ರಾಜ್ಯದಲ್ಲಿ ಉಂಟಾಗಿರುವ ಪರಿಸ್ಥಿತಿ ಕುರಿತು ಚರ್ಚಿಸಲಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ.

ಮಳೆ ಹಿನ್ನೆಲೆ ಚೆನ್ನೈ, ಕಾಂಚೀಪುರಂ, ಚೆಂಗಲ್ಪಟ್ಟು, ಟುಟಿಕೋರಿನ್, ತಿರುವಳ್ಳೂರು, ತಿರುನಲ್ವೇಲಿ, ಪುದುಕೊಟ್ಟೈ, ಸೇಲಂ, ತಿರುವಣ್ಣಾಮಲೈ, ಕಡಲೂರು, ವಿಲುಪ್ಪುರಂ, ಅರಿಯಲೂರ್, ರಾಮನಾಥಪುರಂ, ರನ್ನಿಪೆಟ್ಟೈ, ಕಲ್ಲಕ್ಕುರಿಚಿ, ತಂಜೋರ್, ನಾಗಪಟ್ಟಿಣಂ, ತಿರುವಾರೂರ್, ಪೆರಂಬಲೂರ್ ಮತ್ತು ಮೈಲಾಡುತುರೈ ತಿರುಚ್ಚಿಯಲ್ಲಿ ಶಾಲಾ - ಕಾಲೇಜುಗಳಿಗೆ ಸರ್ಕಾರ ರಜೆ ಘೋಷಿಸಿದೆ.

ಆ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದ್ದರಿಂದ ರಜೆ ಘೋಷಿಸಲಾಗಿದೆ.

ಚೆನ್ನೈ, ತಿರುವಳ್ಳೂರು, ಕಾಂಚೀಪುರಂ, ಸೆಂಗಲ್‌ಪಟ್ಟು, ವಿಲುಪುರಂ, ಪುದುಚೇರಿ, ಕುಡಲೂರ್, ಕಾರೈಕಾಲ್ (ಪುದುಚೇರಿ), ಮಯಿಲಾಡುತುರೈ, ತಂಜಾವೊರ್, ತಿರುವರೂರ್, ನಾಗಪ್ಪಟ್ಟಿನಂ, ಪುದುಕೊಟ್ಟೈ, ರಾಮನಾಥಪುರಂ, ಟುಟಿಕೊರಿನ್, ತಿರುನೆಲ್​​ವೆಲಿ, ತೆಂಕಸಾಯಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ರನ್ನಿಪೆಟ್ಟೈ, ವೆಲ್ಲೊರ್, ತಿರುವಣ್ಣಾಮಲೈ, ಕಲ್ಲಕುರಿಚಿ, ಪೆರುಂಬಲೂರ್, ಅರಿಯಲೂರ್, ತಿರುಚ್ಚಿ, ಮಧುರೈ, ಶಿವಗಂಗೈ, ವಿರುಧು ನಗರದಲ್ಲಿ ಆರೆಂಜ್ ಅಲರ್ಟ್‌ ಘೋಷಿಸಲಾಗಿದೆ. ಕನ್ಯಾಕುಮಾರಿಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇದನ್ನೂ ಓದಿ: ತಮಿಳುನಾಡಿನಲ್ಲಿ ಮುಂದುವರಿದ ವರುಣಾರ್ಭಟ: ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ

ರಾಜ್ಯದಲ್ಲಿ ಸುರಿದ ನಿರಂತರ ಮಳೆಯಿಂದಾಗಿ ಅಧಿಕ ಪ್ರಮಾಣದ ಬೆಳೆ ಹಾನಿಯಾಗಿದೆ. ಹಲವು ಪ್ರದೇಶಗಳಲ್ಲಿ ಕಟ್ಟಡಗಳು ಮುಳುಗಡೆಯಾಗಿದ್ದರೆ, ಕೆಲವು ಕುಸಿತಗೊಂಡಿವೆ. ರಸ್ತೆಗಳು ಜಲಾವೃತಗೊಂಡಿದ್ದು, ಪ್ರವಾಹ ಪರಿಸ್ಥಿತಿಯನ್ನು ಸೃಷ್ಟಿಸಿವೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.