ಚೆನ್ನೈ: ಕೇಂದ್ರ ಚುನಾವಣಾ ಆಯೋಗದಿಂದ ಕೆಲವೇ ಗಂಟೆಗಳಲ್ಲಿ ತಮಿಳುನಾಡು ಸೇರಿದಂತೆ ಪಂಚರಾಜ್ಯ ಚುನಾವಣೆಗೆ ದಿನಾಂಕ ಘೋಷಣೆಯಾಗಲಿದ್ದು, ಇದಕ್ಕೂ ಮೊದಲೇ ತಮಿಳುನಾಡು ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ಕಳೆದ ಕೆಲ ದಿನಗಳ ಹಿಂದೆ ರೈತರ ಸಾಲ ಮನ್ನಾ ಮಾಡಿ ಆದೇಶ ಹೊರಹಾಕಿದ್ದ ಆಡಳಿತ ಪಕ್ಷ ಎಐಎಡಿಎಂಕೆ ಇದೀಗ ಚಿನ್ನದ ಮೇಲಿನ ಸಾಮ ಕೂಡ ಮನ್ನಾ ಮಾಡಿ ಆದೇಶ ಹೊರಹಾಕಿದೆ. ಇಂದು ಚುನಾವಣೆ ಘೋಷಣೆಯಾದರೆ ಏಪ್ರಿಲ್-ಮೇ ತಿಂಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಅದಕ್ಕಾಗಿ ಆಡಳಿತ ಪಕ್ಷ ಎಐಎಡಿಎಂಕೆ ಇಂತಹ ಘೋಷಣೆ ಮಾಡಿದೆ.
ಇದನ್ನೂ ಓದಿ: ತಮಿಳುನಾಡಿನಲ್ಲಿ 12,110 ಕೋಟಿ ರೂ. ರೈತರ ಸಾಲ ಮನ್ನಾ: ಸಿಎಂ ಘೋಷಣೆ
ಅಸೆಬ್ಲಿಯಲ್ಲಿ ಮಾತನಾಡುತ್ತಿದ್ದ ವೇಳೆ ಅವರು ಈ ಮಾಹಿತಿ ನೀಡಿದ್ದು, ಸಹಕಾರಿ ಬ್ಯಾಂಕ್ಗಳಲ್ಲಿ ಚಿನ್ನದ ಮೇಲೆ ಪಡೆದಿರುವ ಸಾಲ ಸಂಪೂರ್ಣವಾಗಿ ಮನ್ನಾ ಆಗಲಿದೆ ಎಂದಿದ್ದಾರೆ.
ವಿಶೇಷವಾಗಿ ತಮಿಳುನಾಡಿನಲ್ಲಿ ಭಾರತೀಯ ಜನತಾ ಪಾರ್ಟಿ ಜತೆ ಮೈತ್ರಿ ಮಾಡಿಕೊಂಡಿರುವ ಮುಖ್ಯಮಂತ್ರಿ ಪಳನಿಸ್ವಾಮಿ ಅಲ್ಲಿನ ಜನರಿಗೆ ಭರ್ಜರಿ ಗಿಫ್ಟ್ ನೀಡಿದ್ದಾರೆ. ಈ ಹಿಂದೆ ಒಟ್ಟು 12,110 ಕೋಟಿ ರೂ. ಕೃಷಿ ಸಾಲ ಮನ್ನಾ ಮಾಡಿ ಘೋಷಣೆ ಮಾಡಿದ್ದರು. ಇದರಿಂದ ಸಹಕಾರಿ ಬ್ಯಾಂಕ್ಗಳಲ್ಲಿ ರೈತರು ಮಾಡಿರುವ ಕೃಷಿ ಸಾಲ ಮನ್ನಾ ಆಗಲಿದ್ದು, ಇದರಿಂದ 16 ಲಕ್ಷ ರೈತರಿಗೆ ಸಹಾಯವಾಗಲಿದೆ.