ETV Bharat / bharat

ತಮಿಳುನಾಡು ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸ್‌ಗಳಲ್ಲಿ ಶೇ.7.5ರಷ್ಟು ಮೀಸಲು - Quota For Govt Students In All Professional Courses

ವೃತ್ತಿಪರ ಕೋರ್ಸ್‌ಗಳ ಪ್ರವೇಶದಲ್ಲಿ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಶೇ.7.5ರಷ್ಟು ಮೀಸಲಾತಿ ನೀಡಲು ತಮಿಳುನಾಡು ಸರ್ಕಾರ ಮುಂದಾಗಿದೆ.

Chief Minister MK Stalin
ತಮಿಳುನಾಡು ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸ್‌ಗಳಲ್ಲಿ ಶೇ.7.5ರಷ್ಟು ಮೀಸಲಾತಿ
author img

By

Published : Aug 5, 2021, 3:22 PM IST

ಚೆನ್ನೈ (ತಮಿಳುನಾಡು): ಎಲ್ಲ ವೃತ್ತಿಪರ ಕೋರ್ಸ್‌ಗಳ ಪ್ರವೇಶದಲ್ಲಿ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಶೇ.7.5ರಷ್ಟು ಮೀಸಲಾತಿ ನೀಡಲಾಗುವುದಾಗಿ ತಮಿಳುನಾಡು ಸರ್ಕಾರ ಗ್ರೀನ್​ ಸಿಗ್ನಲ್​ ನೀಡಿದೆ. ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಇಂಜಿನಿಯರಿಂಗ್‌ನಂತಹ ವೃತ್ತಿಪರ ಕೋರ್ಸ್‌ಗಳಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ದಾಖಲಾತಿ ಅನುಪಾತವನ್ನು ನಿರ್ಣಯಿಸಲು ರಾಜ್ಯ ಸರ್ಕಾರವು ಈ ಹಿಂದೆ ಆಯೋಗವೊಂದನ್ನು ಸ್ಥಾಪಿಸಿತ್ತು. ದೆಹಲಿ ಹೈಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಡಿ.ಮುರುಗೇಶನ್ ನೇತೃತ್ವದ ಈ ಆಯೋಗವು ಸರ್ಕಾರಿ ಶಾಲೆಗಳ ಕೆಲವೇ ವಿದ್ಯಾರ್ಥಿಗಳು ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶ ಪಡೆದಿದ್ದಾರೆ ಎಂಬುದನ್ನು ಎತ್ತಿ ತೋರಿಸಿದೆ. ಹೀಗಾಗಿ ಮೀಸಲಾತಿ ವಿಸ್ತರಣೆಗೆ ರಾಜ್ಯ ಸರ್ಕಾರ ಮುಂದಾಗಿದೆ.

ಇದನ್ನೂ ಓದಿ: ಯುಪಿಎಸ್ಸಿ ಪಠ್ಯಕ್ರಮ ಬಗ್ಗೆ ತಪ್ಪು ಮಾಹಿತಿ: BYJU ಮಾಲೀಕನ ವಿರುದ್ಧ ಎಫ್‌ಐಆರ್ ದಾಖಲು

ತಮಿಳುನಾಡು ಸರ್ಕಾರದ ಈ ನಿರ್ಧಾರವನ್ನು ಶಿಕ್ಷಣ ತಜ್ಞರು ಸ್ವಾಗತಿಸಿದ್ದು, ವೃತ್ತಿಪರ ಕೋರ್ಸ್‌ಗಳ ಬಗ್ಗೆ ಅರಿವು ಮೂಡಿಸಲು ಹಾಗೂ ಶಾಲಾ ಮಟ್ಟದಲ್ಲಿ ಇದಕ್ಕೆ ಬೇಕಾಗುವ ಮೂಲಸೌಕರ್ಯಗಳನ್ನು ಒದಗಿಸಲು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.