ETV Bharat / bharat

ಮೇಕೆದಾಟು ಯೋಜನೆಗೆ ಮತ್ತೊಂದು ವಿಘ್ನ.. ಕರ್ನಾಟಕದ ವಿರುದ್ಧ ಸುಪ್ರೀಂಕೋರ್ಟ್​ ಮೆಟ್ಟಿಲೇರಿದ ತಮಿಳುನಾಡು

ಕರ್ನಾಟಕ ಸರ್ಕಾರದ ಬಹುನಿರೀಕ್ಷಿತ ಮೇಕೆದಾಟು ಯೋಜನೆಗೆ ಅನುಮತಿ ನೀಡದಂತೆ, ಸುಪ್ರೀಂಕೋರ್ಟ್​ಗೆ ತಮಿಳುನಾಡು ಸರ್ಕಾರ ಅರ್ಜಿ ಸಲ್ಲಿಸಿದೆ.

ಸುಪ್ರೀಂ
ಸುಪ್ರೀಂ
author img

By

Published : Aug 28, 2021, 6:50 PM IST

ನವದೆಹಲಿ: ರಾಜ್ಯ ಸರ್ಕಾರದ ಬಹುನಿರೀಕ್ಷಿತ ಯೋಜನೆ ಮೇಕೆದಾಟುಗೆ ಮತ್ತೊಂದು ವಿಘ್ನ ಎದುರಾಗಿದೆ. ಯೋಜನೆ ನಿರ್ಮಿಸಲು ಅವಕಾಶ ನೀಡದಂತೆ ವಿಸ್ತೃತ ಯೋಜನಾ ವರದಿ(ಡಿಪಿಆರ್)ಯನ್ನು ತಿರಸ್ಕರಿಸುವಂತೆ ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್​​ಗೆ ಅರ್ಜಿ ಸಲ್ಲಿಸಿದೆ.

ಮೇಕೆದಾಟು ಪ್ರಕರಣದ ತುರ್ತು ವಿಚಾರಣೆ ನಡೆಸುವಂತೆ ಕೋರಿ ತಮಿಳುನಾಡು ಸರ್ಕಾರ ಸುಪ್ರೀಂಗೆ ಅರ್ಜಿ ಸಲ್ಲಿಸಿದೆ. 9,000 ಕೋಟಿ ರೂ. ವೆಚ್ಚದಲ್ಲಿ 76.16 ಟಿಎಂಸಿ ನೀರು ಸಂಗ್ರಹಣೆ ಉದ್ದೇಶದಿಂದ ಜಲಾಶಯ ನಿರ್ಮಿಸಲು ರಾಜ್ಯ ಸರ್ಕಾರ ಮುಂದಾಗಿದೆ. ವಿದ್ಯುತ್ ಉತ್ಪಾದಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಈ ಯೋಜನೆಗೆ ಕೈ ಹಾಕಿದೆ.

ಈ ಯೋಜನೆ ನ್ಯಾಯಲಯದ ಆದೇಶ ಉಲ್ಲಂಘಿಸಿದ್ದು, ಕೂಡಲೇ ತಡೆ ನೀಡಬೇಕು. ಕರ್ನಾಟಕಕ್ಕೆ ಯಥಾಸ್ಥಿತಿ ಕಾಯ್ದುಕೊಳ್ಳಲು ಸೂಚಿಸಬೇಕು ಮತ್ತು ಕರ್ನಾಟಕ ಸಲ್ಲಿಸಿರುವ ಡಿಪಿಆರ್ ಅನ್ನು ಕೇಂದ್ರ ಜಲ ಆಯೋಗ(ಸಿಡಬ್ಲ್ಯೂಸಿ)ತಿರಸ್ಕರಿಸಲು ಸೂಚಿಸಬೇಕು. ಪ್ರಕರಣ ಅಂತ್ಯವಾಗುವವರೆಗೂ ಅರಣ್ಯ ಮತ್ತು ಪರಿಸರ ಇಲಾಖೆಯಿಂದ ಯಾವುದೇ ಅನುಮತಿ ನೀಡದಂತೆ ಆದೇಶಿಸಬೇಕು ಎಂದು ತಮಿಳುನಾಡು ಸರ್ಕಾರ ಸುಪ್ರೀಂಗೆ ಮನವಿ ಸಲ್ಲಿಸಿದೆ.

ಯಾವುದೇ ಹೊಸ ಯೋಜನೆಯನ್ನು ಇತರ ಜಲಾನಯನ ರಾಜ್ಯಗಳ ಒಪ್ಪಿಗೆಯೊಂದಿಗೆ ಮಾತ್ರ ತೆಗೆದುಕೊಳ್ಳಬೇಕು. ಏಕೆಂದರೆ ಅವುಗಳು ಮೇಲ್ಭಾಗದ ನದಿಯ ರಾಜ್ಯದ ಏಕಪಕ್ಷೀಯ ಕ್ರಮದಿಂದ ಪ್ರಭಾವಿತವಾಗಿವೆ. ಪ್ರಸ್ತಾವಿತ ಯೋಜನೆಯು ಕಾವೇರಿ ನದಿಯ ಹರಿವಿನ ಮೇಲೆ ಪರಿಣಾಮ ಬೀರುತ್ತದೆ. ತಮಿಳುನಾಡಿನ ಕಾವೇರಿ ಜಲಾನಯನ ಪ್ರದೇಶದ ನೀರಾವರಿ ಮೇಲೆ ತೀವ್ರ ಪರಿಣಾಮ ಬೀರುತ್ತದೆ ಎಂದು ಅರ್ಜಿಯಲ್ಲಿ ಹೇಳಿದೆ.

ಇದನ್ನೂ ಓದಿ: ಒಂದು ತಿಂಗಳಲ್ಲೇ 'ಸಿಂಪಲ್ ಸಿಎಂ' ಹೆಗ್ಗಳಿಕೆಗೆ ಪಾತ್ರರಾದ ಮುಖ್ಯಮಂತ್ರಿ ಬೊಮ್ಮಾಯಿ

ಮೇಕೆದಾಟು ಅಣೆಕಟ್ಟು ನಿರ್ಮಾಣ ವಿಚಾರವಾಗಿ ಯೋಜನೆಯನ್ನು ನಾವು ಆರಂಭಿಸುತ್ತೇವೆ ಎಂದು ಕರ್ನಾಟಕ ಪಟ್ಟುಹಿಡಿದಿದೆ. ಈಗಾಗಲೇ ಮೇಕೆದಾಟು ಬೆಂಗಳೂರಿಗೆ ಕುಡಿಯುವ ನೀರು ಒದಗಿಸುವ ಯೋಜನೆ ಆಗಿದ್ದು, ಶೀಘದಲ್ಲೇ ಕೇಂದ್ರದ ಜೊತೆ ಅನುಮತಿ ಪಡೆದು ಯೋಜನೆ ಆರಂಭಿಸುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

ಮೇಕೆದಾಟು ವಿಚಾರವಾಗಿ ಕಳೆದ ಕೆಲ ತಿಂಗಳಿಂದ ತಮಿಳುನಾಡು-ಕರ್ನಾಟಕ ಸರ್ಕಾರದ ಮಧ್ಯೆ ಹಗ್ಗಜಗ್ಗಾಟ ನಡೆಯುತ್ತಿದ್ದು, ಈಗಾಗಲೇ ಎರಡು ರಾಜ್ಯದ ಸರ್ಕಾರ ಕೇಂದ್ರ ಜಲಶಕ್ತಿ ಸಚಿವರ ಭೇಟಿ ಮಾಡಿವೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.