ETV Bharat / bharat

'ಭಾರತೀಯನೆಂದು ಸಾಬೀತುಪಡಿಸಲು ಬಲವಂತವಾಗಿ ಹಿಂದಿ ಕಲಿಯುವ ಅವಶ್ಯಕತೆಯಿಲ್ಲ'

ದೇಶದಲ್ಲಿ ಹಿಂದಿ ಭಾಷೆ ಬಳಕೆ ವಿಚಾರವಾಗಿ ಕೇಂದ್ರ ಗೃಹ ಸಚಿವ ಅಮಿತ್​ ಶಾ ಹೇಳಿಕೆ ನೀಡಿರುವ ಬಗ್ಗೆ ಮಾತನಾಡಿರುವ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ, ತಮಿಳುನಾಡಿನಲ್ಲಿ ಹಿಂದಿ ಹೇರಿಕೆಗೆ ನಾವು ಅವಕಾಶ ನೀಡುವುದಿಲ್ಲ ಎಂದರು.

Annamalai on Hindi imposition
Annamalai on Hindi imposition
author img

By

Published : Apr 14, 2022, 3:29 PM IST

ಚೆನ್ನೈ(ತಮಿಳುನಾಡು): ಇಂಗ್ಲಿಷ್​ಗೆ ಪರ್ಯಾಯವಾಗಿ ಹಿಂದಿ ಭಾಷೆ ಬಳಕೆ ಮಾಡುವಂತೆ ಹೇಳಿಕೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಲಹೆಗೆ ಈಗಾಗಲೇ ಸಾಕಷ್ಟು ಪರ-ವಿರೋಧ ಅಭಿಪ್ರಾಯ ವ್ಯಕ್ತವಾಗಿದೆ. ಇದೇ ವಿಷಯಕ್ಕೆ ಸಂಬಂಧಿಸಿದಂತೆ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಮಾತನಾಡಿದ್ದು, ಗೃಹ ಸಚಿವರ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಹಿಂದಿ ಹೇರಿಕೆಗೆ ತಮಿಳುನಾಡು ಬಿಜೆಪಿ ಅವಕಾಶ ನೀಡುವುದಿಲ್ಲ ಎಂದಿರುವ ಅಣ್ಣಾಮಲೈ, ರಾಜ್ಯ ಬಿಜೆಪಿ ಘಟಕ ಅದನ್ನು ಒಪ್ಪಿಕೊಳ್ಳುವುದಿಲ್ಲ ಎಂದರು. ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಭಾರತದಲ್ಲಿ ತಮಿಳು ಸಂಪರ್ಕ ಭಾಷೆಯಾದರೆ, ನಾವು ಹೆಮ್ಮೆ ಪಡುತ್ತೇವೆ. ಭಾರತೀಯರು ಎಂದು ಸಾಬೀತುಪಡಿಸಲು ನಾವು ಬಲವಂತವಾಗಿ ಹಿಂದೆ ಭಾಷೆ ಕಲಿಯುವ ಅಗತ್ಯವಿಲ್ಲ ಎಂದಿದ್ದು, ನಮ್ಮಲ್ಲಿ ಯಾರೂ ಸಹ ಹಿಂದಿ ಮಾತನಾಡುವುದಿಲ್ಲ. ಆದರೆ, ವೃತ್ತಿ, ವ್ಯಾಪಾರ ಅಥವಾ ಶಿಕ್ಷಣದ ಭಾಗವಾಗಿ ಕಲಿಯಲು ಬಯಸಿದರೆ ನಮ್ಮ ಆಕ್ಷೇಪವಿಲ್ಲ ಎಂದು ಹೇಳಿದರು. ಕಳೆದ 40-45 ವರ್ಷಗಳಿಂದ ಕಾಂಗ್ರೆಸ್ ಹಿಂದೆ ಭಾಷೆ ವಿಚಾರದಲ್ಲಿ ರಾಜಕೀಯ ಮಾಡ್ತಿದೆ ಎಂದರು.

ಇದನ್ನೂ ಓದಿ: ಪಂಜಾಬ್ ಅಧಿಕಾರಿಗಳೊಂದಿಗೆ ಕೇಜ್ರಿವಾಲ್​ ಸಭೆ: ಸಿಎಂ ಭಗವಂತ್ ಮಾನ್ ಸಮರ್ಥನೆ ಹೀಗಿದೆ..

ಇದೇ ವೇಳೆ ದೇಶದಲ್ಲಿ ಇಂಧನ ಬೆಲೆಯಲ್ಲಿ ಹೆಚ್ಚಾಗುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅಣ್ಣಾಮಲೈ, ಎಲ್ಲ ರಾಜ್ಯ ಸರ್ಕಾರಗಳು ಇಂಧನದ ಮೇಲಿನ ತೆರಿಗೆಯನ್ನು ಕಡಿತಗೊಳಿಸಿವೆ. ಜನರಿಗೆ ಪರಿಹಾರ ನೀಡುವಂತೆ ತಮಿಳುನಾಡು ಸರ್ಕಾರವನ್ನು ಕೇಳಿಕೊಳ್ಳಲಾಗಿದೆ ಎಂದು ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.