ಚೆನ್ನೈ, ತಮಿಳುನಾಡು: ವಿಧಾನಸಭಾ ಚುನಾವಣೆಯ ಮತ ಎಣಿಕೆ ದಿನವಾದ ಮೇ 2ರಂದು ತಮಿಳುನಾಡು ಸರ್ಕಾರ ಪೂರ್ಣ ಲಾಕ್‌ಡೌನ್ ಘೋಷಿಸಿದೆ. ತಮಿಳುನಾಡು ಜೊತೆಗೆ ನಾಲ್ಕು ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ನಡೆದಿದ್ದು, ಮೇ 2ರಂದು ಫಲಿತಾಂಶ ಹೊರಬೀಳಲಿದೆ.
ಮತಎಣಿಕೆಯ ದಿನ ಭಾನುವಾರವಾದ ಕಾರಣದಿಂದ ಲಾಕ್‌ಡೌನ್ ಅಗತ್ಯವಿಲ್ಲ ಎಂದು ತಮಿಳುನಾಡು ಸರ್ಕಾರ ಹೇಳಿತ್ತು. ಈ ಕುರಿತು ಅಧಿಸೂಚನೆಯನ್ನು ಕೂಡಾ ಬಿಡುಗಡೆ ಮಾಡಲಾಗಿದ್ದು, ರಜಾದಿನವಾದ ಕಾರಣದಿಂದ ಸಾಂಕ್ರಾಮಿಕ ರೋಗ ಹರಡುವ ಸಾಧ್ಯತೆ ಇಲ್ಲ ಎಂದು ಹೇಳಲಾಗಿತ್ತು.
ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಮತ್ತಷ್ಟು ಕಠಿಣ ನಿಯಮಗಳೊಂದಿಗೆ ಲಾಕ್‌ಡೌನ್ ವಿಸ್ತರಣೆ
ಇದರ ಜೊತೆಗೆ 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಲಸಿಕೆ ಶಿಬಿರವನ್ನು ನಡೆಸಲಾಗುತ್ತದೆ ಎಂದು ಹೇಳಲಾಗಿತ್ತು. ಸರ್ಕಾರ ನ್ಯಾಯಾಲಯದ ಸಲಹೆಯನ್ನೂ ಕೇಳಿದ್ದು, ಮತಕೇಂದ್ರಗಳಲ್ಲಿ ಮಾಧ್ಯಮಗಳಿಗೆ ಅವಕಾಶ ನೀಡಬೇಕೇ...? ಬೇಡವೇ.? ಎಂದು ವಿವರಣೆಯನ್ನೂ ಕೇಳಲಾಗಿತ್ತು.
ಇದರ ವಿಚಾರಣೆಯನ್ನು ನ್ಯಾಯಾಲಯ ಏಪ್ರಿಲ್ 30ಕ್ಕೆ ಮುಂದೂಡಿದ ಬೆನ್ನಲ್ಲೇ ಅಲ್ಲಿನ ಸರ್ಕಾರ ಮೇ 2ರಂದು ಸಂಪೂರ್ಣ ಲಾಕ್‌ಡೌನ್ ಘೋಷಣೆ ಮಾಡಿ ಆದೇಶ ಹೊರಡಿಸಿದೆ.