ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಸಲಹೆಗಾರರಾಗಿ 1987ರ ಬ್ಯಾಚ್ನ ಮಾಜಿ ಐಎಎಸ್ ಅಧಿಕಾರಿ ತರುಣ್ ಕಪೂರ್ ನೇಮಕವಾಗಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಕ್ಯಾಬಿನೆಟ್ ನೇಮಕಾತಿ ಸಮಿತಿ ಅಧಿಕೃತ ಮಾಹಿತಿ ಹೊರಹಾಕಿದೆ.
ನಿವೃತ್ತ ಐಎಎಸ್ ಅಧಿಕಾರಿ ತರುಣ್ ಕಪೂರ್, ಈಗಾಗಲೇ ಪೆಟ್ರೋಲಿಯಂ ಇಲಾಖೆಯಲ್ಲಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದು, ಮುಂದಿನ ಎರಡು ವರ್ಷಗಳ ಅವಧಿಗೆ ಸಲಹೆಗಾರರಾಗಿ ನೇಮಕವಾಗಿದ್ದಾರೆ.
ಇದನ್ನೂ ಓದಿ: ಸ್ವಪಕ್ಷದ ವಿರುದ್ಧ ವಾಗ್ದಾಳಿ... ಗುಜರಾತ್ ಕಾಂಗ್ರೆಸ್ ಕಾರ್ಯಾಧ್ಯಕ್ಷ ಸ್ಥಾನದಿಂದ ಹಾರ್ದಿಕ್ ವಜಾ!?
ಮೂಲತಃ ಹಿಮಾಚಲ ಪ್ರದೇಶದವರಾದ ಇವರು, 1987ರ ಬ್ಯಾಚ್ನ ಐಎಎಸ್ ಅಧಿಕಾರಿಯಾಗಿದ್ದರು. ಇವರ ಜೊತೆಗೆ ಐಎಎಸ್ ಅಧಿಕಾರಿಗಳಾಗಿರುವ ಹರಿರಂಜನ್ ರಾವ್ ಮತ್ತು ಅತಿಶ್ ಚಂದ್ರ ಸಹ ಪ್ರಧಾನಮಂತ್ರಿ ಕಚೇರಿಯ ಹೆಚ್ಚುವರಿ ಕಾರ್ಯದರ್ಶಿಗಳಾಗಿ ನೇಮಕಗೊಂಡಿದ್ದಾರೆ. ಇವರಿಗೆ ಭಾರತದ ಕಾರ್ಯದರ್ಶಿ ಹಂತದ ಸ್ಥಾನ ಮಾನ ನೀಡಲಾಗುವುದು ಎಂದು ತಿಳಿದು ಬಂದಿದೆ.