ನವದೆಹಲಿ : ಭಾರತದ ಟಾಟಾ ಮೋಟರ್ಸ್ ಏಪ್ರಿಲ್ 1ರಿಂದ ತನ್ನ ವಾಹನಗಳ ಬೆಲೆಯನ್ನು ಅವುಗಳ ಮಾಡೆಲ್ ಮತ್ತು ವೇರಿಯೆಂಟ್ಗಳಿಗನುಗುಣವಾಗಿ ಶೇ.2 ರಿಂದ 2.5ವರೆಗೆ ಹೆಚ್ಚಿಸುವುದಾಗಿ ಮಂಗಳವಾರ ತಿಳಿಸಿದೆ.
ಉಕ್ಕು, ಅಲ್ಯೂಮಿನಿಯಂ ಮತ್ತು ಇತರ ಬೆಲೆಬಾಳುವ ಲೋಹಗಳಿಂದ ತಯಾರಾದ ಸರಕುಗಳ ಬೆಲೆಯಲ್ಲಿನ ಹೆಚ್ಚಳ ಮತ್ತು ಇತರ ಕಚ್ಚಾ ವಸ್ತುಗಳ ಮೇಲಿನ ಬೆಲೆ ಏರಿಕೆ ಕಾರಣದಿಂದಾಗಿ ತನ್ನ ವಾಹನಗಳ ಬೆಲೆಯನ್ನು ಹೆಚ್ಚಿಸುವ ನಿರ್ಧಾರ ಮಾಡಲಾಗಿದೆ.
ಉತ್ಪಾದನೆಯ ವಿವಿಧ ಹಂತಗಳಲ್ಲಿ ಎದುರಿಸುವ ಬೆಲೆ ಹೆಚ್ಚಳದ ಹೊರೆಯನ್ನು ಉಳಿಕೆಯ ಅನುಪಾತಕ್ಕೆ ಸರಿದೂಗಿಸಲು ಕಂಪನಿ ಈ ನಿರ್ಧಾರವನ್ನು ಕೈಗೊಂಡಿದೆ ಎಂದು ತಿಳಿಸಿದೆ.
ಇದನ್ನೂ ಓದಿ: ನೀವು ಕ್ರೆಡಿಟ್ ಕಾರ್ಡ್ ಹೊಂದಿರುವಿರಾ? ಹಾಗಾದರೆ ಇವೆಲ್ಲ ಆಫರ್ಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕು!
ಕಳೆದ ವಾರ ಮರ್ಸಿಡಿಸ್-ಬೆನ್ಝ್ ಇಂಡಿಯಾ ತಯಾರಿಕ ವಸ್ತುಗಳ ಮೇಲಿನ ಬೆಲೆ ಏರಿಕೆಯ ಪರಿಣಾಮವನ್ನು ಸರಿದೂಗಿಸುವ ಸಲುವಾಗಿ ಏಪ್ರಿಲ್ 1ರಿಂದ ತನ್ನ ಎಲ್ಲಾ ಮಾದರಿಯ ವಾಹನಗಳ ಬೆಲೆಯನ್ನು ಶೇ.3ರಷ್ಟು ಹೆಚ್ಚಿಸಲಾಗುವುದು ಎಂದು ಕಂಪನಿ ಹೇಳಿತ್ತು.