ಹೈದರಾಬಾದ್ (ತೆಲಂಗಾಣ): ಈಜಲು ತೆರಳಿದ್ದ ಐವರು ವಿದ್ಯಾರ್ಥಿಗಳು ಹಾಗೂ ಓರ್ವ ಶಿಕ್ಷಕ ಈಜು ಬರಲಾರದೇ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಹೈದರಾಬಾದ್ನ ಮೇಡ್ಚಲ್ ಜಿಲ್ಲೆಯಲ್ಲಿ ಇಂದು ಸಂಭವಿಸಿದೆ. ಜವಾಹರನಗರ ವ್ಯಾಪ್ತಿಯ ಮಲ್ಕಾಪುರದ ಎರ್ರಗುಂಟಾ ಹೊಂಡದಲ್ಲಿ ಈ ಘೋರ ದುರಂತ ನಡೆದಿದೆ.
ಮೃತ ಶಿಕ್ಷಕ ಮತ್ತು ವಿದ್ಯಾರ್ಥಿಗಳು ಇಲ್ಲಿಯ ಅಂಬರ್‌ಪೇಟೆಯ ಮದರಸಾದ ಶಾಲೆಯವರಾಗಿದ್ದಾರೆ. ಐವರು ವಿದ್ಯಾರ್ಥಿಗಳು ಕೆರೆಯಲ್ಲಿ ಮೊದಲು ಈಜಲು ಹೋಗಿದ್ದರು. ಈಜು ಬಾರದೇ ನೀರಿನಲ್ಲಿ ಮುಳುಗಿದ್ದಾರೆ. ವಿದ್ಯಾರ್ಥಿಗಳನ್ನು ರಕ್ಷಿಸಲು ಹೋದ ಶಿಕ್ಷಕ ಕೂಡ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಸ್ಥಳೀಯ ಮಾಹಿತಿ ಪ್ರಕಾರ, ಮದರಸಾ ಶಾಲೆಯ ಶಿಕ್ಷಕರೆಲ್ಲ ಸೇರಿ ಇಂದು ವಿದ್ಯಾರ್ಥಿಗಳೊಂದಿಗೆ ಪ್ರವಾಸಕ್ಕೆ ಎಂದು ಬಂದಿದ್ದರು. ಪ್ರವಾಸದ ಖುಷಿಯಲ್ಲಿದ್ದ ಅವರು ನೀರು ನೋಡುತ್ತಿದ್ದಂತೆ ಹೊಂಡಕ್ಕೆ ಜಿಗಿದಿದ್ದಾರೆ. ಕೆರೆ ಆಳವಾಗಿದ್ದರಿಂದ ವಿದ್ಯಾರ್ಥಿಗಳು ಈಜು ಬಾರದೇ ನೀರಿನಲ್ಲಿ ಮುಳುಗಿ ಜೀವ ತೆತ್ತಿದ್ದಾರೆ.
ನೀರಿನಲ್ಲಿ ಮುಳುಗುತ್ತಿದ್ದ ವಿದ್ಯಾರ್ಥಿಗಳನ್ನು ರಕ್ಷಿಸಲು ತೆರಳಿದ ಶಿಕ್ಷಕನೂ ಮುಳುಗಿದ್ದಾರೆ. ಮೃತ ವಿದ್ಯಾರ್ಥಿಗಳೆಲ್ಲರೂ 12 ರಿಂದ 14 ವರ್ಷದವರೆಂದು ತಿಳಿದು ಬಂದಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ನುರಿತ ಈಜುಗಾರರ ಸಹಾಯದಿಂದ ಶೋಧ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಹೊರತೆಗೆಸಿದ್ದಾರೆ.
ಇದನ್ನೂ ಓದಿ: ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣ: ಆರೋಪಿಗಳಿಗೆ ನ.15ರ ವರೆಗೆ ನ್ಯಾಯಾಂಗ ಬಂಧನ