ETV Bharat / bharat

ವಿದ್ಯಾರ್ಥಿನಿ ಆತ್ಮಹತ್ಯೆ: ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಎದುರಿಸಿದ ಶಿಕ್ಷಕ ಸೊಸೈಡ್​ - ಲೈಂಗಿಕ ದೌರ್ಜನ್ಯ ಆರೋಪದ ಶಿಕ್ಷಕ ಆತ್ಮಹತ್ಯೆ

ತಮಿಳುನಾಡಿನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಕ್ಕೆ ಗುರಿಯಾಗಿದ್ದ ಶಿಕ್ಷಕನೋರ್ವ ಇದೀಗ ಸೊಸೈಡ್​ ನೋಟ್​ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Karur Girl suicide case
Karur Girl suicide case
author img

By

Published : Nov 25, 2021, 9:05 PM IST

ಕರೂರ್​(ತಮಿಳುನಾಡು): ಲೈಂಗಿಕ ದೌರ್ಜನ್ಯದಿಂದಾಗಿ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದ ವಿದ್ಯಾರ್ಥಿನಿವೋರ್ವಳ ಪ್ರಕರಣದಲ್ಲಿ ಆರೋಪಕ್ಕೆ ಗುರಿಯಾಗಿದ್ದ ಶಿಕ್ಷಕ ಇದೀಗ ಆತ್ಮಹತ್ಯೆಗೆ ಶರಣಾಗಿದ್ದಾರೆ. ತಮಿಳುನಾಡಿನ ತಿರುಚ್ಚಿಯಲ್ಲಿ ಈ ಘಟನೆ ನಡೆದಿದ್ದು, ಕಾಲೇಜ್​ ಆಡಳಿತ ಮಂಡಳಿ ಹಾಗೂ ವಿದ್ಯಾರ್ಥಿಗಳು ಆತಂಕಕ್ಕೊಳಗಾಗಿದ್ದಾರೆ.

ತಿರುಚ್ಚಿಯಲ್ಲಿ ವ್ಯಾಸಂಗ ಮಾಡ್ತಿದ್ದ 12ನೇ ತರಗತಿ ವಿದ್ಯಾರ್ಥಿನಿಯೋರ್ವಳು ನವೆಂಬರ್​ 19ರಂದು ಆತ್ಮಹತ್ಯೆಗೆ ಶರಣಾಗಿದ್ಧ ಘಟನೆ ಕರೂರ್​​ನಲ್ಲಿ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ಕಾಲೇಜ್​​ನ ಶಿಕ್ಷಕನೋರ್ವನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿತ್ತು. ಇದರ ಬೆನ್ನಲ್ಲೇ ಶಿಕ್ಷಕ ತಿರುಚ್ಚಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮೃತ ಶಿಕ್ಷಕನ ಬಳಿ ಡೆತ್​ನೋಟ್​​ ಪತ್ತೆಯಾಗಿದ್ದು, ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣದಲ್ಲಿ ಸಹ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ತಮ್ಮನ್ನ ಚುಡಾಯಿಡಿದ್ದರು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ವಧು-ವರನಿಗೋಸ್ಕರ ಬೆಳ್ಳಿ ಶೂ,ಬೆಲ್ಟ್​ & ಪರ್ಸ್: ಜೋಧಪುರ ವ್ಯಾಪಾರಿ ಆಭರಣಕ್ಕೆ ಇನ್ನಿಲ್ಲದ ಡಿಮ್ಯಾಂಡ್

ಕರೂರಿನಲ್ಲಿ ಕುಟುಂಬ ಸಮೇತವಾಗಿ ವಾಸವಾಗಿದ್ದ ಶಿಕ್ಷಕ ಬುಧವಾರ ಮಧ್ಯಾಹ್ನ ತಿರುಚ್ಚಿಯಲ್ಲಿರುವ ಅತ್ತೆ ಮನೆಗೆ ತೆರಳಿದ್ದರು. ಇದರ ಬೆನ್ನಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದು, ತನಿಖೆ ಮುಂದುವರೆಸಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಿರುವ 44 ವರ್ಷದ ಶಿಕ್ಷಕನಿಗೆ ಹೆಂಡತಿ ಹಾಗೂ ಇಬ್ಬರು ಮಕ್ಕಳಿದ್ದಾರೆಂದು ತಿಳಿದು ಬಂದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.