ETV Bharat / bharat

ರಾಜಸ್ಥಾನದಲ್ಲಿ ಶಿಕ್ಷಕರ ನೇಮಕಾತಿ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: 44 ಮಂದಿ ಬಂಧನ - ಮುಖ್ಯಮಂತ್ರಿ ಅಶೋಕ್​ ಗೆಹ್ಲೋಟ್

ರಾಜಸ್ಥಾನದಲ್ಲಿ ಶನಿವಾರ ನಡೆಯಬೇಕಿದ್ದ ಶಿಕ್ಷಕರ ನೇಮಕಾತಿ ಅರ್ಹತಾ ಪರೀಕ್ಷೆ ಪತ್ರಿಕೆ ಸೋರಿಕೆಯಾಗಿದೆ. ಇದರಿಂದ ಸರ್ಕಾರ ಪರೀಕ್ಷೆಯನ್ನು ರದ್ದು ಮಾಡಿದೆ. ಮುಂದಿನ ತಿಂಗಳು ಮರು ಪರೀಕ್ಷೆ ನಡೆಸಲಾಗುವುದು ಎಂದು ಘೋಷಿಸಿದೆ. ಕೇಸ್​ನಲ್ಲಿ ಈವರೆಗೆ 44 ಜನರನ್ನು ಬಂಧಿಸಲಾಗಿದೆ.

teacher-examination-paper-leak-case-in-rajasthan
ರಾಜಸ್ಥಾನದಲ್ಲಿ ಶಿಕ್ಷಕರ ನೇಮಕಾತಿ ಪರೀಕ್ಷೆ ಪತ್ರಿಕೆ ಸೋರಿಕೆ
author img

By

Published : Dec 25, 2022, 9:45 AM IST

ಉದಯಪುರ (ರಾಜಸ್ಥಾನ): ಕರ್ನಾಟಕದಲ್ಲಿ ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ (ಪಿಎಸ್​ಐ) ಪರೀಕ್ಷೆ ಪತ್ರಿಕೆ ಸೋರಿಕೆಯಾಗಿ ಭಾರಿ ವಿವಾದ ಉಂಟಾದಂತೆ ರಾಜಸ್ಥಾನದಲ್ಲೂ ಶಿಕ್ಷಕರ ನೇಮಕಾತಿ ಪರೀಕ್ಷಾ ಪತ್ರಿಕೆ ಎಕ್ಸಾಂಗೂ ಮೂರು ದಿನ ಮೊದಲು ಪ್ರಶ್ನೆ ಪತ್ರಿಕೆ ಲೀಕ್​ ಆಗಿದೆ. ಪ್ರಕರಣದಲ್ಲಿ ಅಭ್ಯರ್ಥಿಗಳು ಸೇರಿದಂತೆ 44 ಜನರನ್ನು ಬಂಧಿಸಲಾಗಿದೆ. ನೇಮಕಾತಿಗೆ ಜನವರಿ 29 ರಂದು ಮರು ಪರೀಕ್ಷೆ ನಡೆಯಲಿದೆ ಎಂದು ಅಲ್ಲಿನ ಸರ್ಕಾರ ತಿಳಿಸಿದೆ.

ಶಿಕ್ಷಕರ ನೇಮಕಾತಿಗಾಗಿ ರಾಜ್ಯಾದ್ಯಂತ ಶನಿವಾರ ಪರೀಕ್ಷೆ ನಡೆಯಬೇಕಿತ್ತು. ಆದರೆ, ಮೂರು ದಿನಗಳ ಹಿಂದೆ ಪ್ರಶ್ನೆ ಪತ್ರಿಕೆಗಳು ಸ್ಟ್ರಾಂಗ್​ ರೂಮ್​ ಸೇರುವ ಮುನ್ನವೇ ಸೋರಿಕೆಯಾಗಿದ್ದವು. ಈ ಬಗ್ಗೆ ದಾಖಲಾದ ದೂರಿನ ಮೇರೆಗೆ ನಡೆದ ತನಿಖೆಯಲ್ಲಿ ಪ್ರಶ್ನೆ ಪತ್ರಿಕೆ ಲೀಕ್​ ಆಗಿದ್ದು ಗೊತ್ತಾಗಿದೆ. ಇದರಿಂದ ಶಿಕ್ಷಣ ಇಲಾಖೆ ದಿಢೀರ್​ ಆಗಿ ಪರೀಕ್ಷೆಯನ್ನು ರದ್ದು ಮಾಡಿದೆ. ಈ ಬಗ್ಗೆ ಉನ್ನತ ಮಟ್ಟದ ತನಿಖೆಗೆ ನೀಡಲಾಗುವುದು ಎಂದು ಸರ್ಕಾರ ತಿಳಿಸಿದೆ.

5,378 ಖಾಲಿ ಹುದ್ದೆಗಳಿಗೆ ರಾಜಸ್ಥಾನ ಶಿಕ್ಷಕರ ಅರ್ಹತಾ ಪರೀಕ್ಷೆ(ರೀಟ್​) ಹಮ್ಮಿಕೊಂಡಿದ್ದು, 26 ಲಕ್ಷಕ್ಕೂ ಅಧಿಕ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರು. ಪರೀಕ್ಷೆಗೆ ಸಜ್ಜಾಗಿದ್ದ ಅಭ್ಯರ್ಥಿಗಳು ಪ್ರಶ್ನೆಪತ್ರಿಕೆ ಸೋರಿಕೆಯಾದ ಸುದ್ದಿಯ ಬಳಿಕ ಆತಂಕಕ್ಕೀಡಾಗಿದ್ದರು. ಬಳಿಕ ಸರ್ಕಾರವೇ ಪರೀಕ್ಷೆಯನ್ನು ರದ್ದು ಮಾಡಿದೆ.

ಪರೀಕ್ಷೆ ರದ್ದು, ಅಭ್ಯರ್ಥಿಗಳಿಂದ ಪ್ರತಿಭಟನೆ: ಶಿಕ್ಷಕರ ನೇಮಕಾತಿಗಾಗಿ ನಡೆಯಬೇಕಿದ್ದ ಅರ್ಹತಾ ಪರೀಕ್ಷೆ ರದ್ದಾದ ಬಳಿಕ ಅಭ್ಯರ್ಥಿಗಳು ಪ್ರತಿಭಟನೆ ನಡೆಸಿದರು. ಪೇಪರ್ ಸೋರಿಕೆಯಿಂದಾಗಿ ತಮ್ಮ ಭವಿಷ್ಯ ಡೋಲಾಯಮಾನವಾಗಿದೆ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅಭ್ಯರ್ಥಿಗಳು ಬೀದಿಗಿಳಿದರು. ಇಂದು ಬೆಳಗೆಗ 9 ಗಂಟೆಗೆ ಆರಂಭವಾಗಬೇಕಿದ್ದ ಸಾಮಾನ್ಯ ಜ್ಞಾನ ಪರೀಕ್ಷೆಯ ಪ್ರಶ್ನೆಪತ್ರಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ ಸುದ್ದಿ ತಿಳಿದ ತಕ್ಷಣ ಅಲ್ಲಿನ ಶಿಕ್ಷಣ ಇಲಾಖೆ ಪರೀಕ್ಷೆ ರದ್ದು ಮಾಡಲಾಗಿದೆ ಎಂದು ಘೋಷಿಸಿತು.

ಆರೋಪಿಗಳ ಬಂಧನ: ಪ್ರಶ್ನೆ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಚುರುಕಿನ ತನಿಖೆ ನಡೆಸಿದ ಪೊಲೀಸರು ಉದಯಪುರದಲ್ಲಿ 37 ವಿದ್ಯಾರ್ಥಿಗಳು ಮತ್ತು ಏಳು ಮಂದಿ ಸೇರಿದಂತೆ 44 ಜನರನ್ನು ಬಂಧಿಸಿದ್ದಾರೆ. ಪ್ರಶ್ನೆಪತ್ರಿಕೆ ನಕಲು ಮಾಡಿದ ಆರೋಪದ ಮೇಲೆ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಅಲ್ಲದೇ, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದ್ದು, ಇನ್ನು ಮುಂದೆ ಯಾವುದೇ ಪರೀಕ್ಷೆಗೆ ಅವರು ಹಾಜರಾಗದಂತೆ ನಿರ್ಬಂಧ ವಿಧಿಸಲಾಗಿದೆ.

ಸಿಎಂ ಗೆಹ್ಲೋಟ್​ ಪ್ರತಿಕ್ರಿಯೆ: ಪೇಪರ್ ಸೋರಿಕೆ ಪ್ರಕರಣ ಅತ್ಯಂತ ದುರದೃಷ್ಟಕರ. ಇದು ಹಲವು ರಾಜ್ಯಗಳಲ್ಲಿ ಬೆಳಕಿಗೆ ಬಂದಿದೆ. ಇದಕ್ಕಾಗಿ ಅಭ್ಯರ್ಥಿಗಳು ದಂಡ ತೆರಬೇಕಿದೆ. ಇದನ್ನು ತಡೆಯಲು ಕಠಿಣ ಕಾನೂನುಗಳನ್ನು ತರುತ್ತೇವೆ. ಪೇಪರ್ ಸೋರಿಕೆಯನ್ನು ರಾಜ್ಯದಲ್ಲಿ ಅನುಮತಿಸಲಾಗುವುದಿಲ್ಲ. ಇಲ್ಲಿಯವರೆಗೆ 45 ಜನರನ್ನು ಬಂಧಿಸಲಾಗಿದೆ. ತಪ್ಪು ಮಾಡಿದ ಅಭ್ಯರ್ಥಿಗಳನ್ನು ಕಪ್ಪು ಪಟ್ಟಿಗೆ ಸೇರಿಸಲಾಗಿದೆ ಎಂದು ಮುಖ್ಯಮಂತ್ರಿ ಅಶೋಕ್​ ಗೆಹ್ಲೋಟ್​ ತಿಳಿಸಿದರು.

ಪರೀಕ್ಷಾ ಮುಂದಿನ ದಿನಾಂಕ ಪ್ರಕಟ: ಸೋರಿಕೆಯಿಂದಾಗಿ ಇಂದು ರದ್ದಾದ ಶಿಕ್ಷಕರ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಯನ್ನು 29 ಜನವರಿ 2023 ರಂದು ನಡೆಸಲಾಗುವುದು ಎಂದು ರಾಜಸ್ಥಾನ ಲೋಕಸೇವಾ ಆಯೋಗ ತಿಳಿಸಿದೆ.

ಪ್ರತಿಪಕ್ಷಗಳ ಕಿಡಿ: ಪೋಷಕರು ಮಕ್ಕಳ ಶಿಕ್ಷಣಕ್ಕಾಗಿ ತಮ್ಮ ಜೀವನವನ್ನೇ ತೇಯ್ದಿರುತ್ತಾರೆ. ಅಭ್ಯರ್ಥಿಗಳು ಕೂಡ ಕನಸು ಕಂಡು ಪರೀಕ್ಷೆಗೆ ಸಜ್ಜಾಗಿರುತ್ತಾರೆ. ಪ್ರಶ್ನೆಪತ್ರಿಕೆ ಸೋರಿಕೆಯಾಗಿರುವುದು ಅವರ ಜೀವನವನ್ನೇ ಹಾಳು ಮಾಡಿದಂತೆ. ಸರ್ಕಾರ ಈ ಬಗ್ಗೆ ಎಚ್ಚರಿಕೆ ವಹಿಸಬೇಕಿತ್ತು. ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷೆಗಳ ಪತ್ರಿಕೆಗಳು ಸೋರಿಕೆಯಾಗುವುದಿಲ್ಲ. ಅಂತಹ ಕಠಿಣ ಕ್ರಮಗಳನ್ನು ರಾಜ್ಯ ಸರ್ಕಾರ ವಹಿಸಬೇಕಿತ್ತು. ಇದು ಸರ್ಕಾರದ ನಿರ್ಲಕ್ಷ್ಯವಾಗಿದೆ. ರಾಜಕೀಯ ನೆರಳಿನಲ್ಲೇ ಪೇಪರ್ ಸೋರಿಕೆಯಾಗಿದೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ.

ಈ ಹಿಂದೆಯೂ ನಡೆದಿತ್ತು ಅಕ್ರಮ: ಡಿಸೆಂಬರ್ 2020 ರಲ್ಲಿ ನಡೆಸಲಾಗಿದ್ದ ಜೆಇಎನ್ ಪರೀಕ್ಷೆಯನ್ನು ಪೇಪರ್ ಸೋರಿಕೆಯಿಂದಾಗಿಯೇ ರದ್ದುಗೊಳಿಸಲಾಗಿತ್ತು. ಆ ಬಳಿಕ ಇಲ್ಲಿಯವರೆಗೂ ಪರೀಕ್ಷೆ ನಡೆಸಲಾಗಿಲ್ಲ. 533 ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಪರೀಕ್ಷೆ ಬರೆದಿದ್ದ 31,752 ಅಭ್ಯರ್ಥಿಗಳ ಭವಿಷ್ಯ ಅನಿಶ್ಚಿತವಾಗಿದೆ.

2019 ರ ಸೆಪ್ಟೆಂಬರ್‌ನಲ್ಲಿ ನಡೆದ ಲೈಬ್ರರಿಯನ್ ಪರೀಕ್ಷೆಯಲ್ಲೂ ಪ್ರಶ್ನೆಪತ್ರಿಕೆ ಸೋರಿಕೆಯಾದ ಘಟನೆ ನಡೆದಿತ್ತು. ಸುಮಾರು 700 ಹುದ್ದೆಗಳಿಗೆ 50 ಸಾವಿರ ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು. ಸೋರಿಕೆ ಆಪಾದನೆ ಕೇಳಿಬಂದ ಬಳಿಕ ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಸತ್ಯ ಬಯಲಾಗಿತ್ತು. ಆ ಪರೀಕ್ಷೆಯ ಫಲಿತಾಂಶ ಇನ್ನೂ ಬಹಿರಂಗವಾಗಿಲ್ಲ. ಇನ್ನು ಫಾರ್ಮಾಸಿಸ್ಟ್ ಪರೀಕ್ಷೆಗಾಗಿ ಐದು ಅಧಿಸೂಚನೆಗಳನ್ನು ಹೊರಡಿಸಿದಾಗಿಯೂ ಪರೀಕ್ಷೆ ಇನ್ನೂ ನಡೆಸಲಾಗಿಲ್ಲ. ರಾಜ್ಯದಲ್ಲಿ 1,736 ಗ್ರಂಥಪಾಲಕರ ಹುದ್ದೆಗಳಿಗೆ ನೇಮಕಾತಿ ಪರೀಕ್ಷೆ ನಡೆಯಬೇಕಿದೆ.

ಇದನ್ನೂ ಓದಿ: ಎನ್​ಜಿಒ ಕೆಲಸ, ಮಸೀದಿ ಬೋಧನೆಯಲ್ಲಿ ಪಾಲ್ಗೊಳ್ಳಬೇಡಿ: ಮಹಿಳೆಯರಿಗೆ ತಾಲಿಬಾನ್​ ನಿಷೇಧ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.