ಬಾಗೇಶ್ವರ(ಉತ್ತರಾಖಂಡ): ಜಿಲ್ಲೆಯ ಜೂನಿಯರ್ ಹೈಸ್ಕೂಲ್ ರೇಖೌಲಿಯಲ್ಲಿ ಕಳೆದ ಎರಡು ದಿನಗಳಿಂದ ವಿದ್ಯಾರ್ಥಿನಿಯರು ವಿಚಿತ್ರವಾಗಿ ವರ್ತಿಸುತ್ತಿದ್ದು, ಕೆಲವೊಮ್ಮೆ ಏಕಾಏಕಿ ಪ್ರಜ್ಞೆ ತಪ್ಪಿ ಬೀಳುತ್ತಿದ್ದಾರೆ. ವಿದ್ಯಾರ್ಥಿನಿಯರ ವರ್ತನೆಗೆ ಇದೀಗ ಶಾಲಾ ಸಿಬ್ಬಂದಿ ಹಾಗೂ ಪೋಷಕರು ಭಯಭೀತರಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲಾ ಆಡಳಿತ ಮಂಡಳಿ ಶಿಕ್ಷಣ ಇಲಾಖೆಗೆ ಮಾಹಿತಿ ನೀಡಿದೆ.
ಸರ್ಕಾರಿ ಜೂನಿಯರ್ ಹೈಸ್ಕೂಲ್ನ ವಿದ್ಯಾರ್ಥಿನಿಯರು ಶಾಲೆ ಪ್ರವೇಶಿಸುತ್ತಿದ್ದಂತೆ ಕಿರುಚಲು ಶುರು ಮಾಡುವುದು, ತಮ್ಮ ಕೂದಲು ತೆರೆದು ನಡುಗುವುದು, ಇದಲ್ಲದೇ ಏಕಾಏಕಿ ಡ್ಯಾನ್ಸ್ ಮಾಡಲು ಶುರು ಮಾಡುತ್ತಾರೆ. ಕಳೆದ ಎರಡು ದಿನಗಳಿಂದ ಈ ವಿಚಿತ್ರ ವರ್ತನೆ ವಿದ್ಯಾರ್ಥಿನಿಯರಲ್ಲಿ ಕಂಡು ಬಂದಿದೆ. ಶಾಲೆಗೆ ಈಗಾಗಲೇ ಶಿಕ್ಷಣ ಇಲಾಖೆ ಉನ್ನತಾಧಿಕಾರಿಗಳು ಆಗಮಿಸಿ, ಪರಿಶೀಲನೆ ನಡೆಸಿದ್ದಾರೆ.
ಸುಮಾರು 15ಕ್ಕೂ ಅಧಿಕ ವಿದ್ಯಾರ್ಥಿನಿಯರು ಈ ರೀತಿಯಾಗಿ ವರ್ತಿಸುತ್ತಿದ್ದಾರೆಂದು ಶಾಲೆಯ ಶಿಕ್ಷಕರು ತಿಳಿಸಿದ್ದಾರೆ. ಇದರ ಬೆನ್ನಲ್ಲೇ ಗ್ರಾಮಸ್ಥರು ಶಾಲೆಗೆ ಬಾಬಾನೋರ್ವನ ಕರೆತಂದು, ಶಾಂತಿ ಮಂತ್ರ ಪಠಿಸಿದ್ದಾರೆ. ಇದಾದ ಬಳಿಕ ಎಲ್ಲ ವಿದ್ಯಾರ್ಥಿನಿಯರು ಶಾಂತಗೊಂಡಿದ್ದಾಗಿ ವರದಿಯಾಗಿದೆ.
ಇದನ್ನೂ ಓದಿರಿ: ಹಿಂದೂ ಯುವಕನೊಂದಿಗೆ ಮುಸ್ಲಿಂ ಯುವತಿ ವಿವಾಹ.. ಮಗಳನ್ನೇ ಆಟೋ ಹತ್ತಿಸಿ ಕೊಲ್ಲಲು ಯತ್ನಿಸಿದ ತಂದೆ!
ಘಟನೆಗೆ ಸಂಬಂಧಿಸಿದಂತೆ ಮುಖ್ಯ ಶಿಕ್ಷಣಾಧಿಕಾರಿ ಗಜೇಂದ್ರ ಅವರಿಗೆ ಮಾಹಿತಿ ನೀಡಲಾಗಿದ್ದು, ಗ್ರಾಮಸ್ಥರಿಂದ ಮತ್ತಷ್ಟು ಮಾಹಿತಿ ಪಡೆದುಕೊಳ್ಳಲಾಗುವುದು ಎಂದು ಸಿಇಒ ತಿಳಿಸಿದ್ದಾರೆ. ಜೊತೆಗೆ ವಿದ್ಯಾರ್ಥಿನಿಯರ ಆರೋಗ್ಯ ತಪಾಸಣೆಗೋಸ್ಕರ ಆರೋಗ್ಯ ಇಲಾಖೆ ಅಧಿಕಾರಿಗಳ ತಂಡವನ್ನ ಶಾಲೆಗೆ ಕಳುಹಿಸುವುದಾಗಿ ತಿಳಿಸಿದ್ದಾರೆ. ಈ ಪ್ರಕರಣ ಸದ್ಯ ಇಡೀ ಗ್ರಾಮದಲ್ಲಿ ಚರ್ಚೆಯ ವಿಷಯವಾಗಿದೆ.