ETV Bharat / bharat

ಅತ್ಯಾಚಾರ ಕೊಲೆ ಪ್ರಕರಣ: ಮನೆಯಲ್ಲಿ ಮಲಗಿದ್ದ ಬಾಲಕಿ ಬೆಳಗ್ಗೆ ಶವವಾಗಿ ಪತ್ತೆ

ಭಾನುವಾರ ರಾತ್ರಿ ಎಂದಿನಂತೆ ಮನೆಯಲ್ಲಿ ಮಲಗಿದ್ದ 16 ವರ್ಷದ ಬಾಲಕಿ ಸೋಮವಾರ ಬೆಳಗ್ಗೆ ಮನೆಯಿಂದ ಅನತಿ ದೂರದಲ್ಲಿರುವ ನಿರ್ಜನ ಪ್ರದೇಶದ ಪೊದೆಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಇದು ಅತ್ಯಾಚಾರ ಕೊಲೆ ಪ್ರಕರಣವೆಂದು ಮೇಲ್ನೋಟಕ್ಕೆ ಕಂಡುಬಂದಿದ್ದು, ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸುವ ಕಾರ್ಯ ಪ್ರಗತಿಯಲ್ಲಿದೆ.

Accused
ಪ್ರಮುಖ ಆರೋಪಿ
author img

By

Published : Mar 29, 2022, 9:54 AM IST

ವಿಕಾರಾಬಾದ್​( ತೆಲಂಗಾಣ): ವಿಕಾರಾಬಾದ್ ಜಿಲ್ಲೆಯಲ್ಲಿ ಅತ್ಯಾಚಾರ ಮತ್ತು ಕೊಲೆ ಶಂಕಿತ ಪ್ರಕರಣದಲ್ಲಿ 16 ವರ್ಷದ ಬಾಲಕಿಯೊಬ್ಬಳು ಸೋಮವಾರ ಶವವಾಗಿ ಪತ್ತೆಯಾಗಿದ್ದಾಳೆ. ತಲೆಗೆ ಗಾಯಗಳಾಗಿರುವ ಮೃತದೇಹ ಅಂಗಡಿ ಚಿಟ್ಟಂಪಲ್ಲಿ ಗ್ರಾಮದ ಹೊರವಲಯದಲ್ಲಿ ಬಿದ್ದಿರುವುದನ್ನು ಸ್ಥಳೀಯ ನಿವಾಸಿಗಳು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಇದು ಅತ್ಯಾಚಾರ ಕೊಲೆ ಪ್ರಕರಣವೆಂದು ಮೇಲ್ನೋಟಕ್ಕೆ ಕಂಡುಬಂದಿದ್ದು, ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸುವ ಕಾರ್ಯ ಪ್ರಗತಿಯಲ್ಲಿದೆ. ಅತ್ಯಾಚಾರ ಮತ್ತು ಕೊಲೆ ಪ್ರಕರಣದಡಿ ಕೇಸ್​ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪುದೂರು ವಲಯದ ಬಾಲಕಿ 10ನೇ ತರಗತಿ ಓದುತ್ತಿದ್ದಳು. ಭಾನುವಾರ ರಾತ್ರಿ ಎಂದಿನಂತೆ ಮನೆಯಲ್ಲಿ ಮಲಗಿದ್ದ ಆಕೆ ಸೋಮವಾರ ಬೆಳಗ್ಗೆ ಮನೆಯಿಂದ ಅನತಿ ದೂರದಲ್ಲಿರುವ ನಿರ್ಜನ ಪ್ರದೇಶದ ಪೊದೆಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ನಂತರ ಆಕೆಯನ್ನು ಹತ್ಯೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇದುವರೆಗೆ ಕವಲಿ ಮಹೇಂದ್ರ ಮತ್ತು ಇತರ ಮೂವರು ಯುವಕರನ್ನು ಬಂಧಿಸಿದ್ದಾರೆ. ಹೊಸ ಮನೆ ನಿರ್ಮಾಣ ಕೈಗೆತ್ತಿಕೊಂಡಿದ್ದ ಕವಲಿ ಮಹೇಂದ್ರ, ಭಾನುವಾರ ರಾತ್ರಿ ಸ್ನೇಹಿತರನ್ನು ಊಟಕ್ಕೆ ಆಹ್ವಾನಿಸಿದ್ದಾರೆ ಎಂಬುದು ತಿಳಿದು ಬಂದಿದೆ. ತನ್ನ ಪರಿಚಯದವರ ಸಹಾಯದಿಂದ ಮಹೇಂದ್ರ ಬೆಳ್ಳಂಬೆಳಗ್ಗೆ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆತಂದಿರುವ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ: ಮಂಗಳೂರಿನಲ್ಲಿ ಇಬ್ಬರು‌ ಮಕ್ಕಳೊಂದಿಗೆ ತಾಯಿ ನಾಪತ್ತೆ

ಇದು ಸಾಮೂಹಿಕ ಅತ್ಯಾಚಾರವೇ ಅಥವಾ ಇದು ಒಬ್ಬರಿಂದಾದ ಲೈಂಗಿಕ ದೌರ್ಜನ್ಯವೇ? ಈ ಬಗ್ಗೆ ಈಗಲೇ ಹೇಳಲಾಗದು, ತನಿಖೆಯ ನಂತರ ಸಂಪೂರ್ಣ ಮಾಹಿತಿ ಹೊರಬೀಳಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಎಸ್‌ಪಿ ಕೋಟಿರೆಡ್ಡಿ, ಡಿಎಸ್‌ಪಿ ಶ್ರೀನಿವಾಸ್‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚುವರಿ ಎಸ್​ಪಿ ರಶೀದ್ ನೇತೃತ್ವದಲ್ಲಿ ವಿಚಾರಣೆ ನಡೆಸಲಾಯಿತು. ಶ್ವಾನದಳ, ಆಪ್ತ ತಂಡಗಳು ಸ್ಥಳಕ್ಕೆ ಭೇಟಿ ನೀಡಿ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.