ETV Bharat / bharat

ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪ.. ಹೈದರಾಬಾದ್​ನಲ್ಲಿ ಮತ್ತೊಂದು ದುಷ್ಕೃತ್ಯ - ರೇಪ್

ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿರುವ ಆರೋಪದಡಿ ಯುವಕನನ್ನು ಸ್ಥಳೀಯರು ರೆಡ್ ಹ್ಯಾಂಡಾಗಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಅಪ್ರಾಪ್ತೆ ಮೇಲೆ ಅತ್ಯಾಚಾರ
ಅಪ್ರಾಪ್ತೆ ಮೇಲೆ ಅತ್ಯಾಚಾರ
author img

By

Published : Sep 16, 2021, 1:32 PM IST

ಹೈದರಾಬಾದ್‌: ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣ ಮಾಸುವ ಮುನ್ನವೇ ನಗರದಲ್ಲಿ ಮತ್ತೊಂದು ದುಷ್ಕೃತ್ಯ ಬೆಳಕಿಗೆ ಬಂದಿದೆ. ಮಂಗಳತ್​ ಪೊಲೀಸ್ ಠಾಣಾ ವ್ಯಾಪ್ತಿಯ ಮಾಂಗಾರು ಬಸ್ತಿಯಲ್ಲಿ ಬಾಲಕಿ ಮೇಲೆ ಸುಮಿತ್ ಎಂಬಾತ ಅತ್ಯಾಚಾರವೆಸಗಿರುವ ಆರೋಪ ಕೇಳಿ ಬಂದಿದೆ.

ಬುಧವಾರ ರಾತ್ರಿ 11 ಗಂಟೆಗೆ ಈ ಘಟನೆ ನಡೆದಿದ್ದು, ಬಾಲಕಿಯ ಕಿರುಚಾಟ ಕೇಳಿ ಸ್ಥಳೀಯರು ಆಕೆಯನ್ನು ರಕ್ಷಿಸಿದ್ದಾರೆ. ಆರೋಪಿ ಸುಮಿತ್​ನನ್ನು ರೆಡ್ ಹ್ಯಾಂಡಾಗಿ ಹಿಡಿದ ಸ್ಥಳೀಯರು, ಪೊಲೀಸರಿಗೆ ಒಪ್ಪಿಸಿದ್ದಾರೆ. ಸುಮಿತ್​​ ಈಗಾಗಲೇ ಕಳ್ಳತನ ಪ್ರಕರಣವೊಂದರಲ್ಲಿ ಪೊಲೀಸರಿಗೆ ಬೇಕಾಗಿದ್ದ ಆರೋಪಿ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಎಸಿಪಿ ನರೇಂದರ್ ರೆಡ್ಡಿ ಭೇಟಿ ನೀಡಿ, ಸ್ಥಳೀಯರಿಂದ ಮಾಹಿತಿ ಕಲೆ ಹಾಕಿದ್ದಾರೆ. ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗಾಗಿ ಕೋಟಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಇದನ್ನೂ ಓದಿ: Telangana Rape case: ಆರೋಪಿ ರೈಲು ಹಳಿಗೆ ಬಿದ್ದು ಆತ್ಮಹತ್ಯೆ

ಕೇವಲ ಎರಡು ವಾರಗಳ ಅವಧಿಯಲ್ಲಿ ಇಂಥ ಎರಡು ದುಷ್ಕೃತ್ಯಗಳು ವರದಿಯಾಗಿದ್ದು, ಸ್ಥಳೀಯರನ್ನು ಬೆಚ್ಚಿ ಬೀಳಿಸಿದೆ. ಇದರಿಂದಾಗಿ ಜನರು ಆಡಳಿತ ವ್ಯವಸ್ಥೆ ವಿರುದ್ಧ ತಿರುಗಿ ಬಿದ್ದಿದ್ದು, ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಒತ್ತಾಯಿಸುತ್ತಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.