ETV Bharat / bharat

ಬಿಜೆಪಿ ರಾಜ್ಯಾಧ್ಯಕ್ಷ ಬಂಡಿ ಸಂಜಯ್​ ವಶಕ್ಕೆ ಪಡೆದ ತೆಲಂಗಾಣ ಪೊಲೀಸ್​.. ರಾಜ್ಯಾದ್ಯಂತ ಪ್ರತಿಭಟನೆ ಎಚ್ಚರಿಕೆ - ತೆಲಂಗಾಣ ಬಿಜೆಪಿ ನಾಯಕರು

ಕರೀಂನಗರದ ನಿವಾಸದಿಂದ ನಿನ್ನೆ ತಡರಾತ್ರಿ ಬಿಜೆಪಿ ತೆಲಂಗಾಣ ಘಟಕದ ಅಧ್ಯಕ್ಷ ಬಂಡಿ ಸಂಜಯ್​ ಕುಮಾರ್​ ಅವರನ್ನು ತೆಲಂಗಾಣ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Telangana BJP chief Bandi Sanjay detained by police
ಬಿಜೆಪಿ ರಾಜ್ಯಾಧ್ಯಕ್ಷ ಬಂಡಿ ಸಂಜಯ್​ ವಶಕ್ಕೆ ಪಡೆದ ತೆಲಂಗಾಣ ಪೊಲೀಸ್​.. ರಾಜ್ಯಾದ್ಯಂತ ಪ್ರತಿಭಟನೆ ಎಚ್ಚರಿಕೆ
author img

By

Published : Apr 5, 2023, 8:12 AM IST

Updated : Apr 5, 2023, 9:28 AM IST

ಕರೀಂನಗರ (ತೆಲಂಗಾಣ): ರಾಜ್ಯ ಬಿಜೆಪಿ ಅಧ್ಯಕ್ಷ ಮತ್ತು ಸಂಸದ ಬಂಡಿ ಸಂಜಯ್ ಕುಮಾರ್ ಅವರನ್ನು ಬುಧವಾರ ಮಧ್ಯರಾತ್ರಿಯ ನಂತರ ಕರೀಂನಗರದ ಅವರ ನಿವಾಸದಿಂದ ವಶಕ್ಕೆ ಪಡೆಯಲಾಗಿದೆ. ಕರೀಂನಗರದಲ್ಲಿರುವ ಸಂಸದರ ನಿವಾಸಕ್ಕೆ ಆಗಮಿಸಿದ ಪೊಲೀಸರು ಅವರನ್ನು ವಶಕ್ಕೆ ತೆಗೆದುಕೊಂಡರು. ಬಂಡಿ ಸಂಜಯ್ ಬೆಂಬಲಿಗರು ಮತ್ತು ಪಕ್ಷದ ಕಾರ್ಯಕರ್ತರು ಪೊಲೀಸರನ್ನು ತಡೆಯಲು ಯತ್ನಿಸಿದ್ದರಿಂದ ಕೆಲಕಾಲ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.

Telangana BJP chief Bandi Sanjay detained by police
ಬಿಜೆಪಿ ರಾಜ್ಯಾಧ್ಯಕ್ಷ ಬಂಡಿ ಸಂಜಯ್​ ವಶಕ್ಕೆ ಪಡೆದ ತೆಲಂಗಾಣ ಪೊಲೀಸ್​.. ರಾಜ್ಯಾದ್ಯಂತ ಪ್ರತಿಭಟನೆ ಎಚ್ಚರಿಕೆ

ಬಂಡಿ ಸಂಜಯ್‌ ಅವರನ್ನು ಪೊಲೀಸರು ಎಳೆದೊಯ್ದು ನಂತರ ಪೊಲೀಸ್ ವ್ಯಾನ್‌ನೊಳಗೆ ಕೂರಿಸಿದ್ದಾರೆ. ವರದಿಯ ಪ್ರಕಾರ, ಅವರನ್ನು ನಲ್ಗೊಂಡ ಜಿಲ್ಲೆಯ ಬೊಮ್ಮಲಾ ರಾಮರಾಮ್ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ ಎಂಬ ಮಾಹಿತಿ ಇದೆ.

ಇದನ್ನು ಓದಿ:6 ಸಾವಿರ ಮಹಿಳೆಯರಿಗೆ 2 ಕೋಟಿ ರೂಪಾಯಿ ವಂಚಿಸಿದ ಇಬ್ಬರು ವಂಚಕರು ಅರೆಸ್ಟ್‌

ಪೊಲೀಸ್ ಕ್ರಮದ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ. ಈ ಬಂಧನದ ಬಗ್ಗೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೇಮೇಂದ್ರ ರೆಡ್ಡಿ ಮಾತನಾಡಿದ್ದು, "ಬಿಜೆಪಿ ರಾಜ್ಯಾಧ್ಯಕ್ಷ ಬಂಡಿ ಸಂಜಯ್ ಅವರನ್ನು ಮಧ್ಯರಾತ್ರಿ ಪೊಲೀಸರು ಅಕ್ರಮವಾಗಿ ಬಂಧಿಸಿದ್ದಾರೆ. ಕರೀಂನಗರದ ಅವರ ನಿವಾಸದಿಂದ ಕಾನೂನು ಬಾಹಿರವಾಗಿ ಅವರನ್ನು ಎಳೆದೊಯ್ಯಲಾಗಿದೆ ಎಂದು ಅವರು ಆರೋಪಿಸಿದ್ದಾರೆ. ಬೆಳಗ್ಗೆವರೆಗೆ ಬಿಟ್ಟಿದ್ದರೆ ಏನಾಗುತ್ತಿತ್ತು. ಬಂಡಿ ಸಂಜಯ್ ಎಲ್ಲಿಗೆ ಹೋಗುತ್ತಿದ್ದರು ಎಂದು ಪ್ರೇಮೇಂದ್ರ ರೆಡ್ಡಿ ಪ್ರಶ್ನಿಸಿದ್ದಾರೆ.

ಇದು ತೆಲಂಗಾಣದಲ್ಲಿ ಪ್ರಧಾನಿ ಮೋದಿಯವರ ಕಾರ್ಯಕ್ರಮಕ್ಕೆ ಅಡ್ಡಿಪಡಿಸುವುದನ್ನು ಬಿಟ್ಟರೆ ಬೇರೇನೂ ಅಲ್ಲ ಎಂದು ತೆಲಂಗಾಣ ಪೊಲೀಸರ ವಿರುದ್ಧ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಂಡಿ ಸಂಜಯ್​ ಬಗ್ಗೆ ಅವರು ನಮಗೆ ಏನನ್ನೂ ಹೇಳುತ್ತಿಲ್ಲ, ಅವರನ್ನು ಭೋಂಗಿರ್‌ಗೆ ಕರೆದೊಯ್ಯಲಾಗುತ್ತಿದೆ. ಅವರನ್ನು ಅಲ್ಲಿಗೆ ಏಕೆ ಕರೆದೊಯ್ಯಲಾಗುತ್ತಿದೆ? ಎಂದು ಅವರು ಪ್ರಶ್ನಿಸಿದ್ದಾರೆ.

  • #WATCH | Telangana: BJP state president and MP Bandi Sanjay Kumar was taken to Bommala Ramaram police station in Nalgonda district.

    Bandi Sanjay was detained by police from his residence in Karimnagar pic.twitter.com/6l0wX9BgzV

    — ANI (@ANI) April 4, 2023 " class="align-text-top noRightClick twitterSection" data=" ">

ಇದನ್ನು ಓದಿ: ಹೆತ್ತ ಶಿಶುವನ್ನು ಬಕೆಟ್​ನಲ್ಲಿ ಬಿಟ್ಟು ಆಸ್ಪತ್ರೆಗೆ ತೆರಳಿದ ತಾಯಿ: ಪೊಲೀಸರು ಮಗುವನ್ನು ರಕ್ಷಿಸಿದ್ದು ಹೀಗೆ..

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಸಿಆರ್ ಸರ್ಕಾರದ ವಿರುದ್ಧ ದನಿ ಎತ್ತುತ್ತಿರುವುದೇ ಈ ಕ್ರಮದ ಹಿಂದಿರುವ ಕಾರಣ ಎಂದು ರೆಡ್ಡಿ ಆರೋಪಿಸಿದ್ದಾರೆ. ಇದೆಲ್ಲವೂ ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿದೆ ಎಂದು ಬಂಡಿ ಸಂಜಯ್ ಬಂಧನದ ನಂತರ ತೆಲಂಗಾಣ ಬಿಜೆಪಿ ನಾಯಕರು ಆರೋಪಿಸಿದ್ದಾರೆ. ಬಂಡಿ ಸಂಜಯ್​ ಬಂಧನ ಖಂಡಿಸಿ, ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ವಕ್ತಾರ ಪ್ರೇಮೇಂದ್ರ ರೆಡ್ಡಿ ಹೇಳಿದ್ದಾರೆ.

"ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧ ಪೊಲೀಸ್ ಕ್ರಮದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ನಾವು ಯೋಜಿಸುತ್ತಿದ್ದೇವೆ ಎಂದು ರೆಡ್ಡಿ ಹೇಳಿದರು. ವಂದೇ ಭಾರತ್ ಉದ್ಘಾಟನೆಗೆ ಪ್ರಧಾನಿ ಮೋದಿ ಏಪ್ರಿಲ್​ 8 ರಂದು ತೆಲಂಗಾಣಕ್ಕೆ ಭೇಟಿ ನೀಡಲಿದ್ದಾರೆ. ಸಿಕಂದರಾಬಾದ್‌ನಿಂದ ತಿರುಪತಿಗೆ ಎಕ್ಸ್‌ಪ್ರೆಸ್ ರೈಲು ಜೊತೆಗೆ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಏಪ್ರಿಲ್​ 8 ರಂದು ಚಾಲನೆ ನೀಡಲಿದ್ದಾರೆ.

ಪೊಲೀಸರ ಕ್ರಮ ಖಂಡಿಸಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ: ಬಂಡಿ ಸಂಜಯ್ ಬೆಂಬಲಿಗರು ಮತ್ತು ಪಕ್ಷದ ಕಾರ್ಯಕರ್ತರು ಪೊಲೀಸರ ಕ್ರಮ ಖಂಡಿಸಿ, ಪೊಲೀಸ್​ ಠಾಣೆ ಎದುರು ಪ್ರತಿಭಟನೆ ನಡೆಸಿದ್ದಾರೆ.

ಇದನ್ನು ಓದಿ: ಹಿಂಸಾಚಾರದ ಸುದ್ದಿಗಳ ನಡುವೆ ಕೋಮು ಸಾಮರಸ್ಯ ಸ್ಥಾಪನೆ.. ರಾಮನವಮಿ ರಥ ಮುನ್ನಡೆಸಿದ ಮುಸ್ಲಿಂ ವ್ಯಕ್ತಿ

Last Updated : Apr 5, 2023, 9:28 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.