ಹೈದರಾಬಾದ್ (ತೆಲಂಗಾಣ): ನಿರ್ದಿಷ್ಟ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದಡಿ ಹೈದರಾಬಾದ್ನ ಗೋಶಾಮಹಲ್ ಕ್ಷೇತ್ರದ ಬಿಜೆಪಿ ಶಾಸಕ ರಾಜಾಸಿಂಗ್ ವಿರುದ್ಧ ಪ್ರಕರಣ ದಾಖಲಾಗಿದೆ.
ಶಾಸಕರ ವಿರುದ್ಧ ಉದ್ಯಮಿ ಮೊಹಮ್ಮದ್ ಅಲಿ ಎಂಬುವರು ನೀಡಿದ ದೂರಿನ ಮೇರೆಗೆ ಕಾಂಚನಭಾಗ್ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 295-ಎ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಇನ್ಸ್ಪೆಕ್ಟರ್ ಪಿ.ಉಮಾ ಮಹೇಶ್ವರರಾವ್ ತಿಳಿಸಿದ್ದಾರೆ.
ಸಮುದಾಯವೊಂದನ್ನು ಗುರಿಯಾಗಿಸಿ ರಾಜಾಸಿಂಗ್ ನೀಡಿರುವ ಹೇಳಿಕೆಯ ವೈರಲ್ ವಿಡಿಯೋ ನನ್ನ ಬಳಿ ಇದೆ. ಇಂಥ ಹೇಳಿಕೆಯಿಂದ ಧಾರ್ಮಿಕ ನಂಬಿಕೆಗಳಿಗೆ ಧಕ್ಕೆಯಾಗಿದ್ದು, ಶಾಸಕರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಅಲಿ ದೂರಿನಲ್ಲಿ ಒತ್ತಾಯಿಸಿದ್ದಾರೆ.
ಇದನ್ನೂ ಓದಿ: ವಿವಾದಾತ್ಮಕ ಹೇಳಿಕೆ: ನೂಪುರ್ ಶರ್ಮಾ ಪರ ಬ್ಯಾಟಿಂಗ್ ಮಾಡಿದ ಕಂಗನಾ ರಣಾವತ್