ETV Bharat / bharat

ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ: ಶಾಲೆಯ ಮಾನ್ಯತೆ ರದ್ದುಪಡಿಸಿದ ತೆಲಂಗಾಣ ಸರ್ಕಾರ - ಹೈದರಾಬಾದ್ ನಗರದ ಬಂಜಾರ ಹಿಲ್ಸ್‌

ಹೈದರಾಬಾದ್ ನಗರದ ಬಂಜಾರ ಹಿಲ್ಸ್‌ನಲ್ಲಿ ಶಾಲೆಯಲ್ಲಿ ನಾಲ್ಕು ವರ್ಷದ ಬಾಲಕಿ ಮೇಲೆ ಪ್ರಾಂಶುಪಾಲರ ಚಾಲಕ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಬೆಳಕಿಗೆ ಬಂದಿತ್ತು. ಆರೋಪಿ ಹಾಗೂ ಶಾಲೆಯ ಪ್ರಾಂಶುಪಾಲೆಯನ್ನು ಪೊಲೀಸರು ಬಂಧಿಸಿದ್ದಾರೆ.

Telangana government cancels school registration after sexual assault on LKG student
ವಿದ್ಯಾರ್ಥನಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ.. ಶಾಲೆಯ ಮಾನ್ಯತೆ ರದ್ದುಪಡಿಸಿದ ತೆಲಂಗಾಣ ಸರ್ಕಾರ
author img

By

Published : Oct 21, 2022, 7:49 PM IST

ಹೈದರಾಬಾದ್: ಇತ್ತೀಚೆಗಷ್ಟೇ ನಾಲ್ಕು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದ ಶಾಲೆಯ ಮಾನ್ಯತೆ ರದ್ದುಪಡಿಸಿ ಶಿಕ್ಷಣ ಸಚಿವೆ ಪಿ ಸಬಿತಾ ಇಂದ್ರಾ ರೆಡ್ಡಿ ಆದೇಶ ಹೊರಡಿಸಿದ್ದಾರೆ. ನಗರದ ಪೊಲೀಸರು ಈಗಾಗಲೇ ತನಿಖೆಗೆ ಸಹಕರಿಸದ ಹಿನ್ನೆಲೆಯಲ್ಲಿ ಪೊಲೀಸರು ಶಾಲೆಯ ಪ್ರಾಂಶುಪಾಲರನ್ನು ಮತ್ತು ಆಕೆಯ ಚಾಲಕನನ್ನು ಪೋಕ್ಸೊ ಕಾಯ್ದೆಯಡಿ ಬಂಧಿಸಿದ್ದಾರೆ.

ಪ್ರಸ್ತುತ ಶಾಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ವಿದ್ಯಾರ್ಥಿಗಳನ್ನು ಬೇರೆ ಶಾಲೆಗಳಿಗೆ ದಾಖಲಿಸುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ. ವಿದ್ಯಾರ್ಥಿಗಳ ಪೋಷಕರ ಅನುಮಾನಗಳನ್ನು ನಿವಾರಿಸುವುದು ಡಿಇಒ ಅವರ ಜವಾಬ್ದಾರಿ ಎಂದು ಸಚಿವೆ ಸಬಿತಾ ಇಂದ್ರಾರೆಡ್ಡಿ ಸ್ಪಷ್ಟಪಡಿಸಿದ್ದಾರೆ.

ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳಲು ಸಚಿವರು ಸೂಚಿಸಿದ್ದಾರೆ. ಸಂಸ್ಥೆಗಳಲ್ಲಿ ಭದ್ರತಾ ಕ್ರಮಗಳನ್ನು ಅಧ್ಯಯನ ಮಾಡಲು ಮತ್ತು ಸರ್ಕಾರಕ್ಕೆ ಸಲಹೆಗಳನ್ನು ನೀಡಲು ಶಿಕ್ಷಣ ಇಲಾಖೆ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿದೆ. ಸಮಿತಿಯು ಭದ್ರತಾ ಅಂಶಗಳ ಆಳವಾದ ಅಧ್ಯಯನ ನಡೆಸಿ ಒಂದು ವಾರದೊಳಗೆ ತನ್ನ ವರದಿ ಸಲ್ಲಿಸಲಿದೆ. ವರದಿ ಆಧರಿಸಿ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಭದ್ರತೆ ಹೆಚ್ಚಿಸಲು ವಿಶೇಷ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಚಿವೆ ತಿಳಿಸಿದ್ದಾರೆ.

ಘಟನೆಯ ಹಿನ್ನೆಲೆ: ಹೈದರಾಬಾದ್ ನಗರದ ಬಂಜಾರ ಹಿಲ್ಸ್‌ನ ಶಾಲೆಯಲ್ಲಿ ನಾಲ್ಕು ವರ್ಷದ ಬಾಲಕಿ ಮೇಲೆ ಪ್ರಾಂಶುಪಾಲರ ಚಾಲಕ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಬೆಳಕಿಗೆ ಬಂದಿತ್ತು. 34 ವರ್ಷದ ಆರೋಪಿಯನ್ನು ಬಂಜಾರ ಹಿಲ್ಸ್ ಪೊಲೀಸರು ಔಪಚಾರಿಕವಾಗಿ ಬಂಧಿಸಿ ಸಿಟಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಶಾಲೆಯ ವಿದ್ಯಾರ್ಥಿಯೊಬ್ಬರ ಮೇಲೆ ಪದೇ ಪದೇ ಲೈಂಗಿಕ ದೌರ್ಜನ್ಯ ಎಸಗುತ್ತಿರುವ ಬಗ್ಗೆ ನಿರ್ಲಕ್ಷ್ಯ ವಹಿಸಿರುವ ಆರೋಪದ ಮೇಲೆ ಪ್ರಾಂಶುಪಾಲೆಯನ್ನೂ ಸಹ ಬಂಧಿಸಲಾಗಿತ್ತು.

ಹಲ್ಲೆಗೊಳಗಾದ ಬಳಿಕ ಬಾಲಕಿ ಅಳುತ್ತಾ ಮನೆಗೆ ಬಂದು ತನ್ನ ತಾಯಿಯ ಬಳಿ ನಡೆದ ದೌರ್ಜನ್ಯವನ್ನು ಬಹಿರಂಗಪಡಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಮರುದಿನ ಶಾಲೆಗೆ ಕರೆದೊಯ್ದಾಗ, ಬಾಲಕಿ ಆರೋಪಿಯತ್ತ ಬೊಟ್ಟು ಮಾಡಿ ತೋರಿಸಿದ್ದಾಳೆ. ಈ ಹಿನ್ನೆಲೆಯಲ್ಲಿ ಪೋಷಕರು ಬಂಜಾರ ಹಿಲ್ಸ್ ಪೊಲೀಸರಿಗೆ ದೂರು ನೀಡಿದ್ದು, ತಕ್ಷಣವೇ ಆರೋಪಿಯನ್ನು ಪೋಕ್ಸೋ ಕಾಯ್ದೆಯಡಿ ಮಂಗಳವಾರ ಬಂಧಿಸಲಾಗಿತ್ತು.

ಆರೋಪಿ ಮೂರು ತಿಂಗಳಿನಿಂದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಾ ಬಂದಿದ್ದಾನೆ. ಕೆಲವೊಮ್ಮೆ ಬಾಲಕಿಯನ್ನು ಅವಳ ತರಗತಿಯಿಂದ ಡಿಜಿಟಲ್​ ತರಗತಿಗೆ ಕರೆದೊಯ್ದು, ಬಟ್ಟೆಗಳನ್ನು ತೆಗೆದು ಮೈ ಮತ್ತು ಆಕೆಯ ಖಾಸಗಿ ಅಂಗಗಳನ್ನು ಮುಟ್ಟಿ ಕಿರುಕುಳ ನೀಡಿದ್ದಾನೆ. ಸೋಮವಾರ ಪ್ರಾಂಶುಪಾಲರ ಚೇಂಬರ್​ ಎದುರು ಇರುವ ಲ್ಯಾಬ್​ನಲ್ಲಿ ಈ ಘಟನೆ ನಡೆದಿತ್ತು. ಬಾಲಕಿಗೆ ಚಾಕೋಲೇಟ್​ ಆಮಿಷವೊಡ್ಡಿ ಆರೋಪಿ ಈ ಕೃತ್ಯಗಳನ್ನು ಮಾಡಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಪೊಲೀಸರು ತರಗತಿಯಲ್ಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಸಂಗ್ರಹಿಸಿದ್ದು, ತನಿಖೆ ಭಾಗವಾಗಿ ಅದರ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಬೇಸರ ವ್ಯಕ್ತಪಡಿಸಿರುವ ತೆಲಂಗಾಣ ರಾಜ್ಯಪಾಲೆ ತಮಿಳಿಸೈ ಸೌಂದರರಾಜನ್​ ಪ್ರಕರಣದ ವಿವರವಾದ ವರದಿ ನೀಡುವಂತೆ ಸೂಚಿಸಿದ್ದರು. ಘಟನೆಯಿಂದ ಆಕ್ರೋಶಗೊಂಡ ಶಾಲೆಯ ವಿದ್ಯಾರ್ಥಿಗಳ ಪೋಷಕರು ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಶಾಲಾ ಆವರಣಕ್ಕೆ ನುಗ್ಗಿದ್ದರು.

ಇದನ್ನೂ ಓದಿ: ಸಾಲಕ್ಕೆ ಪ್ರತಿಯಾಗಿ ಸಾಲಗಾರನ ಹೆಂಡತಿ ಕರೆದೊಯ್ದ ಮಾಲೀಕ: ಅಮಾನವೀಯ ಘಟನೆಗೆ ಸಾಕ್ಷಿಯಾದ ಕಡಪ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.