ETV Bharat / bharat

ಪಟಾಕಿ ಮಾರಾಟ ಸಂಪೂರ್ಣ ನಿಷೇಧ: ತೆಲಂಗಾಣ ಹೈಕೋರ್ಟ್ ಮಹತ್ವದ ಆದೇಶ

ಪಟಾಕಿ ಮಾರಾಟವನ್ನು ನಿಷೇಧಿಸುವಂತೆ ತೆಲಂಗಾಣ ಹೈಕೋರ್ಟ್ ಸರ್ಕಾರಕ್ಕೆ ನಿರ್ದೇಶನ ನೀಡಿದ್ದು, ಪಟಾಕಿಗಳನ್ನು ಖರೀದಿಸದಂತೆ ಸಾರ್ವಜನಿಕರಿಗೆ ಹೇಳಿದೆ.

Telangana HC bans sale of crackers in state on Diwali
ರಾಜ್ಯದಲ್ಲಿ ಪಟಾಕಿ ಮಾರಾಟ ಸಂಪೂರ್ಣ ನಿಷೇಧ
author img

By

Published : Nov 13, 2020, 7:29 AM IST

ಹೈದರಾಬಾದ್: ಕೋವಿಡ್​ -19 ಸಾಂಕ್ರಾಮಿಕ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪಟಾಕಿ ಮಾರಾಟ ಮಾಡುವುದನ್ನು ನಿಷೇಧಿಸಿ ತೆಲಂಗಾಣ ಹೈಕೋರ್ಟ್ ಗುರುವಾರ ಆದೇಶ ಹೊರಡಿಸಿದೆ.

ಚಂದ್ರ ಪ್ರಕಾಶ್ ಎಂಬುವರು ಸಲ್ಲಿಸಿದ್ದ ಪಿಐಎಲ್ ವಿಚಾರಣೆಗೆ ಹೈಕೋರ್ಟ್, ಪಟಾಕಿ ಮಾರಾಟವನ್ನು ನಿಷೇಧಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿದ್ದು, ಪಟಾಕಿಗಳನ್ನು ಖರೀದಿಸದಂತೆ ಸಾರ್ವಜನಿಕರಿಗೆ ಹೇಳಿದೆ. ಅಲ್ಲದೆ ಕೋವಿಡ್ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಹೈಕೋರ್ಟ್ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ಹಿರಿಯ ವಕೀಲ ಮಾಚಾರ್ಲಾ ರಂಗಯ್ಯ ತಿಳಿಸಿದ್ದಾರೆ.

ಈ ನಿಟ್ಟಿನಲ್ಲಿ ನವೆಂಬರ್ 19 ರಂದು ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರವನ್ನು ಕೋರಿದೆ ಎಂದು ವಕೀಲರು ಹೇಳಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.