ಹೈದರಾಬಾದ್ (ತೆಲಂಗಾಣ): ಟಿಆರ್‌ಎಸ್ ಶಾಸಕ ಖರೀದಿ ಯತ್ನ ಆರೋಪ ಪ್ರಕರಣದ ತನಿಖೆಗೆ ನವೆಂಬರ್ 4ರವರೆಗೆ ತಡೆಯಾಜ್ಞೆ ನೀಡಿ ತೆಲಂಗಾಣ ಹೈಕೋರ್ಟ್ ಶನಿವಾರ ಆದೇಶಿಸಿದೆ. ಈ ಪ್ರಕರಣದ ಕುರಿತು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಬಿಜೆಪಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಏಕಸದಸ್ಯ ಪೀಠ ಈ ಮಧ್ಯಂತರ ಆದೇಶ ನೀಡಿದೆ.
ಶಾಸಕರ ಖರೀದಿ ಆರೋಪ ಪ್ರಕರಣದಲ್ಲಿ ಪ್ರಾಥಮಿಕ ಅಥವಾ ಸಾಂದರ್ಭಿಕ ಪುರಾವೆಗಳಿಲ್ಲದೆ ಟಿಆರ್‌ಎಸ್ ನಾಯಕರು ಬಿಜೆಪಿ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಆದ್ದರಿಂದ ನಿಷ್ಪಕ್ಷಪಾತ ತನಿಖೆಗಾಗಿ ಈ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಬೇಕೆಂದು ಬಿಜೆಪಿ ಹೈಕೋರ್ಟ್‌ಗೆ ಮೊರೆ ಹೋಗಿದೆ.
ನ್ಯಾಯಮೂರ್ತಿ ಬಿ.ವಿಜಯ್ಸೇನ್ ರೆಡ್ಡಿ ಅವರು ಈ ಅರ್ಜಿ ವಿಚಾರಣೆ ನಡೆಸಿ, ರಾಜ್ಯ ಸರ್ಕಾರ ಮತ್ತು ಇತರ ಪ್ರತಿವಾದಿಗಳಿಗೆ ನವೆಂಬರ್ 4ರೊಳಗೆ ಪ್ರತಿಕ್ರಿಯೆ ದಾಖಲಿಸುವಂತೆ ಹೇಳಿ ತನಿಖೆಗೆ ತಡೆ ನೀಡಿದ್ದಾರೆ ಎಂದು ಅರ್ಜಿದಾರರ ಪರ ವಕೀಲ ರಚನಾ ರೆಡ್ಡಿ ತಿಳಿಸಿದ್ದಾರೆ.
ಇದನ್ನೂ ಓದಿ: ಟಿಆರ್‌ಎಸ್ ಶಾಸಕರ ಖರೀದಿ ಯತ್ನ ಕೇಸ್ : ವಿಶೇಷ ಕೋರ್ಟ್ ಆದೇಶದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಪೊಲೀಸರು