ಹೈದರಾಬಾದ್ : ಲಸಿಕೆ ಕೊರತೆ ಹಿನ್ನೆಲೆಯಲ್ಲಿ ಕೋವಾಕ್ಸಿನ್ ವಿತರಣೆಯನ್ನು ಸ್ಥಗಿತಗೊಳಿಸುವುದಾಗಿ ತೆಲಂಗಾಣದ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.
ಸಾರ್ವಜನಿಕ ಆರೋಗ್ಯ ನಿರ್ದೇಶಕ ಜಿ.ಶ್ರೀನಿವಾಸ ರಾವ್ ಮಾತನಾಡಿ, "ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಅಸಮರ್ಪಕ ಸಂಗ್ರಹಣೆ ಮತ್ತು ವಿತರಣೆಯಿಂದ ಲಸಿಕೆ ಕೊರತೆ ಉಂಟಾಗಿದೆ.
ಈ ಹಿನ್ನೆಲೆಯಲ್ಲಿ 45 ವರ್ಷಕ್ಕಿಂತ ಮೇಲ್ಪಟ್ಟ ವ್ಯಕ್ತಿಗಳಿಗೆ ಎರಡನೇ ಡೋಸ್ ಲಸಿಕೆ ನೀಡುವುದನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ" ಎಂದು ಹೇಳಿದ್ದಾರೆ.
ವ್ಯಾಕ್ಸಿನೇಷನ್ ಪುನಾರಂಭದ ಬಗ್ಗೆ ಮುಂಬರುವ ದಿನಗಳಲ್ಲಿ ಮಾಹಿತಿ ನೀಡಲಾಗುವುದು. ಸದ್ಯ ಎರಡು ವಾರಗಳವರೆಗೆ 45 ವರ್ಷಕ್ಕಿಂತ ಮೇಲ್ಪಟ್ಟ ಜನರಿಗೆ ವ್ಯಾಕ್ಸಿನೇಷನ್ ನೀಡಲಾಗುವುದಿಲ್ಲ ಎಂದು ಹೇಳಿದ್ದಾರೆ.
ಇನ್ನು, ಕೇಂದ್ರದಿಂದ ಸಾಕಷ್ಟು ಪ್ರಮಾಣದಲ್ಲಿ ಲಸಿಕೆ ಸರಬರಾಜು ಆಗದ ಹಿನ್ನೆಲೆಯಲ್ಲಿ 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮೊದಲ ಡೋಸ್ ಲಸಿಕೆ ನೀಡುವುದನ್ನು ಸಹ ಸ್ಥಗಿತಗೊಳಿಸಿದೆ.
ಮೇ 14ರಂದು ಆರೋಗ್ಯ ಅಧಿಕಾರಿಗಳು ಸುಮಾರು 34,000 ಲಸಿಕೆಗಳನ್ನು ನೀಡಿದ್ದರು. ರಾಜ್ಯವು ಈವರೆಗೆ 56,25,920 ಡೋಸ್‌ಗಳನ್ನು ನೀಡಿದೆ. ಒಟ್ಟು 11.37 ಲಕ್ಷ ಫಲಾನುಭವಿಗಳು ಎರಡನೇ ಡೋಸ್ ಪಡೆದಿದ್ದಾರೆ.