ಹೈದರಾಬಾದ್(ತೆಲಂಗಾಣ): ಪ್ರವಾದಿ ಮಹಮ್ಮದರ ಕುರಿತು ವಿವಾದಿತ ಹೇಳಿಕೆ ನೀಡಿ ಬಿಜೆಪಿ ಹೈಕಮಾಂಡ್ನಿಂದ ಅಮಾನತುಗೊಂಡಿರುವ ತೆಲಂಗಾಣ ಬಿಜೆಪಿ ಶಾಸಕ ರಾಜಾ ಸಿಂಗ್ ಅವರನ್ನು ಇಲ್ಲಿನ ಪೊಲೀಸರು ಇಂದು ಮತ್ತೆ ಬಂಧಿಸಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ತಮ್ಮ ವಿವಾದಿತ ಹೇಳಿಕೆ ವಿಚಾರವಾಗಿ ಕೋರ್ಟ್ನಿಂದ ಜಾಮೀನು ಪಡೆದುಕೊಂಡು ಹೊರಬಂದಿದ್ದ ರಾಜಾ ಸಿಂಗ್ ಅವರನ್ನು ಭಾರಿ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಮತ್ತೊಮ್ಮೆ ಬಂಧಿಸಿದ್ದಾರೆ.
-
#WATCH | Telangana police arrests suspended BJP leader T Raja Singh from his residence in Hyderabad for his alleged remarks against Prophet Muhammad.
— ANI (@ANI) August 25, 2022 " class="align-text-top noRightClick twitterSection" data="
Massive protests had taken place on August 23, against the leader for his alleged statement. pic.twitter.com/PzwxHWHcY8
">#WATCH | Telangana police arrests suspended BJP leader T Raja Singh from his residence in Hyderabad for his alleged remarks against Prophet Muhammad.
— ANI (@ANI) August 25, 2022
Massive protests had taken place on August 23, against the leader for his alleged statement. pic.twitter.com/PzwxHWHcY8#WATCH | Telangana police arrests suspended BJP leader T Raja Singh from his residence in Hyderabad for his alleged remarks against Prophet Muhammad.
— ANI (@ANI) August 25, 2022
Massive protests had taken place on August 23, against the leader for his alleged statement. pic.twitter.com/PzwxHWHcY8
ರಾಜಾ ಸಿಂಗ್ ವಿರುದ್ಧ ದಾಖಲಾಗಿರುವ ಹಳೆಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ ಎನ್ನಲಾಗ್ತಿದೆ. ಹೈದರಾಬಾದ್ನ ಅವರ ನಿವಾಸದಿಂದಲೇ ಅವರನ್ನು ಅರೆಸ್ಟ್ ಮಾಡಲಾಯಿತು.
ಟಿ ರಾಜಾ ಸಿಂಗ್ ವಿರುದ್ಧ ಈ ವರ್ಷದ ಫೆಬ್ರವರಿ ಮತ್ತು ಏಪ್ರಿಲ್ ತಿಂಗಳಲ್ಲಿ ದಾಖಲಾದ ಎರಡು ಪ್ರಕರಣಗಳಿಗೆ ಸಂಬಂಧಿಸಿದಂತೆ ಆಗಸ್ಟ್ 24ರಂದು ನೋಟಿಸ್ ಜಾರಿ ಮಾಡಲಾಗಿತ್ತು. ಫೆಬ್ರವರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ್ದ ರಾಜಾ ಸಿಂಗ್, ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು. ಹೀಗಾಗಿ, ಅವರ ವಿರುದ್ಧ ದೂರು ದಾಖಲಾಗಿತ್ತು. ಇದಾದ ಬಳಿಕ ಏಪ್ರಿಲ್ನಲ್ಲಿ ಶೋಭಾಯಾತ್ರೆಯಲ್ಲಿ ಭಾಗಿಯಾಗಿದ್ದಾಗ ಪ್ರಚೋದನಕಾರಿ ಭಾಷಣ ಮಾಡಿದ್ದರು. ಎಐಎಂಐಎಂ ಪಕ್ಷದ ಮುಖಂಡರು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು. ಈ ಹಿನ್ನೆಲೆಯಲ್ಲೂ ಪೊಲೀಸರು ಕೇಸು ದಾಖಲಿಸಿಕೊಂಡಿದ್ದರು.
ಇದಾದ ಬಳಿಕ, ಪ್ರವಾದಿ ಮೊಹಮ್ಮದ್ ಪೈಗಂಬರ್ ಕುರಿತಾಗಿ ವಿವಾದಿತ ಹೇಳಿಕೆ ನೀಡಿದ್ದ ಆರೋಪದಲ್ಲಿ ಆಗಸ್ಟ್ 23ರಂದು ಟಿ ರಾಜಾ ಸಿಂಗ್ ಬಂಧನಕ್ಕೊಳಗಾಗಿದ್ದರು. ಘಟನೆಯ ಬೆನ್ನಲ್ಲೇ ಎಚ್ಚೆತ್ತುಕೊಂಡ ಬಿಜೆಪಿ ವರಿಷ್ಠರು ಕಠಿಣ ಕ್ರಮ ತೆಗೆದುಕೊಂಡು ಪಕ್ಷದಿಂದ ಅಮಾನತು ಮಾಡಿದ್ದರು.
ಇದನ್ನೂ ಓದಿ: ಬಿಜೆಪಿ ಶಾಸಕ ರಾಜಾ ಸಿಂಗ್ಗೆ ಷರತ್ತುಗಳಿಲ್ಲದೆ 45 ನಿಮಿಷದಲ್ಲೇ ಸಿಕ್ತು ಜಾಮೀನು
ತಮ್ಮ ಬಂಧನ ಪ್ರಶ್ನಿಸಿದ ರಾಜಾ ಸಿಂಗ್ ಕೋರ್ಟ್ ಮೆಟ್ಟಿಲೇರಿದ್ದರು. ಜಾಮೀನು ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಯಾವುದೇ ಷರತ್ತುಗಳಿಲ್ಲದೆ ಕೇವಲ 45 ನಿಮಿಷಗಳಲ್ಲಿ ಜಾಮೀನು ಮಂಜೂರು ಮಾಡಿತ್ತು. ಜೊತೆಗೆ ತಕ್ಷಣವೇ ಬಿಡುಗಡೆ ಮಾಡುವಂತೆಯೂ ಪೊಲೀಸರಿಗೆ ಆದೇಶಿಸಿತ್ತು. ಕೋರ್ಟ್ ಎದುರು ದೊಡ್ಡ ಮಟ್ಟದ ಪ್ರತಿಭಟನೆ ನಡೆದು ಪೊಲೀಸರು ಲಾಠಿ ಪ್ರಹಾರವನ್ನೂ ನಡೆಸಿದ್ದರು.