ETV Bharat / bharat

TSPSC ಪೇಪರ್ ಸೋರಿಕೆ ಪ್ರಕರಣ; ಮಹಿಳಾ ಕಾನ್ಸ್​​ಟೇಬಲ್​ಗೆ ಕಪಾಳಮೋಕ್ಷ, ವೈಎಸ್ ಶರ್ಮಿಳಾ ವಶಕ್ಕೆ - ವೈಎಸ್ ಶರ್ಮಿಳಾ ವಶಕ್ಕೆ

ಮಹಿಳಾ ಕಾನ್ಸ್​ಟೇಬಲ್​ಗೆ ಕಪಾಳಮೋಕ್ಷ ಮಾಡಿದ ಆರೋಪದ ಮೇಲೆ ವೈಎಸ್‌ಆರ್ ತೆಲಂಗಾಣ ಪಕ್ಷದ ಅಧ್ಯಕ್ಷೆ ವೈಎಸ್ ಶರ್ಮಿಳಾ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ys
ವೈಎಸ್ ಶರ್ಮಿಳಾ ಬಂಧನ
author img

By

Published : Apr 24, 2023, 5:26 PM IST

ಹೈದರಾಬಾದ್ (ತೆಲಂಗಾಣ): ಮಹಿಳಾ ಪೊಲೀಸ್​ ಕಾನ್ಸ್​​ಟೇಬಲ್​ವೊಬ್ಬರಿಗೆ ಕಪಾಳಮೋಕ್ಷ ಮಾಡಿದ ಆರೋಪದ ಮೇಲೆ ವೈಎಸ್‌ಆರ್ ತೆಲಂಗಾಣ ಪಕ್ಷದ ಅಧ್ಯಕ್ಷೆ ವೈಎಸ್ ಶರ್ಮಿಳಾ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಟಿಎಸ್‌ಪಿಎಸ್‌ಸಿ ಪೇಪರ್ ಸೋರಿಕೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಕಚೇರಿಗೆ ವೈಎಸ್ ಶರ್ಮಿಳಾ ತೆರಳುತ್ತಿದ್ದಾಗ ಪೊಲೀಸರು ತಡೆದಿದ್ದಾರೆ. ಈ ವೇಳೆ ಅಧ್ಯಕ್ಷೆ ವೈಎಸ್ ಶರ್ಮಿಳಾ ಅವರು ಮಹಿಳಾ ಪೊಲೀಸ್​ವೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಾರೆ.

ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಶರ್ಮಿಳಾ ವಿರುದ್ಧ ಬಂಜಾರಾಹಿಲ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುವ ಸಾಧ್ಯತೆ ಇದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಟಿಎಸ್‌ಪಿಎಸ್‌ಸಿ ಪೇಪರ್ ಸೋರಿಕೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಕಚೇರಿಗೆ ತೆರಳಲು ಜುಬಿಲಿ ಹಿಲ್ಸ್‌ನ ಲೋಟಸ್ ಪಾಂಡ್‌ನಲ್ಲಿರುವ ಅವರ ನಿವಾಸದಿಂದ ಹೊರಡುವ ಸಂದರ್ಭದಲ್ಲಿ ಪೊಲೀಸರು ಶರ್ಮಿಳಾ ಅವರನ್ನು ತಡೆದಿದ್ದಾರೆ. ಇದರಿಂದ ಶರ್ಮಿಳಾ ಪೊಲೀಸರೊಂದಿಗೆ ವಾಗ್ವಾದಕ್ಕಿಳಿದಿದ್ದರು. ತನ್ನನ್ನು ಮನೆಯಿಂದ ಹೊರಗೆ ಹೋಗದಂತೆ ಏಕೆ ತಡೆಯಲಾಗುತ್ತಿದೆ ಎಂದು ಕೇಳಿದ್ದಾರೆ. ಆದರೆ ಪೊಲೀಸರು ಕಾರಿನೊಳಗೆ ಹೋಗದಂತೆ ಶರ್ಮಿಳಾರನ್ನು ತಡೆಯಲು ಮುಂದಾದಾಗ ಅವರು ಮಹಿಳಾ ಕಾನ್ಸ್​​ಟೇಬಲ್​ಗೆ ಕಪಾಳಮೋಕ್ಷ ಮಾಡಿದ್ದಾರೆ ಎಂಬ ಆರೋಪದಡಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಬಿಜೆಪಿ ನಾಯಕ ಮಿಥುನ್​ ಚಕ್ರವರ್ತಿ ಒಡಿಶಾ ಭೇಟಿ: ಹುತಾತ್ಮ ಯೋಧನಿಗೆ ಶ್ರದ್ಧಾಂಜಲಿ ಸಲ್ಲಿಸಿದ ನಟ

ಈ ಘಟನೆ ನಂತರ ಶರ್ಮಿಳಾ ಪೊಲೀಸರೊಂದಿಗೆ ಜಗಳವಾಡುವ ವಿಡಿಯೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗ್ತಿವೆ. ಇದಾದ ಬಳಿಕ ಪೊಲೀಸರು ಅವರನ್ನು ವಶಕ್ಕೆ ಪಡೆದು ಜುಬಿಲಿ ಹಿಲ್ಸ್ ಠಾಣೆಗೆ ಕರೆದೊಯ್ದಿದ್ದಾರೆ. ಪೊಲೀಸರ ಮೇಲೆ ಕೋಪಗೊಂಡ ಶರ್ಮಿಳಾ, ರಾಜ್ಯದಲ್ಲಿ ಪ್ರಜಾಪ್ರಭುತ್ವ ಇಲ್ಲ, ಸಾಮಾನ್ಯ ಜನರಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಮಾತನಾಡಲು ನ್ಯಾಯಾಲಯದ ಅನುಮತಿ ಅಗತ್ಯವಿದೆಯೇ ಎಂದು ಪ್ರಶ್ನಿಸಿದ್ದಾರೆ.

ಜೊತೆಗೆ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರು ವೈಎಸ್ ರಾಜಶೇಖರ್ ರೆಡ್ಡಿ ಅವರ ಮಗಳಿಗೆ (ವೈಎಸ್ ಶರ್ಮಿಳಾ) ಹೆದರುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಕೆಸಿಆರ್ ಅವರು ಟಿಎಸ್‌ಪಿಎಸ್‌ಸಿ ಪೇಪರ್ ಸೋರಿಕೆ ಪ್ರಕರಣದ ಕುರಿತು ನಿಜವಾಗಿಯೂ ಗಂಭೀರವಾಗಿದ್ದರೆ ಪತ್ರಿಕೆ ಸೋರಿಕೆ ಕುರಿತು ಸಿಬಿಐ ತನಿಖೆಗೆ ಆದೇಶಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ತಮಿಳುನಾಡಿನ ರಿಯಲ್ ಎಸ್ಟೇಟ್ ಸಂಸ್ಥೆ ಜಿ ಸ್ಕ್ವೇರ್ ರಿಯಲ್ಟರ್ಸ್ ಮೇಲೆ ಐಟಿ ದಾಳಿ

ವೈಎಸ್ ಶರ್ಮಿಳಾ ಅವರನ್ನು ಪೊಲೀಸರು ವಶಕ್ಕೆ ಪಡೆದಿರುವುದು ಹೊಸತೇನಲ್ಲ. ಕಳೆದ ಕೆಲವು ತಿಂಗಳುಗಳಲ್ಲಿ ಶರ್ಮಿಳಾ ಅವರನ್ನು ಹಲವು ಬಾರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇತ್ತೀಚಿನ TSPSC ಪತ್ರಿಕೆ ಸೋರಿಕೆಯನ್ನು ವಿರೋಧಿಸಿ ತೆಲಂಗಾಣ ಲೋಕಸೇವಾ ಆಯೋಗದ ಕಚೇರಿಗೆ ಮುತ್ತಿಗೆ ಹಾಕಲು ಹೋದಾಗ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದರು. ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ವ್ಯಾಪಕ ಪ್ರತಿಭಟನೆ ನಡೆಯುತ್ತಿದ್ದು, ಈ ಸಂಬಂಧ ಇದುವರೆಗೆ 111 ಜನರನ್ನು ಬಂಧಿಸಲಾಗಿದೆ.

ಇದನ್ನೂ ಓದಿ: ಮಮತಾ, ಅಖಿಲೇಶ್ ಭೇಟಿ ಮಾಡಿ ಒಗ್ಗಟ್ಟಿನ ಮಂತ್ರ ಪಠಿಸಲಿರುವ ನಿತೀಶ್ ಕುಮಾರ್..!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.